PM KISAN: ರೈತರಿಗೆ ಮತ್ತೆ ಗುಡ್‌ನ್ಯೂಸ್‌, eKYC ಮಾಡದಿದ್ದರೆ ಹಣ ಖಾತೆಗೆ ಬರಲ್ಲ, ಹೀಗೆ ಆಧಾರ್ ಲಿಂಕ್ ಮಾಡಿ!

* ರೈತರಿಗೆಂದೇ ಪ್ರಾರಂಭಿಸಲಾದ ಕಿಸಾನ್ ಸಮ್ಮಾನ್ ನಿಧಿ ಯೋಜನೆ

* ಮೇ ತಿಂಗಳ ಅಂತ್ಯದಲ್ಲಿ ಹಣ ಖಾತೆ ಸೇರುವ ಸಾಧ್ಯತೆ

* ಗುಡ್‌ನ್ಯೂಸ್‌, eKYC ಮಾಡದಿದ್ದರೆ ಹಣ ಖಾತೆಗೆ ಬರಲ್ಲ

PM KISAN 11th Installment by May end eKYC Mandatory to Get Money How to Do It pod

ನವದೆಹಲಿ(ಮೇ.21): ದೇಶದ ರೈತರ ಏಳಿಗೆಗಾಗಿ ಮತ್ತು ಅವರ ಅಗತ್ಯಗಳನ್ನು ಪೂರೈಸುವ ಸಲುವಾಗಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಬಗ್ಗೆ ಶುಭ ಸಮಾಚಾರ ಲಭಿಸಿದೆ. ಅದರ 11 ನೇ ಕಂತನ್ನು ಮೇ 31 ರಂದು ವರ್ಗಾಯಿಸುವ ಸಾಧ್ಯತೆಗಳಿವೆ. ಈ ಸಮ್ಮಾನ್ ನಿಧಿಯಡಿ ದೇಶದ ಲಕ್ಷಾಂತರ ರೈತರಿಗೆ ಆರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ. ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಆಯೋಜಿಸಲಾಗಿದ್ದ ಕೃಷಿ ಕಾರ್ಯಕ್ರಮದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ಈ ವಿಷಯ ತಿಳಿಸಿದ್ದಾರೆ. ಕೃಷಿ ಸಚಿವಾಲಯದ ಮೂಲಗಳ ಪ್ರಕಾರ, ದೇಶದಾದ್ಯಂತ 12.5 ಕೋಟಿ ರೈತರು ಪಿಎಂ ಕಿಸಾನ್ ನಿಧಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯನ್ನು ಪಡೆಯಲು ಇ-ಕೆವೈಸಿ ಅಗತ್ಯ. ಆದ್ದರಿಂದ ರೈತರು ಕೂಡಲೇ ಅದನ್ನು ಮಾಡಿಸಬೇಕು, ಆಗ ಮಾತ್ರ ಅವರ ಖಾತೆಗೆ ಹಣ ವರ್ಗಾವಣೆಯಾಗಲಿದೆ. ರೈತರು ಮೇ 31, 2022 ರವರೆಗೆ ಇ-ಕೆವೈಸಿ ಮಾಡಬಹುದು.

ರೈತರಿಗೆ ಪ್ರಮುಖ ಮಾಹಿತಿ

ಈ ಹಿಂದೆ ಏಪ್ರಿಲ್-ಜುಲೈ ಕಂತು ಏಪ್ರಿಲ್ 1 ರಿಂದ ಜುಲೈ 31 ರ ನಡುವೆ, ಆಗಸ್ಟ್-ನವೆಂಬರ್ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರ ನಡುವೆ, ಡಿಸೆಂಬರ್-ಮಾರ್ಚ್ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರ ನಡುವೆ ವರ್ಗಾವಣೆಯಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತಿನಲ್ಲಿ ಹಣ ಬಿಡುಗಡೆಯಾಗುತ್ತದೆ.

PM ಕಿಸಾನ್ ಟೋಲ್ ಫ್ರೀ ಸಂಖ್ಯೆ: 18001155266
ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ:155261
PM ಕಿಸಾನ್ ಸ್ಥಿರ ದೂರವಾಣಿ ಸಂಖ್ಯೆಗಳು: 011-23381092, 23382401
ಸಹಾಯವಾಣಿ: 011-24300606
ಸಹಾಯವಾಣಿ: 0120-6025109
ಇ-ಮೇಲ್ ಐಡಿ: pmkisan-ict@gov.in

eKYC ಮಾಡೋದು ಹೇಗೆ? ಇಲ್ಲಿದೆ ಪ್ರಕ್ರಿಯೆ

ಹಂತ 1- ಮೊದಲು pmkisan.gov.in ಮೂಲಕ ಪಿಎಂ ಕಿಸಾನ್ ಯೋಜನೆಯ ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2- ನಂತರ ಮುಖಪುಟದ ಬಲಭಾಗದಲ್ಲಿರುವ ಇ-ಕೆವೈಸಿ ಲಿಂಕ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 3- ನಂತರ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಮತ್ತು ಸರ್ಚ್‌ ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ 4- ನಂತರ ಅದನ್ನು ಪರಿಶೀಲಿಸಲು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಸಂಪರ್ಕಗೊಂಡಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಲು ಕೇಳಲಾಗುತ್ತದೆ.

ಹಂತ 5- ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆಯಲು ಕ್ಲಿಕ್ ಮಾಡಿ. ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಕೇಳಿದ ಸ್ಥಳದಲ್ಲಿ OTP ಅನ್ನು ನಮೂದಿಸಿ.

ಹಂತ 6- ನಂತರ ಆಧಾರ್ ದೃಢೀಕರಣಗೊಳಿಸಲು ಇರುವ ಆಯ್ಕೆಯನ್ನು ಕ್ಲಿಕ್ ಮಾಡಿ.

ಹಂತ 7- ಬಳಿಕ ನಿಮ್ಮ ಫೋನ್‌ಗೆ ಬಂದ OTPಯನ್ನು ನಮೂದಿಸಿ.

ಹಂತ 8- ಇದರ ನಂತರ, ನೀವು ಕೇಳಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿದರೆ ಇ-ಕೆವೈಸಿ ಪೂರ್ಣಗೊಳಿಸುವಿಕೆಯ ಸಂದೇಶ ಸಿಗುತ್ತದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಗ್ಗೆ ಕೆಲ ಪ್ರಮುಖ ವಿಚಾರಗಳು
 
ಪಿಎಂ-ಕಿಸಾನ್ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇದು ಫೆಬ್ರವರಿ 24, 2019 ರಂದು ಪ್ರಾರಂಭವಾಯಿತು. ಈ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್‌ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (SMFs) ಉದ್ದೇಶಿಸಲಾಗಿತ್ತು, ಆದರೆ 01.06.2019 ರಿಂದ ಜಾರಿಗೆ ಬರುವಂತೆ, ಎಲ್ಲಾ ಭೂಹಿಡುವಳಿ ರೈತರನ್ನು ಒಳಗೊಳ್ಳಲು ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಯಿತು. ಯೋಜನೆಯ ಪ್ರಕಾರ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ರೂ.6000/- ಆರ್ಥಿಕ ಲಾಭವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ದೇಶಾದ್ಯಂತದ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, ಫೆಬ್ರವರಿ 22, 2022 ರವರೆಗೆ ಸುಮಾರು 11.78 ಕೋಟಿ ರೈತರಿಗೆ ಪ್ರಯೋಜನಗಳನ್ನು ಒದಗಿಸಲಾಗಿದೆ. ಭಾರತದಾದ್ಯಂತ ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ವಿವಿಧ ಕಂತುಗಳಲ್ಲಿ 1.82 ಲಕ್ಷ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ 1.29 ಲಕ್ಷ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

Latest Videos
Follow Us:
Download App:
  • android
  • ios