ಬೋಟ್ ದುರಂತದಲ್ಲಿ ಮಡಿದ ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ!
ಶಾಲಾ ಪ್ರವಾಸದಲ್ಲಿ ನಡೆದ ದೋಣಿ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಕುಟುಂಬಕ್ಕೆ ಸಂತಾಪ ಸೂಚಿಸಿದ ಮೋದಿ, ಮಡಿದ ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ ಹಾಗೂ ಗಾಯಗೊಂಡು ವಿದ್ಯಾರ್ಥಿಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ವಡೋದರ(ಜ.18) ಖಾಸಗಿ ಶಾಲಾ ವಿದ್ಯಾರ್ಥಿಗಳ ಪ್ರವಾಸದಲ್ಲಿ ನಡೆದ ದುರಂತ ದೇಶವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿಗಳು ಶಾಲಾ ಶಿಕ್ಷಕರು ಸೇರಿ 27 ಮಂದಿಯಿಂದ ಬೋಟ್ ಗುಜರಾತ್‌ನ ವಡೋದರದ ಹರ್ನಿ ಸರೋವರದಲ್ಲಿ ಮಗುಚಿದೆ. ಈ ದುರಂತದಲ್ಲಿ 10 ವಿದ್ಯಾರ್ಥಿಗಳು ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, 10 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಈ ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲ ಸೂಕ್ತ ಚಿಕಿತ್ಸೆ ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಎಲ್ಲಾ ನೆರವು ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸೂಚಿಸಿದ್ದಾರೆ.
ವಡೋದರದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೀರಾಪಾಲಾಗಿರುವ ಸುದ್ದಿ ತಿಳಿದಿ ತೀವ್ರ ಬೇಸರವಾಗಿದೆ. ಈ ದುಃಖದ ಸಂದರ್ಭದಲ್ಲಿ ನನ್ನ ಪಾರ್ಥನೆ ಮೃತ ವಿದ್ಯಾರ್ಥಿಗಳ ಕುಟುಂಬದೊಂದಿಗೆ ಇದೆ. ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ಎಲ್ಲಾ ನೆರವು ನೀಡುತ್ತಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡಾಗುತ್ತದೆ ಎಂದು ಮೋದಿ ಹೇಳಿದ್ದಾರೆ.
ಶಾಲಾ ಪ್ರವಾಸದಲ್ಲಿ ಭೀಕರ ಬೋಟ್ ದುರಂತ; 27 ವಿದ್ಯಾರ್ಥಿಗಳ ಪೈಕಿ 13 ಮಂದಿ ಮೃತ, ಹಲವರು ನಾಪತ್ತೆ!
ಹರ್ನಿ ಸರೋವರಕ್ಕೆ ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳನ್ನು ಒಂದೇ ಬೋಟ್‌ನಲ್ಲಿ ಕೂರಿಸಿ ಸರೋವರಕ್ಕೆ ಕರೆದುಕೊಂಡು ಹೋಗಲಾಗಿದೆ. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ದೋಣಿಯಲ್ಲಿ ಕೂರಿಸಿ ಸರೋವರದಲ್ಲಿ ತೆರಳಿದ ಕಾರಣ ಈ ದುರಂತ ಸಂಭವಿಸಿದೆ. ನಿಯಮ ಮೀರಿ ಹ27 ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಒಂದೇ ದೋಣಿಯಲ್ಲಿ ಕರೆದುಕೊಂಡು ಹೋಗಲಾಗಿದೆ. ಇದರ ಜೊತೆ ಯಾರೊಬ್ಬರಿಗೆ ಲೈಫ್ ಜಾಕೆಟ್ ನೀಡದೆ ನಿರ್ಲಕ್ಷ್ಯವಹಿಸಿದ್ದಾರೆ. ಇದರಿಂದ ಈ ಭೀಕರ ದುರಂತ ನಡೆದಿದೆ.
ದೋಣಿ ದುರಂತ ಸುದ್ದಿಯಿಂದ ತೀವ್ರ ದುಃಖವಾಗಿದೆ. ಮಕ್ಕಳು ಹಾಗೂ ಶಿಕ್ಷಕರನ್ನು ಕಳೆದುಕೊಂಡ ಕುಟುಂಬಸ್ಥರ ಜೊತೆ ಸರ್ಕಾರ ನಿಲ್ಲಲಿದೆ. ಮೃತರ ಕುಟಂಬಕ್ಕೆ ಸಂತಾಪಗಳು. ಈ ನೋವಿನಿಂದ ಹೊರಬರಲು ಹಾಗೂ ದುಖವನ್ನು ತಡೆದುಕೊಳ್ಳಲು ಕುಟುಂಬಕ್ಕೆ ಭಗವಂತ ಶಕ್ತಿ ನೀಡಲಿ. ಸ್ಥಳೀಯ ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಮಲ್ಪೆ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 8 ಮೀನುಗಾರರ ರಕ್ಷಣೆ