Hubballi Accident ಹುಬ್ಬಳ್ಳಿ ಅಪಘಾತದಲ್ಲಿ ಮಡಿದ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ!

  • ಬಾಡಾ ಗ್ರಾಮದಲ್ಲಿ ನಡೆದಿದ್ದ ಭೀಕರ ಅಪಘಾತ
  • 9 ಮಂದಿ ಮೃತ, 20ಕ್ಕೂ ಹೆಚ್ಚು ಮಂದಿ ಗಾಯ
  • ಮೃತ ಹಾಗೂ ಗಾಯಗೊಂಡವರಿಗೆ ಪ್ರಧಾನಿ ಪರಿಹಾರ
PM Modi announces ex gratia of Rs 2 lakh each for kin of those who died in  Hubballi Road Accident Karnataka ckm

ನವದೆಹಲಿ(ಮೇ.24): ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ. ಕ್ರೂಸರ್‌ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಮೋದಿ ಮೃತರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ದುರ್ಘಟನೆ ತೀವ್ರ ನೋವು ತಂದಿದೆ. ಈ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖದ ವಿಚಾರ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಧಾರವಾಡಕ್ಕೆ ವಕ್ಕರಿಸಿದ ಶನಿಕಾಟ: ಕುಡುಕ ಚಾಲಕನ ಅವಾಂತರಕ್ಕೆ 8 ಮಂದಿ ಬಲಿ

ಹುಬ್ಬಳ್ಳಿ ಧಾರವಾಡ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಡಿದವರ ಕುಟುಬಂಕ್ಕೆ ಈಗಾಗಲೇ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಾಡಿರುವ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿರುವುದಾಗಿ ತಿಳಿಸಿದ್ದಾರೆ.

 

 

 

 

ಅಪಘಾತದಲ್ಲಿ ಈ ವರೆಗೆ 9 ಜನ ಮೃತಪಟ್ಟಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಈ ಕುಟುಂಬಕ್ಕೆ ಆಗಿರುವ ದುರ್ಘಟನೆ ನಿಜಕ್ಕೂ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಮೃತರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖವಾಗಲಿ ಎಂದು ಜೋಶಿ ಪ್ರಾರ್ಥಿಸಿದ್ದಾರೆ.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಜೋಶಿ
ಧಾರವಾಡ ತಾಲೂಕಿನ ಬಾಡ ಕ್ರಾಸ್‌ ಬಳಿ ಮರಕ್ಕೆ ಕ್ರೂಷರ್‌ ಡಿಕ್ಕಿ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆಗೆ ಕಿಮ್ಸ್‌ಗೆ ದಾಖಲಾದವರ ಆರೋಗ್ಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಸಂಜೆ ವಿಚಾರಿಸಿದರು.

ಸಾಮಾನ್ಯ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿರ್ಮಲಾ ದಾಸನಕೊಪ್ಪ, ಸಾಗರ ದಾಸನಕೊಪ್ಪ, ಆಕಾಂಕ್ಷಾ ಹುತ್ತಮಲ್ಲವರ, ಮಂಜುಳಾ ಮರಿಗೌಡರ, ಜಯಶ್ರೀ ಹುತ್ತಮಲ್ಲವರ, ಮಹಾದೇವಿ ಹುಲ್ಮನಿ ಹಾಗೂ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿರುವ ಆರಾಧ್ಯ ಹುತ್ತಮಲ್ಲವರ, ಮುತ್ತು ಮರಿಗೌಡರ ಅವರ ಆರೋಗ್ಯ ವಿಚಾರಿಸಿದ ಸಚಿವರು, ಕುಟುಂಬದವರು ಹಾಗೂ ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಯೊಂದಿಗೆ ಚರ್ಚಿಸಿದರು.

ಬ್ರಿಗೇಡ್‌ ರಸ್ತೆ ಶಾಪಿಂಗ್‌ ಕಾಂಪ್ಲೆಕ್ಸ್‌ ಮೇಲಿಂದ ಬಿದ್ದು ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದ ವೇಳೆ ನಡೆದಿರುವ ಅಪಘಾತ ದೊಡ್ಡ ದುರಂತವಾಗಿದೆ. 9 ಜನರು ಮೃತಪಟ್ಟಿದ್ದು, 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಿಗೆ ಸಂಪೂರ್ಣ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ನಿರ್ದೇಶಕರಿಗೆ ಸೂಚಿಸಿದ್ದೇನೆ. ಶನಿವಾರ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೆ. ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಪ್ರಮುಖರಾದ ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ರೂಪಾ ಶೆಟ್ಟಿ, ರಂಗಾ ಬದ್ದಿ, ಪ್ರಭು ನವಲಗುಂದಮಠ ಹಾಗೂ ಕಿಮ್ಸ್‌ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರಿದ್ದರು.

Latest Videos
Follow Us:
Download App:
  • android
  • ios