Asianet Suvarna News Asianet Suvarna News

ಅಡಚಣೆಗಾಗಿ ಕ್ಷಮಿಸಿ, ಸಾರ್ವಜನಿಕರಲ್ಲಿ ಕ್ಷಮೆ ಕೋರಿದ ಪ್ರಧಾನಿ ನರೇಂದ್ರ ಮೋದಿ!

ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕ್ಷಮೆ ಕೇಳಿದ್ದಾರೆ. ಆಗಲಿರುವ ಅಡಚರಣೆಗೆ ಈಗಲೇ ಕ್ಷಮೆ ಕೋರುತ್ತಿದ್ದೇನೆ. ನಿಮ್ಮ ಸಹಕಾರ ಅತೀ ಅಗತ್ಯವಾಗಿದ್ದು, ಎಲ್ಲರಲ್ಲಿ ಕೈಜೋಡಿಸಿ ಮನವಿ ಮಾಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
 

PM Modi Apologies Public for inconvenience Due to Delhi G20 Summit 2023 ckm
Author
First Published Aug 26, 2023, 7:05 PM IST

ನವದೆಹಲಿ(ಆ.26) ಸೌತ್ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡು ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಇಸ್ರೋ ವಿಜ್ಞಾನಿಗಳನ್ನು ಅಭಿನದಿಸಿದ್ದರು. ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ ದೆಹಲಿಗೆ ಮರಳಿದ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಲ್ಲಿ ಕ್ಷಮೆ ಕೋರಿದ್ದಾರೆ. ವಿಶೇಷವಾಗಿ ದೆಹಲಿ ಜನತೆಯಲ್ಲಿ ಮೋದಿ ಕ್ಷಮೆ ಕೋರಿದ್ದಾರೆ. ಇದಕ್ಕೆ ಮುಖ್ಯಕಾರಣ ದೆಹಲಿಯಲ್ಲಿ ನಡೆಯಲಿರುವ ಜಿ20 ಸಭೆ. ದೆಹಲಿಯಲ್ಲಿ ಆಯೋಜಿಸಿರುವ ಜಿ20 ಶೃಂಗಸಭೆಯಿಂದ ದೆಹಲಿ ನಾಗರೀಕರಿಗೆ ಅಚಡಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ನಾಗರೀಕರಲ್ಲಿ ಕ್ಷಮೆ ಕೋರುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಸೆಪ್ಟೆಂಬರ್ 9 ಹಾಗೂ 10 ರಂದು ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಣ್ಯರು ದೆಹಲಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಟ್ರಾಫಿಕ್ ಬದಲಾವಣೆ, ಭದ್ರತಾ ಪರಿಶೀಲನೆ ಸೇರಿದಂತೆ ಹಲವು ಅಡಚಣೆಗಳು ಎದುರಾಗಲಿದೆ. ದೆಹಲಿ ಜನತೆ ಜಿ20 ಶೃಂಗಸಭೆ ಯಶಸ್ವಿಯಾಗಲು ಸಹಾಕರ ನೀಡಬೇಕು ಎಂದು ಮೋದಿ ಮನವಿ ಮಾಡಿದ್ದಾರೆ.

PM Modi Isro Visit: 'ಶಭಾಶ್‌...' ಇಸ್ರೋ ಅಧ್ಯಕ್ಷರನ್ನು ಕಂಡೊಡನೆ ಬೆನ್ನುತಟ್ಟಿ ಖುಷಿಪಟ್ಟ ಮೋದಿ!

ಜಿ20 ಸಭೆಯ ತಯಾರಿ ಹಾಗೂ ಸಭೆಯಿಂದ ದೆಹಲಿ ಜನರಿಗೆ ತೊಂದರೆಯಾಗಲಿದೆ. ರಸ್ತೆ ಮಾರ್ಗಗಳನ್ನು ಬದಲಾಯಿಸಲಾಗುತ್ತದೆ. ಭದ್ರತಾ ತಪಾಸಣೆಗಳು ನಡೆಯಲಿದೆ. ಇದರಿಂದ ಈ ಸಮಸ್ಯೆಗಳಿಗೆ ನಾಗರೀಕರ ಬಳಿ ಕ್ಷಮೆ ಕೋರುತ್ತಿದ್ದೇನೆ. ಆದರೆ ದೆಹಲಿ ಜನತೆ ಮೇಲೆ ದೊಡ್ಡ ಜವಾಬ್ದಾರಿಯೂ ಇದೆ. ದೆಹಲಿಯಲ್ಲಿ ಜಿ20 ಸಭೆ ಯಶಸ್ವಿಯಾಗಿ ನಡೆಯಲು ಸಹಕಾರ ಅಗತ್ಯವಿದೆ ಎಂದು ಮೋದಿ ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 5 ರಿಂದ 15ರ ವರೆಗೆ ಅಡಚಣೆಗಳು ಇರಲಿದೆ ಎಂದು ಮೋದಿ ಹೇಳಿದ್ದಾರೆ. ದೆಹಲಿ ಜಿ20 ಸಭೆಯಿ ಪೂರ್ವ ಸಿದ್ಧತೆಯ ಭಾಗವಾಗಿ ಇಲ್ಲಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೆ.8-10ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಸಿಬ್ಬಂದಿ ಸಚಿವಾಲಯ,‘ಜಿ20 ಸಭೆಗೆ ಬೇಕಾದ ತಯಾರಿಗಳನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೇರಿದ ಕಚೇರಿಗಳಿಗೆ ಸೆ.8-10ರವರೆಗೆ ರಜೆ ಘೋಷಣೆ ಮಾಡಲಾಗಿದೆ’ ಎಂದಿದೆ.

ಚಂದ್ರಯಾನ-3 ಯಶಸ್ವಿಯಾದ ಆ.23 ಇನ್ನುಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಇನ್ನು ದೆಹಲಿ ಜಿ20 ಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೈರಾಗಲಿದ್ದಾರೆ. ಈ ಕುರಿತು ಈಗಾಗಲೇ ಘೋಷಣೆ ಹೊರಬಿದ್ದಿದೆ.ರಷ್ಯಾ ಅಧ್ಯಕ್ಷರ ಗಮನವು ಪ್ರಸ್ತುತ ಉಕ್ರೇನ್‌ನಲ್ಲಿರುವ ವಿಶೇಷ ಮಿಲಿಟರಿ ಕಾರ್ಯಾಚರಣೆ ಮೇಲಿದೆ. ಹೀಗಾಗಿ  ಜಿ20 ನಾಯಕರ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾಗವಹಿಸುತ್ತಿಲ್ಲ ಎಂದು ಕ್ರೆಮ್ಲಿನ್‌ ವಕ್ತಾರ ಡಿಮಿಟ್ರಿ ಪೆಸ್ಕೋವ್‌ ಘೊಷಿಸಿದ್ದಾರೆ
 

Follow Us:
Download App:
  • android
  • ios