PM Modi visit ಸತತ ಎರಡನೇ ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು!
- ಏ.5ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ಪ್ರಧಾನಿ
- ಸಿಎಂ ಕಚೇರಿಗೆ ಪ್ರಧಾನಿಗಳ ಕಚೇರಿಯಿಂದ ಅಧಿಕೃತ ಮಾಹಿತಿ
- ಮಾರ್ಚ್ ತಿಂಗಳ ಪ್ರವಾಸ ಕೂಡ ರದ್ದಾಗಿತ್ತು
ಬೆಂಗಳೂರು(ಮಾ.28) ವಿವಿಧ ಕಾರ್ಯಕ್ರಮ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಏಪ್ರಿಲ್ 5 ರಂದು ಕರ್ನಾಟಕಕ್ಕೆ ಆಗಮಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ರದ್ದಾಗಿದೆ. ಸತತ ಎರಡನೇ ಬಾರಿ ಪ್ರಧಾನಿ ರಾಜ್ಯ ಪ್ರವಾಸ ರದ್ದಾಗಿದೆ. ಈ ಕುರಿತು ಸಿಎಂ ಕಚೇರಿಗೆ ಪ್ರಧಾನಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.
ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೋದಿ ಪ್ರವಾಸ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದರು. ಏಪ್ರಿಲ್ 5 ರಂದು ಪ್ರಧಾನಿ ಭೇಟಿ ನೀಡುವ ಸಾಧ್ಯತೆ ಇದೆ ಎಂದಿದ್ದರು. ಇದೇ ವೇಳೆ ಏಪ್ರಿಲ್ 1 ರಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದರು. ಇದರಲ್ಲಿ ಪ್ರಧಾನಿ ಮೋದಿ ಪ್ರವಾಸ ರದ್ದಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.
ಮಾರ್ಚ್ ತಿಂಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ ದಿನಾಂಕ ನಿಗದಿಯಾಗಿತ್ತು. ಹಲವು ಕಾರ್ಯಕ್ರಮಗಳ ನಿಮಿತ್ತ ಕರ್ನಾಟಕ ಪ್ರವಾಸ ಮಾಡಲು ಮೋದಿ ಸಜ್ಜಾಗಿದ್ದಾರೆ. ಆದರೆ ಕೊನೆ ಕ್ಷಣದಲ್ಲಿ ರಾಜ್ಯ ಪ್ರವಾಸ ರದ್ದಾಗಿತ್ತು. ಇದೀಗ ಸತತ ಎರಡನೇ ಬಾರಿ ಪ್ರವಾಸ ರದ್ದಾಗಿದೆ. ಮೋದಿ ರಾಜ್ಯ ಪ್ರವಾಸ ರದ್ದಾಗಲು ಸ್ಪಷ್ಟ ಕಾರಣ ಬಹಿರಂಗವಾಗಿಲ್ಲ.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಗೆ ಕೋವಿಡ್ ಪಾಸಿಟಿವ್, ಭಾರತ ಪ್ರವಾಸ ಅನುಮಾನ!
ಹೊಳಲೂರು ಗ್ರಾಮಕ್ಕೆ ಮೋದಿ ಭೇಟಿ ರದ್ದು?
ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಹಿನ್ನೆಲೆಯಲ್ಲಿ ಏ.24ರಂದು ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಪಂಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಕಾರ್ಯಕ್ರಮ ಬಹುತೇಕ ರದ್ದಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಅಧಿಕೃತವಾಗಿ ಸರ್ಕಾರ ಪ್ರಕಟಿಸದೇ ಇದ್ದರೂ, ಅಂದು ಪ್ರಧಾನಿಗಳು ಕಾಶ್ಮೀರಕ್ಕೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ರಾಜ್ಯಕ್ಕೆ ಬರುವ ಕಾರ್ಯಕ್ರಮ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ. ಭೇಟಿ ರದ್ದು ಕುರಿತು ಪ್ರಧಾನಮಂತ್ರಿ ಕಾರ್ಯಾಲಯದಿಂದ ಇಲ್ಲಿನ ಜಿ.ಪಂ.ಗೆ ಯಾವುದೇ ಅಧಿಕೃತ ಸೂಚನೆ ಬಂದಿಲ್ಲ ಎಂದು ಜಿ.ಪಂ. ಸಿಇಓ ಎಂ.ಎಲ್. ವೈಶಾಲಿ ತಿಳಿಸಿದ್ದಾರೆ. ಆದರೆ ತಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಅಂದು ಪ್ರಧಾನಿಗಳು ಕಾಶ್ಮೀರದ ಪ್ರವಾಸದ ಪ್ರೋಗ್ರಾಂ ಹಾಕಿಕೊಂಡಿದ್ದಾರೆ ಎಂದು ಕನ್ನಡಪ್ರಭಕ್ಕೆ ತಿಳಿಸಿದರು.
ಅಂಬೇಡ್ಕರ್ ಸ್ಕೂಲ್‌ಗೆ ಪ್ರಧಾನಿ ಮೋದಿ ಭೇಟಿ ರದ್ದು
ಕಳೆದ ವರ್ಷದ ಅಂತ್ಯದಲ್ಲಿ ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಈ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.
ಬಡವರಿಗೆ ಉಚಿತ ಆಹಾರ ಧಾನ್ಯ ವಿತರಣೆ ಗರೀಬ್ ಕಲ್ಯಾಣ ಯೋಜನೆ ಮತ್ತೆ 6 ತಿಂಗಳಿಗೆ ವಿಸ್ತರಣೆ!
ಏ.1ಕ್ಕೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ‘ಪರೀಕ್ಷಾ ಪೇ ಚರ್ಚಾ’
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 5ನೇ ಆವೃತ್ತಿ ಏ.1ರಂದು ನಡೆಯಲಿದೆ. ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಪರೀಕ್ಷಾ ಸಮಯದಲ್ಲಿ ಒತ್ತಡಗಳನ್ನು ಮೀರುವ ಕುರಿತಾಗಿ ಈ ಸಂವಾದದ ವೇಳೆ ಮೋದಿ ಅವರು ವಿದ್ಯಾರ್ಥಿಗಳಿಗೆ ಸೂಕ್ಷ್ಮ ತಿಳುವಳಿಕೆಯನ್ನು ನೀಡಲಿದ್ದಾರೆ. ‘ಕಾಯುವಿಕೆ ಮುಕ್ತಾಯವಾಯಿತು. ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿ ಏ.1ರಂದು ನವದೆಹಲಿಯ ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮೋದಿ ಅವರು ಪರೀಕ್ಷೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ತಮ್ಮ ಒಳನೋಟಗಳನ್ನು ನೀಡಲಿದ್ದಾರೆ’ ಎಂದು ಶಿಕ್ಷಣ ಇಲಾಖೆ ಟ್ವೀಟ್ ಮಾಡಿದೆ. ಈ ಕಾರ್ಯಕ್ರಮದ ಮೊದಲ ಆವೃತ್ತಿಯೂ 2018 ಫೆ.16ರಂದು ಇದೇ ಕ್ರೀಡಾಂಗಣದಲ್ಲಿ ಜರುಗಿತ್ತು.