Asianet Suvarna News Asianet Suvarna News

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸೆ.9ರಂದು 13ನೇ ಬ್ರಿಕ್ಸ್ ವರ್ಚುವಲ್ ಶೃಂಗಸಭೆ!

  • ಪ್ರಸಕ್ತ ವಿದ್ಯಮಾನಗಳ ಕುರಿತು ಬ್ರಿಕ್ಸ್ ಶೃಂಗಸಭೆಯಲ್ಲಿ ಚರ್ಚೆ
  • ಸೆಪ್ಟೆಂಬರ್ 9 ರಂದು ವರ್ಚುವಲ್ ಮೂಲಕ ನಡೆಯಲಿದೆ ಸಭೆ
  • ಪ್ರಧಾನಿ ಮೋದಿ ಅಧ್ಯಕ್ಷತೆ, ಬ್ರಿಕ್ಸ್ ಸದಸ್ಯ ರಾಷ್ಟ್ರದ ನಾಯಕರು ಭಾಗಿ
PM Modi chair 13th BRICS Summit on 9 September 2021 in virtual format ckm
Author
Bengaluru, First Published Sep 8, 2021, 5:53 PM IST
  • Facebook
  • Twitter
  • Whatsapp

ನವದೆಹಲಿ(ಸೆ.08): ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ  13ನೇ ಬ್ರಿಕ್ಸ್ ದೇಶಗಳ ವರ್ಚುವಲ್ ಶೃಂಗಸಭೆ ನಡೆಯಲಿದೆ. ವಿಶ್ವ ಎದುರಿಸುತ್ತಿರುವ ಭಯೋತ್ಪಾದನೆ ಆತಂಕ, ಆರ್ಥಿಕ ಚಟುವಟಿಕೆ ಮೇಲಿನ ಹೊಡೆತ, ಡಿಜಿಟಲ್ ಮತ್ತು ತಂತ್ರಜ್ಞಾನ ಬಳಕೆ, ಕೋವಿಡ್ ಸಾವಲು ಸೇರಿದಂತೆ ಹಲವು ಮಹತ್ತರ ವಿಚಾರಗಳ ಕುರಿತು ಈ ಬಾರಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚರ್ಚೆಯಾಗಲಿದೆ.

ನಮ್ಮ ದೇಶದಲ್ಲಿ ಭಯೋತ್ಪಾದಕ ಸಂಘಟನೆಗಳೇ ಇಲ್ಲ; ಬ್ರಿಕ್ಸ್ ಶೃಂಗಸಭೆ ನಿರ್ಣಯವನ್ನು ನಿರಾಕರಿಸಿದ ಪಾಕ್

ಭಾರತ 2021ರ ಬ್ರಿಕ್ಸ್ ದೇಶಗಳ ಸಮಾವೇಶದ ಅಧ್ಯಕ್ಷತೆ ವಹಿಸಿದೆ. ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.

 

ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆಗೆ ಒತ್ತು ನೀಡಲಿದೆ. ಇನ್ನು  ಜನರ ನಡುವಿನ ಸಂವಹನ ಹೆಚ್ಚಳಕ್ಕೆ ವಿಶೇಷ ಮಹತ್ವ ನೀಡಲಿದೆ. 

BRICS ಶೃಂಗಸಭೆ: ಭಯೋತ್ಪಾದನೆ ವಿರುದ್ಧ ಗುಡುಗಿದ ಮೋದಿ!

ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಾಯಕರು ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಣಾಮಗಳು ಮತ್ತು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.  ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್‌ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ವಿವರಗಳನ್ನು ಮಂಡಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 2ನೇ ಬಾರಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿದ್ದಾರೆ. ಇದಕ್ಕೂ ಮೊದಲು 2016ರಲ್ಲಿ ಗೋವಾದಲ್ಲಿ ನಡೆದ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ರಿಕ್ಸ್ ಶೃಂಗಸಭೆಯ 15ನೇ ವಾರ್ಷಿಕೋತ್ಸವದ ಸಂದರ್ಭದಲ್ಲೇ ಭಾರತ ಬ್ರಿಕ್ಸ್ ಅಧ್ಯಕ್ಷತೆ ವಹಿಸುತ್ತಿರುವುದು ಮಹತ್ವದ್ದಾಗಿದೆ.

Follow Us:
Download App:
  • android
  • ios