ಕೊರೋನಾ ಸ್ಥಿತಿಗತಿ, ಲಸಿಕೆ ಅಭಿಯಾನ ಕುರಿತು ಮಹತ್ವದ ಸಭೆ ನಡೆಸಿದ ಪ್ರಧಾನಿ 3ನೇ ಅಲೆ ಆತಂಕದ ನಡುವೆ ಮಹತ್ವದ ಪಡೆದುಕೊಂಡ ಸಭೆ ಕೊರೋನಾ ಸ್ಥಿತಿಗತಿ, ನಿಯಂತ್ರಣಕ್ಕೆ ಕ್ರಮ ಹಾಗೂ ಲಸಿಕೆ ಕುರಿತು ಮಾಹಿತಿ ಪಡೆದ ಮೋದಿ
ನವದೆಹಲಿ(ಸೆ.10): ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕೇರಳ ಸೇರಿದಂತೆ ಕೆಲ ರಾಜ್ಯಗಳಲ್ಲಿ ಹೆಚ್ಚಾಗುತ್ತಿದೆ. ಇತರ ಪರಿಣಾಮ ನೆರೆ ರಾಜ್ಯಗಳ ಮೇಲೂ ಆಗುತ್ತಿದೆ. ಹೀಗಾಗಿ ದೇಶದಲ್ಲಿ 3ನೇ ಅಲೆ ಭೀತಿ ಎದುರಾಗಿದೆ. ಇದರ ಜೊತೆಗೆ ಸಾಲು ಸಾಲು ಹಬ್ಬಗಳಿಂದ ದೇಶದಲ್ಲಿನ ಕೊರೋನಾ ಸ್ಥಿತಿಗತಿ ಹಾಗೂ ಲಸಿಕೆ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಕರ್ನಾಟಕ to ಯುಪಿ; ರಾಜ್ಯಗಳ ಲಸಿಕೆ ಅಭಿಯಾನ ಇತರ ರಾಷ್ಟ್ರಗಳಿಗಿಂತ ವೇಗ
ಉನ್ನತ ಮಟ್ಟದ ಸಭೆಯಲ್ಲಿ ದೇಶದಲ್ಲಿನ ಕೊರೋನಾ ಪ್ರಕರಣ ಸಂಖ್ಯೆ, ಕೇರಳ ಸೇರಿ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ವಿವರವನ್ನು ಮೋದಿ ಪಡೆದುಕೊಂಡಿದ್ದಾರೆ. ಗಣೇಶ ಹಬ್ಬ ಸೇರಿದಂತೆ ಸಾಲು ಸಾಲು ಹಬ್ಬಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.
3ನೇ ಅಲೆ ಭೀತಿ ಎದುರಾಗಿರುವ ಕಾರಣ ದೇಶ ವೈರಸ್ ಹರಡದಂತೆ ತಡೆಯಲು ಮಾಡಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ದೇಶವನ್ನು ಕೊರೋನಾ ಮುಕ್ತವಾಗಿಸಲು ಕೇಂದ್ರ ಸರ್ಕಾರದ ಲಸಿಕಾ ಅಭಿಯಾನದ ಮಾಹಿತಿ ಪಡೆದ ಮೋದಿ, ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲು ಸೂಚಿಸಲಾಗಿದೆ.
ಇನ್ಮುಂದೆ ವೀಕೆಂಡ್ ಕರ್ಫ್ಯೂ ಇಲ್ಲ, ರಾಜ್ಯ ಸರ್ಕಾರ ಆದೇಶ
ಭಾರತ ಇದೀಗ 72.37 ಕೋಟಿ ಲಸಿಕೆ ಡೋಸ್ ನೀಡಲಾಗಿದೆ. ಈ ಕುರಿತು ಅಧಿಕಾರಿಗಳು ಮೋದಿಗೆ ಮಾಹಿತಿ ನೀಡಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 34,973 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ ಶೇಕಡಾ 1.18. ದೇಶದಲ್ಲಿ ಕೊರೋನಾದಿಂದ ಗುಣಮುಖರಾಗುವ ಸಂಖ್ಯೆ ಶೇ.97.49ಕ್ಕೆ ಏರಿಕೆಯಾಗಿದೆ. ಇದುವರೆಗೆ 53.86 ಕೋಟಿ ಕೊರೋನಾ ಪರೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿಗಳು ಮೋದಿಗೆ ಮಾಹಿತಿ ನೀಡಿದ್ದಾರೆ.
