ನವದೆಹಲಿ(ಮೇ.28): ಲಡಾಖ್‌ ಗಡಿಯಲ್ಲಿನ ಗಡಿ ಬಿಕ್ಕಟ್ಟು ನಿರ್ವಹಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಡೋಕ್ಲಾಂ ಬಿಕ್ಕಟ್ಟನ್ನು ಬಗೆಹರಿಸಿದ ತಂಡದ ಸದಸ್ಯರನ್ನು ಪುನಃ ಕರೆಸಿಕೊಂಡಿದ್ದಾರೆ.

ಯುದ್ಧೋನ್ಮಾದ ಬಿಟ್ಟು ಮೆತ್ತಗಾದ ಚೀನಾ!

ಈ ಹಿಂದೆ 2017ರಲ್ಲಿ ಡೋಕ್ಲಾಂ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾದ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ನೇತೃತ್ವದ ತಂಡ ಚೀನಾದ ಜೊತೆ ಮಾತುಕತೆ ನಡೆಸಿ ಸಂಧಾನದ ಮೂಲಕ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿತ್ತು.

ಚೀನಾ ಕ್ಯಾತೆ: ಮೋದಿ ಉನ್ನತ ಮಟ್ಟದ ತುರ್ತು ಸಭೆ!

ಇದೀಗ ಚೀನಾ ಗಡಿ ವಿಚಾರದಲ್ಲಿ ಮತ್ತೆ ತಗಾದೆ ತೆಗೆದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತುರ್ತು ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದರು. ವಿಶೇಷವೆಂದರೆ ಈ ಸಭೆಯಲ್ಲಿ ಭಾಗಿಯಾದ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಸಶಸ್ತ್ರ ಪಡೆ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ವಿದೇಶಾಂಗ ಸಚಿವ ಜೈಶಂಕರ್‌ ಅವರು ಡೋಕ್ಲಾಂ ಬಿಕ್ಕಟ್ಟು ನಿವಾರಿಸಿದ ತಂಡದಲ್ಲಿದ್ದರು.