ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಭಾರತಕ್ಕೆ ಮರಳಿದರು. ದಾಳಿಯ ಕುರಿತು ವಿಮಾನ ನಿಲ್ದಾಣದಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದರು.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಭಯಾನಕ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಇಂದು (ಬುಧವಾರ) ಬೆಳಗ್ಗೆ ಭಾರತಕ್ಕೆ ಮರಳಿದರು. ದಾಳಿಯ ಸುದ್ದಿ ತಿಳಿದ ತಕ್ಷಣ, ಪ್ರಧಾನಿ ಮೋದಿ ತಕ್ಷಣ ಜೆಡ್ಡಾದಿಂದ ಹೊರಟು, ರಾಜತಾಂತ್ರಿಕ ಒಪ್ಪಂದಗಳಿಗಿಂತ ರಾಷ್ಟ್ರೀಯ ಭದ್ರತಾ ಕಾಳಜಿಗಳಿಗೆ ಆದ್ಯತೆ ನೀಡಿ ದೆಹಲಿಯಲ್ಲಿ ಬಂದಿಳಿದರು.

ವಿಮಾನ ನಿಲ್ದಾಣದಲ್ಲಿಯೇ ಮೋದಿ ತುರ್ತು ಸಭೆ

ವಿಮಾನದಿಂದ ಇಳಿದ ತಕ್ಷಣ, ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲೇ ತುರ್ತು ಪರಿಶೀಲನಾ ಸಭೆ ನಡೆಸಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಹಿರಿಯ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.

ಪ್ರಧಾನಿ ಮೋದಿ ಸೌದಿ ಪ್ರವಾಸ ರದ್ದು

ಪಹಲ್ಗಾಮ್‌ನಲ್ಲಿ ನಡೆದ ದಾಳಿಯು, ೩೭೦ನೇ ವಿಧಿ ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ವಿನಾಶಕಾರಿ ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಲಾಗಿದೆ. ಘಟನೆಯ ಗಂಭೀರತೆಯಿಂದಾಗಿ, ಪ್ರಧಾನಿ ಮೋದಿ ಸೌದಿ ಅರೇಬಿಯಾ ಆಯೋಜಿಸಿದ್ದ ಅಧಿಕೃತ ಔತಣಕೂಟವನ್ನು ಬಿಟ್ಟು, ಒಂದು ದಿನ ಮೊದಲೇ ಭಾರತಕ್ಕೆ ಮರಳಿದರು ಎಂಬುದು ಗಮನಾರ್ಹ.

ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಖಂಡನೆ

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆಯಾಗಿ, ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು ಮತ್ತು ಮೃತಪಟ್ಟ ಅಮಾಯಕರ ಬಗ್ಗೆ ಸಂತಾಪ ವ್ಯಕ್ತಪಡಿಸಿದರು. ಭಯೋತ್ಪಾದನೆ ವಿರುದ್ಧ ಭಾರತದ ಜೊತೆ ನಿಲ್ಲುವ ಸೌದಿ ಅರೇಬಿಯಾದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವ ಮೊದಲು ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ಮತ್ತು ಪ್ರಮುಖ ಪಾಲುದಾರಿಕೆ ಮಂಡಳಿ ಸಭೆಯನ್ನು ನಡೆಸಿದರು.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸುತ್ತೇವೆ. ದುರ್ಘಟನೆಯಲ್ಲಿ ಕನ್ನಡಿಗರೂ ಬಲಿಪಶುಗಳಾಗಿದ್ದಾರೆ. ವಿಷಯ ತಿಳಿದ ಕೂಡಲೇ ಅಧಿಕಾರಿಗಳ ಸಭೆ ನಡೆಸಿ, ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಲಾಗಿದೆ. ಕಾಶ್ಮೀರದಲ್ಲಿರುವ ಕನ್ನಡಿಗರಿಗೆ ಎಲ್ಲ ಬೆಂಬಲ ನೀಡಲಾಗುವುದು ಎಂದು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್‌ ದಾಳಿ: ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ಸಂತೋಷ ಲಾಡ್!

ಘಟನೆ ಎಲ್ಲಿ?
ಮಿನಿ ಸ್ವಿಜರ್ಲೆಂಡ್‌ ಎಂದೇ ಖ್ಯಾತವಾಗಿರುವ ಕಾಶ್ಮೀರದ ಪಹಲ್ಗಾಂನ ಬಳಿಯ ಬೈಸರಣ್‌ ಎಂಬಲ್ಲಿ

ಯಾವಾಗ?
ಮಂಗಳವಾರ ಮಧ್ಯಾಹ್ನ 3 ಗಂಟೆಗೆ

ಏನಾಯ್ತು?
ಗುಡ್ಡಗಾಡಿನಿಂದ ಹೊರಬಂದ 5 ಉಗ್ರರಿಂದ ಹುಲ್ಲುಗಾವಲಲ್ಲಿ ಕುಟುಂಬ ಸದಸ್ಯರೊಂದಿಗೆ ಉಲ್ಲಾಸದಲ್ಲಿದ್ದ ವೇಳೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ. 26 ಜನ ರಸಾವು

ಇದನ್ನೂ ಓದಿ: ಕಾಶ್ಮೀರ ಉಗ್ರರ ದಾಳಿಗೆ ಬೆಂಗಳೂರಿನ ವ್ಯಕ್ತಿ ಬಲಿ: ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ!

Scroll to load tweet…