ಕೆಂಪು ಕೋಟೆ ಘೋಷಣೆ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಪರಾಮರ್ಶೆ ಸಭೆ!
ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಗೆ ಕೆಂಪು ಕೋಟೆ ಮೇಲೆ ನಿಂತು ಹಲವು ಘೋಷಣೆ ಮಾಡಿದ್ದಾರೆ. ಈ ಘೋಷಣೆಗಳ ಕುರಿತು ಇಂದು ಮೋದಿ ನೇತೃತ್ವದಲ್ಲಿ ಪರಾಮರ್ಶೆ ಸಭೆ ನಡೆದಿದೆ.
ನವದೆಹಲಿ(ಅ.07) ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಪರಾಮರ್ಶೆ ಸಭೆ ನಡೆದಿದೆ. ಸ್ವಾತಂತ್ರ್ಯ ದಿನಾಚರಣೆಗೆ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಮಾಡಿದ ಘೋಷಣೆಗಳು ಹಾಗೂ ಯೋಜನೆ ಅನುಷ್ಠಾನ ಕುರಿತು ಪರಾಮರ್ಶೆ ಸಭೆ ನಡೆಸಲಾಗಿದೆ. ಪ್ರಮುಖವಾಗಿ ವಸತಿ ಮತ್ತು ಇಂಧನ ಸೌಲಭ್ಯಗಳ ಒದಗಿಸುವ ಯೋಜನೆ ಕುರಿತು ಚರ್ಚಿಸಲಾಗಿದೆ. ಇದೇ ವೇಳೆ ಬಡ ಹಾಗೂ ಮಧ್ಯಮ ವರ್ಗದ ಮನೆಗಳಿಗೆ ಸೋಲಾರ್ ಒದಗಿಸುವ ಯೋಜನೆ ಕುರಿತು ಪರಾಮರ್ಶೆ ನಡೆಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ್ದ ಪ್ರಧಾನಿ ಮೋದಿ ದೇಶವನ್ನುದ್ಧೇಶಿ ಭಾಷಣ ಮಾಡಿದ್ದರು. ಈ ವೇಳೆ ಕೆಲ ಘೋಷಣೆಗಳನ್ನು ಮಾಡಿದ್ದರು. ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಒದಿಗಿಸುವ ಕುರಿತು ಘೋಷಿಸಿದ್ದರು. ಇದೀಗ ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಕನಸು ನನಸಾಗಿಸಲು ಮೋದಿ ಯೋಜನೆಗಳ ಪರಾಮರ್ಶೆ ನಡೆಸಿದ್ದಾರೆ.
ಅಪ್ಪಟ ರೈತ ವಿಜ್ಞಾನಿ ಪ್ರೊ.ಸ್ವಾಮಿನಾಥನ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಲೇಖನ
ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸೋಲಾರ್ ಸೌಲಭ್ಯ ಯೋಜನೆಯನ್ನು ಮೋದಿ ಘೋಷಿಸಿದ್ದರು. ಈ ಕುರಿತು ಮೋದಿ ಚರ್ಚಿಸಿದ್ದಾರೆ. ಯೋಜನೆ ಪ್ರತಿಯೊಬ್ಬ ಫಲಾನುಭವಿಗೆ ಯಾವುದೇ ಸಮಸ್ಯೆಗಳಿಲ್ಲದೆ ತಲುಪಬೇಕು. ಸರಳ ಹಾಗೂ ಸುಲಭವಾಗಿ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆಯುವಂತಾಗಬೇಕು ಎಂದು ಮೋದಿ ಸೂಚಿಸಿದ್ದಾರೆ.