ಆಯೋಧ್ಯೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!
ಆಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ಆಯೋಧ್ಯೆಯ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಆಯೋಧ್ಯೆ(ಡಿ.30) ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಜನವರಿ 22ರಂದು ಉದ್ಘಾಟನೆಗೊಳ್ಳಲಿದೆ. ರಾಮ ಲಲ್ಲಾ ಪ್ರಾಣಪ್ರತಿಷ್ಠೆಯೊಂದಿಗೆ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ ಆಯೋಧ್ಯೆಯ ಮೂಲಭೂತ ಸೌಕರ್ಯಗಳ ಉದ್ಘಾಟನೆ, ಲೋಕಾರಪಣೆ ನಡೆಯುತ್ತಿದೆ. ಇದೀಗ ಪ್ರಧಾನಿ ಮೋದಿ ಆಯೋಧ್ಯೆ ರೈಲು ನಿಲ್ದಾಣ ಉದ್ಘಾಟಿಸಿದ ಬೆನ್ನಲ್ಲೇ ಇದೀಗ ಆಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದ ಮೊದಲ ಹಂತದ ನಿಲ್ದಾಣವನ್ನು ರಿಬ್ಬನ್ ಕತ್ತರಿಸುವ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.ಇದೇ ವೇಳೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಯೋಧ್ಯೆ ಭೇಟಿ ವೇಳೆ ಉಜ್ವಲ ಫಲಾನುಭವಿ ಮನೆಗೆ ತೆರಳಿ ಚಹಾ ಸೇವಿಸಿದ ಪ್ರಧಾನಿ ಮೋದಿ!
ಅತ್ಯಾಧುನಿಕ ವಿಮಾನ ನಿಲ್ದಾಣದ 1ನೇ ಹಂತವನ್ನು 1,450 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣ ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸುಸಜ್ಜಿತವಾಗಿದೆ. ಟರ್ಮಿನಲ್ ಕಟ್ಟಡದ ಮುಂಭಾಗವು ಅಯೋಧ್ಯೆ ಶ್ರೀ ರಾಮ ಮಂದಿರದ ದೇವಾಲಯದ ವಾಸ್ತುಶಿಲ್ಪವನ್ನು ಚಿತ್ರಿಸುತ್ತದೆ. ಟರ್ಮಿನಲ್ ಕಟ್ಟಡದ ಒಳಭಾಗದಲ್ಲಿ ಭಗವಾನ್ ಶ್ರೀರಾಮನ ಜೀವನ ಚಿತ್ರಿಸುವ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ. ಅಯೋಧ್ಯೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಎಲ್ಇಡಿ ಲೈಟಿಂಗ್, ಮಳೆ ನೀರು ಕೊಯ್ಲು, ಕಾರಂಜಿಗಳು, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ ಮತ್ತು ಇತರ ಒಳಗೊಂಡ ಹಲವು ವೈಶಿಷ್ಟ್ಯಗಳನ್ನು ಒದಗಿಸಲಾಗಿದೆ. ಗೃಹ - 5 ಸ್ಟಾರ್ ರೇಟಿಂಗ್ ಗೆ ಅನುಗುಣವಾಗಿ ಈ ವೈಶಿಷ್ಟ್ಯಗಳನ್ನು ರೂಪಿಸಲಾಗಿದೆ. ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಸಂಪರ್ಕ ಸುಧಾರಿಸುತ್ತದೆ. ಇದು ಪ್ರವಾಸೋದ್ಯಮ, ವ್ಯಾಪಾರ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳಲ್ಲಿ ಉತ್ತೇಜನಕ್ಕೆ ಕಾರಣವಾಗುತ್ತದೆ.
ಚುನಾವಣಾ ಅಭ್ಯರ್ಥಿಯಾಗಿ ಶ್ರೀರಾಮನ ಘೋಷಿಸುವುದು ಬಾಕಿ, ಬಿಜಿಪಿ ಕುಟುಕಿ ಟೀಕೆಗೆ ಗುರಿಯಾದ ಶಿವಸೇನೆ!
ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣದ ಹಂತ I - ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಎಂದು ಕರೆಯಲ್ಪಡುತ್ತದೆ. ಇದನ್ನು 240 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. 3 ಅಂತಸ್ತಿನ ಆಧುನಿಕ ರೈಲು ನಿಲ್ದಾಣದ ಕಟ್ಟಡವು ಲಿಫ್ಟ್ ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜಾ ಅಗತ್ಯಗಳಿಗಾಗಿ ಅಂಗಡಿಗಳು, ಕ್ಲಾಕ್ ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು, ಕಾಯುವ ಹಾಲ್‌ಗಳಂತಹ ಎಲ್ಲಾ ಆಧುನಿಕ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ. ನಿಲ್ದಾಣದ ಕಟ್ಟಡವು 'ಎಲ್ಲರಿಗೂ ಪ್ರವೇಶಿಸಬಹುದಾಗಿದೆ' ಮತ್ತು 'ಐಜಿಬಿಸಿ ಪ್ರಮಾಣೀಕೃತ ಹಸಿರು ನಿಲ್ದಾಣ ಕಟ್ಟಡ'ವಾಗಿರುತ್ತದೆ.