ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ: ರಾಜ್ಯಕ್ಕೂ 3 ರೈಲುಗಳ ಗಿಫ್ಟ್ ನೀಡಿದ ಪ್ರಧಾನಿ
ಉತ್ತರ ಪ್ರದೇಶದಲ್ಲಿ ₹ 15,000 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು ₹11,100 ಕೋಟಿ ಮೌಲ್ಯದ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಯೋಜನೆಗಳಿಗೆ ಸಂಬಂಧಿಸಿದ ಸುಮಾರು ₹4,600 ಕೋಟಿ ಮೌಲ್ಯದ ಯೋಜನೆಗಳು ಸೇರಿವೆ.
ಅಯೋಧ್ಯೆ (ಡಿಸೆಂಬರ್ 30, 2023): ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಎಂದು ಕರೆಯಲ್ಪಡುವ ಪುನರಾಭಿವೃದ್ಧಿಯಾದ ಅಯೋಧ್ಯೆ ರೈಲು ನಿಲ್ದಾಣದ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಜತೆಗೆ ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಳಿಗೂ ಹಸಿರು ನಿಶಾನೆ ತೋರಿದ್ದಾರೆ. ಹಲವಾರು ಇತರ ರೈಲ್ವೆ ಯೋಜನೆಗಳನ್ನು ಸಹ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.
ಮೋದಿ ಅಯೋಧ್ಯೆಗೆ ಬೆಳಗ್ಗೆ ಆಗಮಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆತ್ಮೀಯ ಸ್ವಾಗತ ಕೋರಿದರು. ಜನವರಿ 22 ರಂದು ರಾಮ ಮಂದಿರದ ಮಹಾ ಶಂಕುಸ್ಥಾಪನೆ ಸಮಾರಂಭಕ್ಕೆ ವಾರಗಳ ಮೊದಲು ಮೋದಿ ಅಯೋಧ್ಯೆ ಭೇಟಿ ಪ್ರಾಮುಖ್ಯತೆ ಪಡೆದುಕೊಂಡಿದೆ.
ಇದನ್ನು ಓದಿ: ಇಂದು ಮೋದಿ ಮೆಗಾ ಶೋ: ಅಯೋಧ್ಯೆಯಲ್ಲಿ 15,000 ಕೋಟಿ ರೂ. ಯೋಜನೆಗೆ ಚಾಲನೆ
ಅಲ್ಲದೆ, ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಯೋಧ್ಯಾ ಧಾಮ್ ವಿಮಾನ ನಿಲ್ದಾಣ ಉದ್ಘಾಟನೆಯನ್ನೂ ಮೋದಿ ನೆರವೇರಿಸಲಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ, ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಉದ್ಘಾಟನೆ, ಉತ್ತರ ಪ್ರದೇಶದಲ್ಲಿ ₹ 15,000 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು ₹11,100 ಕೋಟಿ ಮೌಲ್ಯದ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಯೋಜನೆಗಳಿಗೆ ಸಂಬಂಧಿಸಿದ ಸುಮಾರು ₹4,600 ಕೋಟಿ ಮೌಲ್ಯದ ಯೋಜನೆಗಳು ಸೇರಿವೆ.
ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣದ ಬಗ್ಗೆ ತಿಳಿದುಕೊಳ್ಳಬೇಕಾದ ಅಂಶಗಳು
- ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣವನ್ನು ₹240 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
- ಮೂರು ಅಂತಸ್ತಿನ ಆಧುನಿಕ ರೈಲು ನಿಲ್ದಾಣದ ಕಟ್ಟಡವು ಲಿಫ್ಟ್, ಎಸ್ಕಲೇಟರ್, ಫುಡ್ ಪ್ಲಾಜಾ, ಪೂಜಾ ಅಗತ್ಯಗಳಿಗಾಗಿ ಅಂಗಡಿ, ಕ್ಲೋಕ್‌ರೂಮ್, ಮಕ್ಕಳ ಆರೈಕೆ ಕೊಠಡಿ ಮತ್ತು ವೇಟಿಂಗ್ ಹಾಲ್‌ಗಳಂತಹ ಎಲ್ಲಾ ಆಧುನಿಕ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ.
- ನಿಲ್ದಾಣದ ಕಟ್ಟಡವು 'ಎಲ್ಲರಿಗೂ ಪ್ರವೇಶಿಸಬಹುದಾಗಿದೆ' ಮತ್ತು 'ಐಜಿಬಿಸಿ-ಪ್ರಮಾಣೀಕೃತ ಹಸಿರು ನಿಲ್ದಾಣ ಕಟ್ಟಡ'ವಾಗಿರುತ್ತದೆ.
ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ First Look!
ಎರಡು ಅಮೃತ್ ಭಾರತ್ ಮತ್ತು ಆರು ವಂದೇ ಭಾರತ್ ರೈಲುಗಳು
ಅಯೋಧ್ಯಾ ಧಾಮ್ ರೈಲು ನಿಲ್ದಾಣದಿಂದ ಎರಡು ಅಮೃತ್ ಭಾರತ್ ಮತ್ತು ಆರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಅಮೃತ್ ಭಾರತ್ ಎಕ್ಸ್‌ಪ್ರೆಸ್ ಸೂಪರ್‌ಫಾಸ್ಟ್ ಪ್ಯಾಸೆಂಜರ್ ರೈಲುಗಳ ಹೊಸ ವರ್ಗವಾಗಿದ್ದು, LHB ಪುಶ್-ಪುಲ್ ವೈಶಿಷ್ಟ್ಯ ಹೊಂದಿದೆ. ಆದರೆ, ಈ ರೈಲುಗಳು ಹವಾನಿಯಂತ್ರಿತವಲ್ಲದ ಕೋಚ್‌ಗಳೊಂದಿಗೆ ಬರುತ್ತವೆ. ಉತ್ತಮ ವೇಗವರ್ಧನೆಗಾಗಿ ಈ ರೈಲು ಎರಡೂ ಕಡೆ ಎಂಜಿನ್‌ಗಳನ್ನು ಹೊಂದಿದೆ.
ಸುಂದರವಾಗಿ ವಿನ್ಯಾಸಗೊಳಿಸಲಾದ ಆಸನ ಉತ್ತಮ ಲಗೇಜ್ ರ್ಯಾಕ್‌ಗಳು, ಸೂಕ್ತವಾದ ಮೊಬೈಲ್ ಹೋಲ್ಡರ್‌ಗಳೊಂದಿಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳು, ಎಲ್‌ಇಡಿ ಲೈಟ್‌ಗಳು, ಸಿಸಿಟಿವಿ ಮತ್ತು ಸಾರ್ವಜನಿಕ ಮಾಹಿತಿ ವ್ಯವಸ್ಥೆ ಮುಂತಾದ ಸುಧಾರಿತ ಸೌಲಭ್ಯಗಳನ್ನು ರೈಲು ಪ್ರಯಾಣಿಕರಿಗೆ ಒದಗಿಸುತ್ತದೆ.
ಹೊಸ ಅಮೃತ್ ಭಾರತ್ ರೈಲುಗಳು ದರ್ಭಾಂಗ - ಅಯೋಧ್ಯೆ - ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಇಂದಿನಿಂದ ಸಂಚರಿಸಲಿವೆ.
ಅಲ್ಲದೆ, ಶ್ರೀ ಮಾತಾ ವೈಷ್ಣೋದೇವಿ ಕತ್ರಾ - ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ - ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್; ಕೊಯಮತ್ತೂರು - ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್; ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಏರಿ 6 ವಮದೇ ಭಾರತ್ ರೈಲುಗಳಿಗೂ ಚಾಲನೆ ನೀಡಲಾಗಿದೆ.
ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯವನ್ನು ಬಲಪಡಿಸಲು ₹ 2,300 ಕೋಟಿ ಮೌಲ್ಯದ ಮೂರು ರೈಲ್ವೆ ಯೋಜನೆಗಳನ್ನು ಪ್ರಧಾನಮಂತ್ರಿ ದೇಶಕ್ಕೆ ಸಮರ್ಪಿಸಿದರು.