160 ಕಿ.ಮೀ ವೇಗ, ಐಷಾರಾಮಿ, ವೈಫೈ; ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನಲ್ಲಿದೆ ಹಲವು ವಿಶೇಷತೆ!

ಭಾರತದ ರೈಲು ಇತಿಹಾಸದಲ್ಲಿ ವಂದೇ ಭಾರತ್ ಹೊಸ ಕ್ರಾಂತಿ ಮಾಡಿದೆ. ಇದೀಗ ದೇಶದ ಮೂಲೆ ಮೂಲೆಗೂ ವಂದೇ ಭಾರತ್ ರೈಲು ಸಂಟಾರಕ್ಕೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಇದೀಗ ಜೂನ್ 26 ರಂದು ಪ್ರಧಾನಿ ಮೋದಿ ಬೆಂಗಳೂರು,-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.

PM Modi likely to flag off Karnataka 2nd Vande Bharat express train from Bengaluru to Hubballi Dharwad ckm

ಬೆಂಗಳೂರು(ಜೂ.15): ಭಾರತದಲ್ಲಿ ವಂದೇ ಭಾರತ್ ರೈಲಿಗೆ ಬೇಡಿಕೆ ಹೆಚ್ಚಾಗಿದೆ. ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ದೇಶದ ಮೂಲ ಮೂಲೆಗೆ ವಂದೇ ಭಾರತ್ ರೈಲು ಯೋಜನೆ ವಿಸ್ತರಿಸುತ್ತಿದೆ. ಇದೀಗ ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಇನ್ನುಳಿದ ನಾಲ್ಕು ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. 

 ಮಂಗಳವಾರ ಹೊರತುಪಡಿಸಿ ಇನ್ನುಳಿದ ಎಲ್ಲಾ ದಿನ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಬೆಂಗಳೂರಿನಿಂದ ವಂದೇ ಭಾರತ್ ರೈಲು ಪ್ರಯಾಣ ಆರಂಭಿಸಲಿದೆ. ಯಶವಂತಪುರ ರೈಲು ನಿಲ್ದಾಣ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಕಲ ನಿಲ್ದಾಣಗಳಲ್ಲಿ ನಿಲ್ಲಲಿದೆ. ಹುಬ್ಬಳ್ಳಿಯಿಂದ-ಧಾರವಾಡ ಪ್ರಯಾಣಕ್ಕೆ 6 ಗಂಟೆ 55 ನಿಮಿಷ ಸಮಯ ತೆಗೆದುಕೊಳ್ಳಲಿದೆ. 

ಒಡಿಶಾ ತ್ರಿವಳಿ ರೈಲು ದುರಂತ ಹಿನ್ನೆಲೆ : ವಂದೇ ಭಾರತ್ ಉದ್ಘಾಟನೆ ರದ್ದು

ಬೆಳಗ್ಗೆ 5.45ಕ್ಕೆ ಬೆಂಗಳೂರು ನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ರೈಲು ಸಂಚಾರ ಆರಂಭಗೊಳ್ಳಲಿದೆ. ಮಧ್ಯಾಹ್ನ 12.40ಕ್ಕೆ ಧಾರವಾಡ ತಲುಪಲಿದೆ. ಇನ್ನು ಧಾರವಾಡದಿಂದ  ಮಧ್ಯಾಹ್ನ 1.15 ಕ್ಕೆ ವಂದೇ ಭಾರತ್ ರೈಲು ಹೊರಡಲಿದ್ದು, ರಾತ್ರಿ 8.10ಕ್ಕೆ ಬೆಂಗಳೂರು ತಲುಪಲಿದೆ. ಜೂನ್ 26 ರಂದು ಪ್ರಧಾನಿ ಮೋದಿ  ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. 

ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಕರ್ನಾಟಕದ 2ನೇ ವಂದೇ ಭಾರತ್ ರೈಲು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ಮೈಸೂರು-ಚೆನ್ನೈ ವಂದೇಭಾರತ್‌ ಆರಂಭಿಸಲಾಗಿತ್ತು. ಕರ್ನಾಟಕದಲ್ಲಿ ಜೂನ್ 26 ರಿಂದ ಕರ್ನಾಟಕದಲ್ಲಿ ಪ್ರತಿ ನಿತ್ಯ 2 ವಂದೇ ಭಾರತ್ ರೈಲು ಸಂಚಾರ ನಡೆಸಲಿದೆ.

ಈಶಾನ್ಯ ಭಾರತಕ್ಕೂ ಸಿಕ್ತು ವಂದೇ ಭಾರತ್‌ ರೈಲು: ದೇಶದ 18ನೇ ಸೆಮಿ ಹೈ ಸ್ಪೀಡ್‌ ಟ್ರೈನಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು- ಹುಬ್ಬಳ್ಳಿ ವಂದೇ ಭಾರತ್ ರೈಲಿನ ಜೊತೆಗೆ ಮುಂಬೈ- ಗೋವಾ, ಪಟನಾ- ರಾಂಚಿ, ಭೋಪಾಲ್‌- ಇಂದೋರ್‌ ಮತ್ತು ಭೋಪಾಲ್‌- ಜಬ್ಬಲ್‌ಪುರ ಮಾರ್ಗಗಳಲ್ಲಿ ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತದೆ. ಇದೇ ಮೊದಲ ಬಾರಿಗೆ ಒಂದೇ ದಿನ 5 ವಂದೇಭಾರತ್‌ ರೈಲುಗಳಿಗೆ ಚಾಲನೆ ನೀಡಲಾಗುತ್ತಿದೆ. 288 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬಳಿಕ ಮೊದಲ ಬಾರಿಗೆ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಾಗುತ್ತಿದ್ದು, ದುರಂತದ ಬಳಿಕ ಮುಂಬೈ ಮತ್ತು ಗೋವಾ ನಡುವಿನ ರೈಲು ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು.

ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಷಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದೆ. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರಿಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ. ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂಚಾಲಿತ ಬಾಗಿಲು, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ಸಿಸಿ ಕ್ಯಾಮೆರಾ, ಬಯೋ ಶೌಚಾಲಯ ವ್ಯವಸ್ಥೆ ಇದೆ 

Latest Videos
Follow Us:
Download App:
  • android
  • ios