Asianet Suvarna News Asianet Suvarna News

ವಂದೇಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ, ಅಹಮ್ಮದಾಬಾದ್‌ಗೆ ಮೋದಿ ಪ್ರಯಾಣ!

ವಂದೇಭಾರತ್ ಎಕ್ಸ್‌ಪ್ರೆಸ್ ರೈಲುನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಗಾಂಧಿನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ರೈಲಿನಲ್ಲಿ ಗಾಂಧಿನಗರದಿಂದ ಅಹಮ್ಮದಾಬಾದ್‌ಗೆ ಪ್ರಯಾಣ ಮಾಡಿದ್ದಾರೆ.

PM modi on board the Vande Bharat Express from Gandhinagar to Ahmedabad after flags off ckm
Author
First Published Sep 30, 2022, 11:18 AM IST

ಗಾಂಧಿನಗರ(ಸೆ.30): ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರಕ್ಕೆ ಆಗಮಿಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ. ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಹಮ್ಮದಾಬಾದ್‌ಗೆ ಪ್ರಯಾಣ ಮಾಡಿದ್ದಾರೆ. ಗಾಂಧಿನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಹಾಜರಿದ್ದರು. ಮೋದಿ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆಗಳು ಮೊಳಗಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆ ಮಾಡುತ್ತಿದ್ದಂತೆ ವಂದೇ ಭಾರತ್ ಘೋಷಣೆ ಮೊಳಗಿತು.

ರೈಲಿನಲ್ಲಿ ಪ್ರಧಾನಿ ಮೋದಿ, ವಂದೇ ಭಾರತ್ ರೈಲು(vande bharat express) ತಯಾರಿಕೆಯಲ್ಲಿ ದುಡಿದ ಕಾರ್ಮಿಕರು, ಎಂಜಿನೀಯರ್ಸ್ ಹಾಗೂ ಇತರ ಸಿಬ್ಬಂದಿಗಳ ಜೊತೆ ಮೋದಿ(PM Modi) ಸಂವಾದ ನಡೆಸಿದ್ದಾರೆ. ಇದೇ ಪ್ರಯಾಣದಲ್ಲಿ ಮೋದಿ ವಂದೇ ಭಾರತ್ ರೈಲಿನಲ್ಲಿ ಸ್ಟಾರ್ಟ್ ಅಪ್ ನಡೆಸುತ್ತಿರುವ ಮಹಿಳೆಯರು, ಸಂಶೋಧರ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ.  ಗಾಂಧಿನಗರದಿಂದ ರೈಲಿನಲ್ಲಿ ಪ್ರಯಾಣಿಸಿದ ಮೋದಿ ಅಹಮ್ಮದಾಬಾದ್‍‌ಗೆ ಬಂದಿಳಿಯಲಿದ್ದಾರೆ. ಇಲ್ಲಿ ಮೆಟ್ರೋ ರೈಲು ಯೋಜನೆ ಉದ್ಘಾಟಿಸಲಿದ್ದಾರೆ. ಅಹಮ್ಮದಾಬಾದ್‌ನ ಕಾಲುಪುರದ ರೈಲು ನಿಲ್ದಾಣದಲ್ಲಿ ಮೋದಿ ಇಳಿಯಲಿದ್ದಾರೆ. ಇಲ್ಲಿ ಮೊದಲ ಹಂತದ ಮೆಟ್ರೋ ರೈಲು ಯೋಜನೆ ಉದ್ಘಾಟನೆ ಮಾಡಲಿದ್ದಾರೆ. ಈ ಯೋಜನೆ 12,925 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕುರಿತು ಮಾಹಿತಿ ಪಡೆದ ಮೋದಿ ಅದೇ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. 

 

 

ಕೃಷ್ಣನ ರೂಪದಲ್ಲಿ ಮೋದಿ: ಪ್ರಾಣೇಶ್‌ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

ಕ್ರೀಡಾಕೂಟಕ್ಕೆ ಚಾಲನೆ
ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ನಿನ್ನೆ(ಸೆ.29) ಸಂಜೆ 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅಹಮದಬಾದ್‌ನಲ್ಲಿ ಗುರುವಾರ ಅದ್ಧೂರಿ ಚಾಲನೆ ದೊರೆಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಹೆಸರಿನಲ್ಲೇ ಇರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಅ.10ರ ವರೆಗೂ ನಡೆಯಲಿರುವ ಕ್ರೀಡಾಕೂಟದಲ್ಲಿ ದೇಶದ 28 ರಾಜ್ಯ, 8 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 7000ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಉದ್ಘಾಟನಾ ಸಮಾರಂಭದ ವೇಳೆ ಭಾರತದ ಒಲಿಂಪಿಕ್‌ ಪದಕ ವಿಜೇತ ಕ್ರೀಡಾಪಟುಗಳಾದ ನೀರಜ್‌ ಚೋಪ್ರಾ, ಪಿ.ವಿ.ಸಿಂಧು, ಮೀರಾಬಾಯಿ ಚಾನು, ರವಿ ದಹಿಯಾ, ಮಾಜಿ ಕ್ರೀಡಾಪಟುಗಳಾದ ಗಗನ್‌ ನಾರಂಗ್‌, ಅಂಜು ಬಾಬಿ ಜಾಜ್‌ರ್‍ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಖ್ಯಾತ ಗಾಯಕರಾದ ಶಂಕರ್‌ ಮಹದೇವನ್‌, ಮೋಹಿತ್‌ ಚೌಹಾಣ್‌ ಪ್ರದರ್ಶನ ನೀಡಿದರು. ನೂರಾರು ಕಲಾವಿದರ ನೃತ್ಯ ಪ್ರದರ್ಶನ ನೋಡುಗರ ಮನ ಸೆಳಯಿತು. ಸುಮಾರು 1 ಲಕ್ಷ ಜನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಉಕ್ರೇನ್ - ರಷ್ಯಾ ಯುದ್ಧಕ್ಕೆ Narendra Modi ವಿರೋಧಿಸಿದ್ದು ಸರಿ: ವಿಶ್ವದ ನಾಯಕರಿಂದ ಶ್ಲಾಘನೆ
 

Follow Us:
Download App:
  • android
  • ios