3.30 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ

ನವದೆಹಲಿಯಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 3.30 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

PM Modi Pariksha Pe Charcha with over 3.30 crore students mrq

ನವದೆಹಲಿ: ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10ರಂದು ನವದೆಹಲಿಯಲ್ಲಿ ನಡೆಯಲಿದೆ.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಧಿಕೃತ ಪೋರ್ಟಲ್‌ನಲ್ಲಿ ಇದುವರೆಗೆ 3.30 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು , 20.71 ಲಕ್ಷಕ್ಕೂ ಹೆಚ್ಚು ಶಿಕ್ಷಕರು, 5.51 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ, ವಿದ್ಯಾರ್ಥಿಗಳಿಂದ ಪ್ರಶ್ನೆ ಸ್ವೀಕರಿಸಿ ಅದಕ್ಕೆ ಉತ್ತರ ನೀಡಲಿದ್ದಾರೆ. ಜೊತೆಗೆ ಅವರೊಂದಿಗೆ ತಮ್ಮ ಜೀವನದ ಅನುಭವ ಹಂಚಿಕೊಳ್ಳಲಿದ್ದಾರೆ.

8ನೇ ಆವೃತ್ತಿಯ ಈ ಕಾರ್ಯಕ್ರಮದಲ್ಲಿ ಈ ಬಾರಿ ಪ್ರಧಾನಿ ಮೋದಿ ಜೊತೆಗೆ ನಟಿ ದೀಪಿಕಾ ಪಡುಕೋಣೆ, ಬಾಕ್ಸರ್‌ ಮೇರಿ ಕೋಮ್‌, ಅಧ್ಯಾತ್ಮ ಗುರು ಸದ್ಗುರು, ಪ್ಯಾರಾಲಿಂಪಿಕ್ಸ್‌ ಚಿನ್ನದ ಪದಕ ಪುರಸ್ಕೃತೆ ಅವನಿ ಲೇಖರ, ಆಹಾರ ತಜ್ಞೆ ರುತುಜಾ ದಿವೇಕರ್‌, ಸೋನಾಲಿ ಸಭರ್‌ವಾಲ್‌, ಆರೋಗ್ಯ ತಜ್ಞೆ ಫುಡ್‌ ಫರ್ಮೇರ್‌, ಯುಟ್ಯೂಬರ್‌ ಟೆಕ್ನಿಕಲ್‌ ಗುರೂಜಿ, ರಾಧಿಕಾ ಗುಪ್ತಾ, ನಟರಾದ ಭೂಮಿ ಪೆಡ್ನೇಕರ್‌, ವಿಕ್ರಾಂತ್‌ ಮಸ್ಸಿ, ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ರಾಜ್ಯ ಬಿಜೆಪಿಯ ಭಿನ್ನರ ದೆಹಲಿ ಯಾತ್ರೆ ಬೆನ್ನಲ್ಲೇ ವಿಜಯೇಂದ್ರ ದಿಢೀರ್‌ ದಿಲ್ಲಿ ಭೇಟಿ ಕುತೂಹಲ

Latest Videos
Follow Us:
Download App:
  • android
  • ios