ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಫೆಬ್ರವರಿ 12 ಹಾಗೂ 13 ಎರಡು ದಿನಗಳ ಕಾಲ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಟ್ರಂಪ್ ಜೊತೆ ಮಹತ್ವದ ಮಾತಕುತೆ ನಡೆಸಲಿದ್ದಾರೆ.
ನವದೆಹಲಿ(ಫೆ.03) ಭಾರತದಲ್ಲಿ ಡೋನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಹಾಗೂ ಆಮಂತ್ರಣ ಕುರಿತು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿದೇಶಾಂಗ ಸಚಿವ ಜೈಶಂಕರ್, ಡಿಸೆಂಬರ್ ತಿಂಗಳಲ್ಲಿ ಅಮೆರಿಕಾಗೆ ತೆರಳಿ ಆಮಂತ್ರಣ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ನಡೆದ ಬೆಳವಣಿಗೆ ಮತ್ತೆ ಕಾಂಗ್ರೆಸ್‌ಗೆ ಹಿನ್ನಡೆ ತಂದಿದೆ. ಇದೀಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 12 ಹಾಗೂ 13ರಂದು ಪ್ರಧಾನಿ ನರೇಂದ್ರ ಮೋದಿ ಅಮರಿಕ ಪ್ರವಾಸ ಮಾಡಲಿದ್ದಾರೆ. ಡೋನಾಲ್ಡ್ ಟ್ರಂಪ್ ಆಹ್ವಾನದ ಮೇರೆಗೆ ಮೋದಿ ಯುಎಸ್‌ಗೆ ಭೇಟಿ ನೀಡಲಿದ್ದಾರೆ. 2 ದಿನಗಳ ಪ್ರವಾಸದಲ್ಲಿ ಟ್ರಂಪ್ ಜೊತೆ ಚರ್ಚೆ ನಡೆಸಲಿದ್ದಾರೆ.
ಫೆಬ್ರವರಿ 10 ಹಾಗೂ 12ರಂದು ಪ್ರಧಾನಿ ಮೋದಿ ಅಧಿಕೃತ ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ. ಫ್ರಾನ್ಸ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳುತ್ತಿಲ್ಲ. ಅಲ್ಲಿಂದ ನೇರವಾಗಿ ಅಮೆರಿಕಾಗೆ ತೆರಳುತ್ತಿದ್ದಾರೆ. ಡೋನಾಲ್ಡ್ ಟ್ರಂಪ್ ಎರಡನೇ ಭಾರಿಗೆ ಅಧಿಕಾರಕ್ಕೇರಿದ ಬಳಿಕ ಇದು ಪ್ರಧಾನಿ ಮೋದಿಯ ಮೊದಲ ಭೇಟಿಯಾಗಿದೆ. ವಿಶೇಷ ಅಂದರೆ ಡೋನಾಲ್ಡ್ ಟ್ರಂಪ್ ಅಧಿಕಾರವಹಿಸಿಕೊಂಡ ಬಳಿಕ ಅಮೆರಿಕಾಗೆ ತೆರಳಿ ಅಧ್ಯಕ್ಷರ ಜೊತೆ ಚರ್ಚಿಸಲಿರುವ ಮೊದಲ ಅಂತಾರಾಷ್ಟ್ರೀಯ ನಾಯಕ ಅನ್ನೋ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ.
ವಿದೇಶದಿಂದ ಭಾರತದಲ್ಲಿ ತಲ್ಲಣ ಸೃಷ್ಟಿಸುವ ಪ್ರಯತ್ನಗಳು ಈ ಬಾರಿ ನಡೆದಿಲ್ಲ: ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅಮರಿಕ ಬೇಟಿಯ ಅಧೀಕೃತ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ. ಪ್ರಮುಖವಾಗಿ ರಕ್ಷಣಾ ಕ್ಷೇತ್ರ, ಪ್ರಾದೇಶಿಕ ಸುರಕ್ಷತೆ, ವ್ಯಾಪಾರ ವಹಿವಾಟು ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಮೋದಿ ಹಾಗೂ ಟ್ರಂಪ್ ಚರ್ಚೆ ನಡೆಸುವ ಸಾಧ್ಯತೆ ಇದೆ. ಟ್ರಂಪ್ 47ನೇ ಅಧ್ಯಕ್ಷರಾಗಿ ಜನವರಿ 20 ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಎಕ್ಸ್ ಮೂಲಕ ಡೋನಾಲ್ಡ್ ಟ್ರಂಪ್‌ಗೆ ಅಭಿನಂದನೆ ಸಲ್ಲಿಸಿದ್ದ ಮೋದಿ, ಬಳಿಕ ಜನವರಿ 27ರಂದು ಫೋನ್ ಕಾಲ್ ಮೂಲಕ ಟ್ರಂಪ್ ಜೊತೆ ಮಾತನಾಡಿದ್ದರು. ಈ ವೇಳೆ ಹಲವು ಕ್ಷೇತ್ರಗಳಲ್ಲಿ ಅಮೆರಿಕ ಹಾಗೂ ಭಾರತ ಜಂಟಿಯಾಗಿ ಹೆಜ್ಜೆ ಹಾಕಲು ಉತ್ಸುಕರಾಗಿರುವುದಾಗಿ ಹೇಳಿದ್ದರು. ಇಷ್ಟೇ ಅಲ್ಲ ದ್ವೀಪಕ್ಷಿಯ ಸಂಬಂಧ ಮತ್ತಷ್ಟು ಬಲಪಡಿಸುವು ಕುರಿತು ಮಾತನಾಡಿದ್ದರು.
ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ವಿದೇಶಾಂಕ ಸಚಿವ ಜೈಶಂಕರ್ ಭಾಗಿಯಾಗಿದ್ದರು. ಮೋದಿ ನೀಡಿದ ಪತ್ರವನ್ನು ಟ್ರಂಪ್‌ಗೆ ತಲುಪಿಸಿದ್ದರು. ಮೋದಿ ಸಮಾರಂಭಕ್ಕೆ ಹಾಜರಾಗಿಲ್ಲ ಯಾಕೆ? ಆಮಂತ್ರಣ ನೀಡಿಲ್ಲ ಅನ್ನೋ ಆರೋಪಗಳು ಕೇಳಿಬಂದಿತ್ತು. ಈ ಆರೋಪಗಳ ಮುಂದುವರಿದ ಭಾಗವಾಗಿ ಇಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದರು. ಮೋದಿಗೆ ಟ್ರಂಪ್ ಆಹ್ವಾನ ನೀಡಿರಲಿಲ್ಲ. ಡಿಸೆಂಬರ್ ತಿಂಗಳಲ್ಲಿ ವಿದೇಶಾಂಗ ಸಚಿವರು ಅಮೆರಿಕ ಪ್ರವಾಸ ಮಾಡಿದ್ದರು. ಈ ವೇಳೆ ಕಾಡಿ ಬೇಡಿ ಆಹ್ವಾನ ಪಡೆದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಫೆಬ್ರವರಿ 10 ಹಾಗೂ 12 ರಂದು ಫ್ರಾನ್ಸ್ ಸರ್ಕಾರ ಎಐ ಸಮ್ಮಿಟ್ ಆಯೋಜಿಸಿದೆ. ಈ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಫ್ರಾನ್ಸ್‌ಗೆ ತೆರಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವದ ಪ್ರಬಲ ನಾಯಕರು, ತಾಂತ್ರಿಕ ಕ್ಷೇತ್ರದ ದಿಗ್ಗಜರು, ಉದ್ಯಮಿಗಳು ಸೇರಿದಂತೆ ಹಲವು ಗಣ್ಯರನ್ನು ಫ್ರಾನ್ಸ್ ಆಹ್ವಾನಿಸಿದೆ.
ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ ಗಾಂಧಿ: ಬುಡಕಟ್ಟು ಜನರಿಗೆ ಅಪಮಾನ ಎಂದ ಮೋದಿ
