ಬೆಂಗಳೂರು ಅಭಿವೃದ್ಧಿಗೆ ಹಣವಿಲ್ಲ ಎಂದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಬೆಂಗಳೂರಿನ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಇದೇ ರೀತಿ ರಾಜಸ್ಥಾನ ದೊಡ್ಡ ಸಾಲದಲ್ಲಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಮೋದಿ ವಗ್ದಾಳಿ ನಡೆಸಿದ್ದಾರೆ.
ಪುಣೆ (ಆಗಸ್ಟ್ 1, 2023): ಪ್ರಧಾನಿ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ಇದೇ ರೀತಿ ರಾಜಸ್ಥಾನ ದೊಡ್ಡ ಸಾಲದಲ್ಲಿದೆ. ಇದರಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಮೋದಿ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಿದ್ದ ವೇಳೆ ಮೋದಿ ಈ ಮಾತನ್ನಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ತ್ವರಿತಗತಿಯ ಅಭಿವೃದ್ಧಿಯನ್ನು ಖಾತರಿಪಡಿಸುವಲ್ಲಿ ವಿಫಲವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಾರಾಷ್ಟ್ರ ಸರ್ಕಾರವನ್ನು ವಿಶೇಷವಾಗಿ ಪುಣೆಯ ಆಡಳಿತವನ್ನು ಅಭಿವೃದ್ಧಿ ವಿಚಾರದಲ್ಲಿ ಕ್ಷಿಪ್ರ ಪ್ರಗತಿಗಾಗಿ ಶ್ಲಾಘಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, "ಬೆಂಗಳೂರಿನ ಅಭಿವೃದ್ಧಿಗೆ ತನ್ನ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ. ರಾಜಸ್ಥಾನದಲ್ಲಿ ರಾಜ್ಯವು ದೊಡ್ಡ ಸಾಲದಲ್ಲಿದೆ ಮತ್ತು ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ" ಎಂದು ಮೋದಿ ಹೇಳಿದರು.
ಇದನ್ನು ಓದಿ: ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಅವರ ಆಧಾರ್ ಕಾರ್ಡ್‌ಗಳನ್ನೇ ತಿರುಚಿ ದುರುಪಯೋಗ ಮಾಡ್ಕೊಂಡ ಭೂಪ!
ಮಹಾರಾಷ್ಟ್ರದ ಪುಣೆ ನಗರದ ಮೆಟ್ರೋ ರೈಲು ಜಾಲದ ಎರಡು ವಿಸ್ತೃತ ವಿಸ್ತರಣೆಗಳನ್ನು ಉದ್ಘಾಟಿಸಿದ ನಂತರ ಮೋದಿ ಪುಣೆಯಲ್ಲಿ ಮಾತನಾಡಿದ್ದು, ಈ ವೇಳೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಬೀಗದ ಕೈಗಳನ್ನು ಹಸ್ತಾಂತರಿಸಿದ್ದಾರೆ. “ಫಿನ್‌ಟೆಕ್, ಬಯೋಟೆಕ್ ಅಥವಾ ಅಗ್ರಿಟೆಕ್ ಆಗಿರಲಿ, ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುತ್ತಿದೆ. ಪುಣೆ ಕೂಡ ಇವುಗಳಿಂದ ದೊಡ್ಡ ಲಾಭ ಪಡೆಯುತ್ತಿದೆ ಎಂದು ಮೋದಿ ಮಹಾರಾಷ್ಟ್ರ ಸರ್ಕಾರವನ್ನು ಶ್ಲಾಘಿಸಿದರು.
ಪುಣೆಯಂತೆ ಬೆಂಗಳೂರು ದೊಡ್ಡ ಐಟಿ ಮತ್ತು ಜಾಗತಿಕ ಹೂಡಿಕೆದಾರರ ಕೇಂದ್ರವಾಗಿದೆ. ಬೆಂಗಳೂರು ಮತ್ತು ಕರ್ನಾಟಕ ಶೀಘ್ರ ಅಭಿವೃದ್ಧಿ ಹೊಂದಬೇಕು. ಆದರೆ, ಘೋಷಣೆಗಳನ್ನು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ರಚಿಸಿದೆ. ಆದರೆ, ಇದರ ದುಷ್ಪರಿಣಾಮಗಳನ್ನು ಇಡೀ ದೇಶವು ಕಳವಳದೊಂದಿಗೆ ನೋಡುತ್ತಿದೆ’’ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಟೀಕೆ ಮಾಡಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ಮಾಡಿದ ಜನಪ್ರಿಯ ಘೋಷಣೆಗಳನ್ನು ಉಲ್ಲೇಖಿಸಿ ಹೇಳಿದರು.
ಇದನ್ನೂ ಓದಿ: ಆಕ್ಸಿಜನ್ ಮಾಸ್ಕ್ ಧರಿಸಿದ್ದ ಸೋನಿಯಾ ಗಾಂಧಿ: ಕಾಂಗ್ರೆಸ್ ನಾಯಕಿ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಅಲ್ಲದೆ, ಒಂದೆಡೆ ಮಹಾರಾಷ್ಟ್ರ ಕ್ಷಿಪ್ರಗತಿಯಲ್ಲಿ ದಾಪುಗಾಲು ಹಾಕುತ್ತಿದ್ದರೆ ಇನ್ನೊಂದೆಡೆ ಕರ್ನಾಟಕದಲ್ಲಿ ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಅದರೆ, ದೊಡ್ಡ ಐಟಿ ಹಬ್ ಮತ್ತು ಜಾಗತಿಕ ಹೂಡಿಕೆದಾರರ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಏನಾಗುತ್ತಿದೆ ಎಂಬುದನ್ನು ಇಡೀ ರಾಷ್ಟ್ರವೇ ನೋಡುತ್ತಿದೆ. ಕರ್ನಾಟಕ ಕ್ಷಿಪ್ರ ಪ್ರಗತಿಯನ್ನು ಸಾಧಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಜನರು ತೊಂದರೆ ಅನುಭವಿಸಬೇಕಾಗಿದೆ ಎಂದೂ ಪ್ರಧಾನಿ ಮೋದಿ ಹೇಳಿದ್ದಾರೆ.
“ಬೆಂಗಳೂರು ಅಥವಾ ಕರ್ನಾಟಕದ ಅಭಿವೃದ್ಧಿಗೆ ತಮ್ಮ ಬಳಿ ಹಣವಿಲ್ಲ ಎಂದು ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ. ರಾಜಸ್ಥಾನದಲ್ಲೂ ಅದೇ ಪರಿಸ್ಥಿತಿ ಇದೆ. ಸಾಲ ಹೆಚ್ಚುತ್ತಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ' ಎಂದೂ ಮೋದಿ ದೂರಿದ್ದಾರೆ.
ಇದನ್ನೂ ಓದಿ: ಪ್ರಧಾನಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ಗಂಗೆಗೆ ಅರ್ಪಿಸಿದ ಮೋದಿ