ನವೆಹಲಿ(ಡಿ.11): ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸುತ್ತಿರುವ ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ ಬೀಸಿದ್ದಾರೆ. CAB ವಿರೋಧಿಸುತ್ತಿರುವವರ ನಾಲಿಗೆ ಮೇಲೆ ಪಾಕಿಸ್ತಾನ 
ಕುಣಿದಾಡುತ್ತಿದೆ ಎಂದು ಪ್ರಧಾನಿ ಹರಿಹಾಯ್ದಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಮಸೂದೆಯನ್ನು ವಿರೋಧಿಸುವವರು ಪಾಕಿಸ್ತಾನ ಭಾಷೆಯನ್ನೇ ಮಾತನಾಡುತ್ತಿದ್ದಾರೆ
ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪೌರತ್ವ ಮಸೂದೆ ಧಾರ್ಮಿಕ ಹಿಂಸಾಚಾರಗಳಳಿಗೆ ಬಲಿಯಾಗಿ ಬದುಕು ಕಳೆದುಕೊಂಡವರಿಗೆ ಮರಳಿ ಬದುಕು
ಕಟ್ಟಿಕೊಳ್ಳುವ ಸುವರ್ಣಾವಕಾಶ ನೀಡಲಿದೆ ಎಂದು ಹೇಳಿದರು.

ಕಾಂಗ್ರೆಸ್, ಎಡಪಕ್ಷಗಳು ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿವೆ. ಮಸೂದೆ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯಲಿದೆ ಎಂಬುದು ವಿಪಕ್ಷಗಳ ಆರೋಪವಾಗಿದೆ.

ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

ಈ ಮಧ್ಯೆ ಇಂದು 12 ಗಂಟೆಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದ್ದಾರೆ. ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದ್ದು, ರಾಜ್ಯಸಭೆಯಲ್ಲೂ ಮಸೂದೆಗೆ ಬೆಂಬಲ ಸಿಗುವ ವಿಶ್ವಾಸದಲ್ಲಿ ಸರ್ಕಾರ ಇದೆ.