ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಬೇಜವಾಬ್ದಾರಿಯುತ ಹಣಕಾಸು ನೀತಿಗಳು ಮತ್ತು ಜನಪ್ರಿಯತೆಯು ಅಲ್ಪಾವಧಿಯಲ್ಲಿ ಉತ್ತಮ ರಾಜಕೀಯ ಫಲಿತಾಂಶಗಳನ್ನು ನೀಡಬಹುದು. ಆದರೆ ದೀರ್ಘಾವಧಿಯಲ್ಲಿ ದೊಡ್ಡ ಸಾಮಾಜಿಕ ಮತ್ತು ಆರ್ಥಿಕ ಬೆಲೆ ತೆರಬೇಕಾಗುತ್ತದೆ ಅಂತ ಮೋದಿ ಕಿಡಿ ಕಾರಿದ್ದಾರೆ.
ನವದೆಹಲಿ (ಸೆಪ್ಟೆಂಬರ್ 4, 2023): ಸರ್ಕಾರದ ನೀತಿಗಳಲ್ಲಿ ಹಣಕಾಸಿನ ಶಿಸ್ತು ಅತ್ಯಂತ ಅಗತ್ಯ ಎಂದು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಬೇಜವಾಬ್ದಾರಿತನದ ಹಣಕಾಸು ನೀತಿಗಳು ಹಾಗೂ ಜನಪ್ರಿಯ ಕಾರ್ಯಕ್ರಮಗಳು ಅಲ್ಪಾವಧಿಯಲ್ಲಿ ರಾಜಕೀಯ ಲಾಭವನ್ನು ತಂದುಕೊಡಬಲ್ಲವು. ಆದರೆ ಇಂಥ ಕೊಡುಗೆಗಳಿಂದ ದೀರ್ಘಾವಧಿಯಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಭಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಪರೋಕ್ಷವಾಗಿ ಉಚಿತ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ. ಜೊತೆಗೆ ಇಂಥ ಪರಿಣಾಮಗಳಿಂದ ಹೆಚ್ಚು ತೊಂದರೆಗೆ ಒಳಗಾಗುವವರು ಬಡವರು ಹಾಗೂ ದುರ್ಬಲ ವರ್ಗದವರೇ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಮುಂಬರುವ ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಸಾಲದ ಬಿಕ್ಕಟ್ಟಿನ ಕುರಿತು ಪ್ರಶ್ನೆ ಕೇಳಿದ ವೇಳೆ ವಿತ್ತೀಯ ಶಿಸ್ತಿನ ಅಗತ್ಯವನ್ನು ಪ್ರತಿಪಾದಿಸಿದ್ದಾರೆ. ‘ಸಾಲದ ಬಿಕ್ಕಟ್ಟು ಜಗತ್ತಿಗೆ ಅದರಲ್ಲೂ ವಿಶೇಷವಾಗಿ ಅಭಿವೃದ್ಧಿಶೀಲ ದೇಶಗಳಿಗೆ ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಸಾಲದ ಬಿಕ್ಕಟ್ಟಿಗೆ ಸಿಲುಕಿರುವ ಅಥವಾ ಬಿಕ್ಕಟ್ಟು ಅನುಭವಿಸುತ್ತಿರುವ ದೇಶಗಳು ಆರ್ಥಿಕ ಶಿಸ್ತಿಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿವೆ. ಇಂತಹ ದೇಶಗಳನ್ನು ಗಮನಿಸಿದ ಹಲವು ದೇಶಗಳು ಅಂತಹ ಬಿಕ್ಕಟ್ಟು ತಡೆಯುವ ವಿಚಾರದಲ್ಲಿ ಎಚ್ಚರಿಕೆ ವಹಿಸಿವೆ ಎಂದು ಸಂದರ್ಶನದಲ್ಲಿ ಮೋದಿ ತಿಳಿಸಿದ್ದಾರೆ.
ಇದನ್ನು ಓದಿ: G20 ಶೃಂಗಸಭೆಗೆ ಹೈಟೆಕ್ ಭದ್ರತೆ: ಗಣ್ಯರಿಗೆ ಬುಲೆಟ್‌ಪ್ರೂಫ್ ಲಿಮೋಸಿನ್ ಕಾರು, ಫೇಸ್ ರೆಕಗ್ನಿಷನ್ ತಂತ್ರಜ್ಞಾನ ಅಳವಡಿಕೆ
ಈ ಕಾರಣಕ್ಕಾಗಿಯೇ ನಾವು ಕೂಡಾ ವಿತ್ತೀಯ ಶಿಸ್ತು ಹೊಂದಿರಬೇಕು ಎಂದು ನಾನು ಪ್ರತಿಪಾದಿಸುವುದು. ‘ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಬೇಜವಾಬ್ದಾರಿಯುತ ಹಣಕಾಸು ನೀತಿಗಳು ಮತ್ತು ಜನಪ್ರಿಯತೆಯು ಅಲ್ಪಾವಧಿಯಲ್ಲಿ ಉತ್ತಮ ರಾಜಕೀಯ ಫಲಿತಾಂಶಗಳನ್ನು ನೀಡಬಹುದು. ಆದರೆ ದೀರ್ಘಾವಧಿಯಲ್ಲಿ ದೊಡ್ಡ ಸಾಮಾಜಿಕ ಮತ್ತು ಆರ್ಥಿಕ ಬೆಲೆ ತೆರಬೇಕಾಗುತ್ತದೆ ಎಂದು ನಾನು ‘ಜನಪ್ರಿಯ ಕಾರ್ಯಕ್ರಮ ಆಧರಿತ ರಾಜಕೀಯ’ದ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ಸಭೆಯಲ್ಲಿ ತಿಳಿಹೇಳಿದ್ದೇನೆ’ ಎಂದು ತಿಳಿಸಿದರು.
ಇತ್ತೀಚೆಗಷ್ಟೆ ಮೋದಿ ಅವರು ಕರ್ನಾಟಕದ ಸರ್ಕಾರ ನೀಡುತ್ತಿರುವ ಉಚಿತ ಯೋಜನೆಗಳ ಬಗ್ಗೆ ಕೆಲವು ರಾಜಕೀಯ ರ‍್ಯಾಲಿಗಳಲ್ಲಿ ಹರಿಹಾಯ್ದಿದ್ದರು. ‘ಪುಕ್ಕಟೆ ಸ್ಕೀಂಗಳಿಗೆ ಹೆಚ್ಚು ಹಣ ನೀಡುತ್ತಿರುವ ಕಾರಣ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ ಅನುದಾನ ನೀಡಲು ಆಗುತ್ತಿಲ್ಲ’ ಎಂದಿದ್ದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಉದಾಹರಿಸಿ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ: ಒನ್ ಇಂಡಿಯಾ ಒನ್ ಎಲೆಕ್ಷನ್‌ಗೆ ಮುಂದಾಯ್ತಾ ಕೇಂದ್ರ ಸರ್ಕಾರ? ಅವಧಿಗೆ ಮುನ್ನವೇ ಲೋಕಸಭಾ ಚುನಾವಣೆ!
ಬೇಜವಾಬ್ದಾರಿಯ ಆರ್ಥಿಕ ನೀತಿ ಬೇಡ
ರಾಜ್ಯ ಸರ್ಕಾರಗಳು ಆರ್ಥಿಕ ಶಿಸ್ತಿನ ಬಗ್ಗೆ ಪ್ರಜ್ಞೆ ಹೊಂದಿರಬೇಕು. ಬೇಜವಾಬ್ದಾರಿಯುತ ಹಣಕಾಸು ನೀತಿಗಳು ಮತ್ತು ಜನಪ್ರಿಯತೆಯು ಅಲ್ಪಾವಧಿಯಲ್ಲಿ ಉತ್ತಮ ರಾಜಕೀಯ ಫಲಿತಾಂಶಗಳನ್ನು ನೀಡಬಹುದು. ಆದರೆ ದೀರ್ಘಾವಧಿಯಲ್ಲಿ ದೊಡ್ಡ ಸಾಮಾಜಿಕ ಮತ್ತು ಆರ್ಥಿಕ ಬೆಲೆ ತೆರಬೇಕಾಗುತ್ತದೆ.
- ನರೇಂದ್ರ ಮೋದಿ, ಪ್ರಧಾನಿ
ಇದನ್ನು ಓದಿ: Chandrayaan: ಮೂರು ಮುಖ್ಯ ಉದ್ದೇಶಗಳಲ್ಲಿ 2 ಪೂರ್ಣ; ಇನ್ನೊಂದು ಪ್ರಗತಿಯಲ್ಲಿದೆ: ಇಸ್ರೋ
