Asianet Suvarna News Asianet Suvarna News

ಲೋಕಸಭಾ ಚನಾವಣೆ ಬೆನ್ನಲ್ಲೇ ಮೋದಿ ಸಂಪುಟಕ್ಕೆ ಸರ್ಜರಿ? ಜು.3ಕ್ಕೆ ಮಂತ್ರಿಮಂಡಲ ಸಭೆ!

2024ರ ಲೋಕಸಭಾ ಚುನಾವಣೆಗೆ ತಯಾರಿ ಆರಂಭಗೊಂಡಿದೆ. ಬಿಜೆಪಿ ಸೋಲಿಸಲು ವಿಪಕ್ಷಗಳು ಒಂದಾಗಿದೆ. ಇತ್ತ ಬಿಜೆಪಿ ತನ್ನ ಸಾಧನೆಯನ್ನು ಜನರಬಳಿ ಕೊಂಡೊಯ್ಯಲು ಮುಂದಾಗಿದೆ. ಇದರ ನಡುವೆ ಪ್ರಧಾನಿ ಮೋದಿ ಸಂಪುಟಕ್ಕೆ ಸರ್ಜರಿ ನಡೆಯಲಿದೆ ಅನ್ನೋ ಮಾತುಗಳು ಕೇಳಿಬರುತ್ತಿರುವಾಗಲೇ ಜುಲೈ 3ಕ್ಕೆ ಮಂತ್ರಿ ಮಂಡದ ಸಭೆ ಕರೆಯಲಾಗಿದೆ.

PM Modi to chair Union Council of Ministers meeting on July 3 amid buzz on cabinet reshuffle before Lok Sabha election ckm
Author
First Published Jun 29, 2023, 4:57 PM IST

ನವದೆಹಲಿ(ಜೂ.29) ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿಯಾಗಿದೆ. ವಿಪಕ್ಷ ಮಹಾ ಮೈತ್ರಿ ಮಾಡಿಕೊಂಡು ಹೋರಾಟಕ್ಕೆ ಅಖಾಡ ರೆಡಿ ಮಾಡಿದೆ. ಇತ್ತ ಬಿಜೆಪಿ ತನ್ನ ಸಾಧನೆಗಳನ್ನು ಮುಂದಿಟ್ಟುಕೊಂಡು ಮತ ಕೇಳಲು ತಯಾರಿ ನಡೆಸಿದೆ. ಈಗಾಗಲೇ ವಾಕ್ಸಮರ, ಆರೋಪ-ಪ್ರತ್ಯಾರೋಪಗಳು ಜೋರಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಹಿಮಾಚಲ, ಕರ್ನಾಟಕ ಗೆದ್ದಿರುವ ಕಾಂಗ್ರೆಸ್‌ ಲೋಕಸಭೆ ಗೆಲ್ಲುವ ವಿಶ್ವಾಸದಲ್ಲಿದೆ. ಈ ಬೆಳವಣಿಗೆ ನಡುವೆ ಕೇಂದ್ರ ಸರ್ಕಾರದ ಸಚಿವ ಸಂಪುಟಕ್ಕೆ ಸರ್ಜರಿ ನಡೆಯಲಿದೆ ಅನ್ನೋ ಮಾತುಗಳು ಕೇಳಿಬಂದಿದೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸಂಪುಟ ಪುನಾರಚನೆ ಮಾಡಲು ಪ್ರಧಾನಿ ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಜುಲೈ 3ಕ್ಕೆ ಕೇಂದ್ರ ಮಂತ್ರಿಮಂಡಲದ ಸಭೆ ಕರೆದಿದ್ದಾರೆ.

ಈ ಕರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಹತ್ವದ ಮಾತುಕತೆ ನಡೆಸಿದ್ದಾರೆ.ಜುಲೈ 3 ರಂದು ಕೇಂದ್ರ ಮಂತ್ರಿ ಮಂಡಲದ ಸಭೆ ನಡೆಯಲಿದೆ. ದೆಹಲಿಯ ಪ್ರಗತಿ ಮೈದಾನದಲ್ಲಿರುವ ನೂತನ ಕನ್ವೆಶನ್ ಹಾಲ್‌ನಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಜುಲೈ 3ನೇ ವಾರದಿಂದ ಮಳೆಗಾಲದ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕೂ ಮೊದಲು ಕೇಂದ್ರ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.

ಗ್ಯಾರಂಟಿ ಬೇಕೋ, ಬಿಜೆಪಿ ಬೇಕೋ? ನಿರ್ಧರಿಸಿ; ವಿಪಕ್ಷ ಗೆದ್ದರೆ ಹಗರಣ ಗ್ಯಾರಂಟಿ: ಪ್ರತಿಪಕ್ಷ ಮೈತ್ರಿಗೆ ಮೋದಿ ಚಾಟಿ

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆಸಲಾಗುತ್ತಿರುವ ಸಂಪುಟ ಸರ್ಜರಿ ಕುರಿತು ಕೆಲ ಗೊಂದಲಗಳು, ಊಹಾಪೋಹಗಳು ಹರಿದಾಡುತ್ತಿದೆ. ಚುನಾವಣೆ ದೃಷ್ಟಿಯಿಂದ ಕೆಲ ಸಮುದಾಯದ ನಾಯಕರಿಗೆ ಮಣೆಹಾಕಲು ಕೇಂದ್ರ ಮುಂದಾಗಿದೆ. ಹೀಗಾಗಿ ಯಾರಿಗೆ ಕೊಕ್, ಯಾರಿಗೆ ಸಚಿವನ ಸ್ಥಾನ ಸಿಗಲಿದೆ ಅನ್ನೋ ಚರ್ಚೆ ಜೋರಾಗಿದೆ. 

ಜೂನ್ 28 ರಂದು ಪ್ರಧಾನಿ ಮೋದಿ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಜೊತೆ ಜೊತೆಗೆ ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಚತ್ತೀಸಘಡ ರಾಜ್ಯದ ವಿಧಾನಸಭಾ ಚುನಾವಣೆಗಳೂ ನಡೆಯಲಿದೆ. ಹೀಗಾಗಿ ಬಿಜೆಪಿ ಚುನಾವಣೆ ರಣತಂತ್ರದ ಜೊತೆಗೆ ಸಂಪುಟ ವಿಸ್ತರಣೆಗೂ ಮುಂದಾಗಿದೆ. ಹಿಮಾಚಲ ಪ್ರದೇಶ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಬಿಜೆಪಿಗೆ ಪಾಠ ಕಲಿಸಿದ. ಹೀಗಾಗಿ ಎಚ್ಚರಿಕೆ ಹೆಜ್ಜ ಇಡಲು ಬಿಜೆಪಿ ಸಜ್ಜಾಗಿದೆ.

 

ಪಸ್ಮಂದಾ ಮುಸ್ಲಿಮರನ್ನು ಅಸ್ಪಶೃರನ್ನಾಗಿ ನೋಡಲಾಗ್ತಿದೆ, ಅವರ ಜೊತೆ ನಾವಿದ್ದೇವೆ: ಪ್ರಧಾನಿ ಮೋದಿ

ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಮಾತನಾಡಿದ ಮೋದಿ, ಲೋಕಸಭೆ ಚುನಾವಣೆಗೂ ಮುನ್ನ ಏಕರೂಪ ನೀತಿ ಸಂಹಿತೆ ಜಾರಿಗೆ ಆಗ್ರಹಿಸಿದ್ದಾರೆ. ಇದೇ ವೇಳ ವಿಪಕ್ಷಗಳ ಕುತಂತ್ರದ ಕುರಿತು ಮಾತನಾಡಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಪರ ಸುಪ್ರೀಂ ಕೋರ್ಟೇ ಒಲವು ತೋರಿದೆ. ಆದರೆ ಮತ ಬ್ಯಾಂಕ್‌ ರಾಜಕೀಯದ ಕಾರಣ ವಿಪಕ್ಷಗಳು ಮುಸ್ಲಿಮರ ದಾರಿ ತಪ್ಪಿಸಿ ಪ್ರಚೋದಿಸುತ್ತಿವೆ. ನೀವೇ ಹೇಳಿ. ಕುಟುಂಬದಲ್ಲಿ ಒಬ್ಬ ಸದಸ್ಯನಿಗೆ ಒಂದು ಕಾನೂನು, ಇನ್ನೊಬ್ಬ ಸದಸ್ಯನಿಗೆ ಮತ್ತೊಂದು ಕಾನೂನು ಇರಬೇಕೆ? ಹಾಗಿದ್ದಾಗ ಆ ಮನೆ ನಡೆಯಲು ಸಾಧ್ಯವಿದೆಯೆ? ಇಂಥ ಎರಡೆರಡು ವ್ಯವಸ್ಥೆಗಳ ಮೂಲಕ ದೇಶ ನಡೆಯಲು ಸಾಧ್ಯವೆ?’ ಎಂದು ಪ್ರಶ್ನಿಸಿದರು ಹಾಗೂ ‘ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕು ನೀಡಲಾಗಿದೆ ಎಂಬುದನ್ನು ನೆನಪಿನಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.
 

Follow Us:
Download App:
  • android
  • ios