ದೇಶದಲ್ಲಿ ಕೋವಿಡ್ ಹಾಗೂ H3N2 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ.  ಸ್ಥಿತಿಗತಿ ಅವಲೋಕನ, ಪರಿಸ್ಥಿತಿ ಎದುರಿಸಲು ಆಯಾ ರಾಜ್ಯದಲ್ಲಿ ತೆಗೆದುಕೊಂಡಿರುವ ಮುನ್ನಚ್ಚೆರಿಕೆ ಕುರಿತು ಅವಲೋಕನ ನಡೆಸಲಿದ್ದಾರೆ.  

ನವದೆಹಲಿ(ಮಾ.22): ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಹಾಗೂ H3N2 ಪ್ರಕರಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1000ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ದಾಖಲಾಗಿದೆ. ಇತ್ತ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ. ಸದ್ಯ ಭಾರತದಲ್ಲಿರುವ ಪ್ರಕರಣಗಳು ಹರಡುತ್ತಿರುವ ವೇಗ, ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇಷ್ಟೇ ಅಲ್ಲ ಪ್ರಧಾನಿ ಮೋದಿ ಕೆಲ ಸೂಚನೆ ನೀಡುವ ಸಾಧ್ಯತೆ ಇದೆ.

ಅಧಿಕಾರಿಗಳಿಂದ ಭಾರತದಲ್ಲಿನ ಕೋವಿಡ್ ಹಾಗೂ H3N2 ಪ್ರಕರಣಗಳ ಸಂಖ್ಯೆ ಮಾಹಿತಿ ಪಡೆಯಲಿರುವ ಮೋದಿ, ಆಯಾ ರಾಜ್ಯದಲ್ಲಿನ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಇದೇ ವೇಳೆ ನಗರ ಪ್ರದೇಶಗಳು ಹಾಗೂ ಸದ್ಯ ಕೋವಿಡ್ ಹಾಗೂ H3N2 ಪ್ರರಕರಣ ಹೆಚ್ಚಾಗಿರುವ ಪ್ರದೇಶಗಳ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಇದೇ ವೇಳೆ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಹಾಗೂ H3N2 ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಸಿದ್ಧತೆಗಳು, ಮುನ್ನಚ್ಚೆರಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

ಮೈಸೂರು, ಕಲಬುರಗಿ ಸೇರಿ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಕೊರೋನಾ ಅಲರ್ಟ್‌

ಪ್ರಮುಖವಾಗಿ ಪ್ರಧಾನಿ ಮೋದಿ ಕೋವಿಡ್ ಅಲೆ ಎದುರಿಸು ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ. ಇದೇ ವೇಳೆ ಜನತೆಗೆ ಕೆಲ ಮನವಿ ಮಾಡಲಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ, ಆರೋಗ್ಯ ಸಮಸ್ಯೆ ಕಾಣಿಸಿಕೊಂಡಲ್ಲ, ಹತ್ತಿರದ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ತಪಾಸಣೆ ನಡೆಸಲು ಮನವಿ ಮಾಡಲಿದ್ದಾರೆ. ಇತ್ತ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡುವ ಸಾಧ್ಯತೆ ಇದೆ. ಇದೇ ವೇಳೆ ಎಲ್ಲರಿಗೂ ಲಸಿಕೆ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸುವ ಸಾಧ್ಯತೆ ಇದೆ.

ಕಳೆದ ಕೆಲದಿನಗಳಿಂದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೀಗ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,026ಕ್ಕೆ ಏರಿಕೆಯಾಗಿದೆ.ಪ್ರತಿ ದಿನದ ಪಾಸಿಟಿವಿಟಿ ರೇಟ್ ಶೇಕಡಾ 1.09 ದಾಖಲಾಗಿದ್ದರೆ. ವಾರದ ಪಾಸಿಟಿವಿಟಿ ರೇಟ್ ಶೇಕಜಾ 0.98 ದಾಖಲಾಗಿದೆ.ಕೋವಿಡ್ ಗುಣಮುಖರ ಸಂಖ್ಯೆ ಶೇಕಡಾ 98.79 ದಾಖಲಾಗಿದೆ.

ಭಾರತಕ್ಕೆ ಕೋವಿಡ್‌ ಅಲರ್ಟ್‌, ನಾಲ್ಕು ತಿಂಗಳ ಗರಿಷ್ಠಕ್ಕೇರಿದ ಸೋಂಕಿನ ಪ್ರಮಾಣ!

ಮಂಗಳವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆ ಅವಧಿಯಲ್ಲಿ 699 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿತ್ತು. ಬುಧವಾರ ಬೆಳಗ್ಗೆ ಈ ಪ್ರಕರಣಗಳ ಸಂಖ್ಯೆ 1,134ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಭಾರತದಲ್ಲಿ 500 ರಿಂದ 600 ಪ್ರಕರಣಗಳು ಸರಾಸರಿಯಾಗಿ ಹೆಚ್ಚಾಗುತ್ತಿದೆ. ಇದು ತೀವ್ರಗತಿಯಲ್ಲಿ ಸಾಗಿದರೆ ಮೇ ಅಂತ್ಯಕ್ಕೆ ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮತ್ತೆ ಆತಂಕದ ಗಡಿ ದಾಟಲಿದೆ ಅನ್ನೋ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.