ಕನ್ನಡಿಗರ ಸಂತಸ ಇಮ್ಮಡಿಗೊಂಡಿದೆ. ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾರಿಸು ಕನ್ನಡ ಡಿಂಡಿಮವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕ ಸಂಸ್ಕೃತಿ, ನೃತ್ಯ , ನಾಟಕ ಸೇರಿದಂತೆ ಹಲವು ಸಾಂಸ್ಕೃತಿ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ನವದೆಹಲಿ(ಫೆ.25): ಬಾರಿಸು ಕನ್ನಡ ಡಿಂಡಿಮವ ಹಾಡು ಕೇಳಿದರೆ ಸಾಕು ಕನ್ನಡಭಿಮಾನ ಉಕ್ಕುತ್ತದೆ.ಇಲ್ಲಿನ ನೆಲ ಜಲ, ಸಂಸ್ಕೃತಿ ಮೇಳೈಸುತ್ತದೆ. ಇದೀಗ ಇದೇ ಭಾರಿಸು ಕನ್ನಡ ಡಿಂಡಿಮವ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದಾರೆ. ಅಮೃತ ಮಹೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ದೆಹಲಿಯ ಕರ್ನಾಟಕ ಸಂಘ ತಾಲ್‌ಕಟೋರ ಕ್ರೀಡಾಂಗಣದಲ್ಲಿ ಭಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಹಿರಿಮೆಯ ಪರಿಚಯ ಮಾಡಲಾಗುತ್ತದೆ. ನೃತ್ಯ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಭಾರಿಸು ಕನ್ನಡ ಡಿಂಡಿಮವಾ ಕಾರ್ಯಕ್ರಮ ಉದ್ಘಾಟನೆ ಕುರಿತು ಸ್ವತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇಂದು ಸಂಜೆ 5 ಗಂಟೆಗೆ ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ಭಾರಿಸುವ ಕನ್ನಡ ಡಿಂಡಿಮವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿದ್ದೇನೆ. ಕರ್ನಾಟಕದ ಸಂಸ್ಕೃತಿ, ನೃತ್ಯ ನಾಟಕ ಸೇರಿದಂತೆ ವಿವಿದ ಪ್ರಕಾರಗಳು ಇಲ್ಲಿ ಮೇಳೈಸಲಿವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯ ಏಕ ಭಾರತ್ ಶ್ರೇಷ್ಠ ಭಾರತ ಪರಿಕಲ್ಪನೆಯ ಅಡಿಯಲ್ಲಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ, ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ, ಮೈಸೂರು ಮಹಾರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ಫೆಬ್ರವರಿ 25 ಹಾಗೂ 26 ಎರಡು ದಿನಗಳ ಕಾಲ ಈ ಸಾಂಸ್ಕೃತಿ ಉತ್ಸವ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಹಲವರು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
