ನವದೆಹಲಿ, (ಜೂನ್.12) : ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೋವಿಡ್ 19 ಸೋಂಕನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.

 ಜೂನ್ 16 ಹಾಗೂ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.

ವಿಶ್ವ ಸೋಂಕಿತರ ಪಟ್ಟಿಯಲ್ಲಿ ಭಾರತಕ್ಕೆ 6 ನೇ ಸ್ಥಾನ; ಮತ್ತೆ ಲಾಕ್‌ಡೌನ್..?

ಅಂದು ಲಾಕ್ ಡೌನ್ ಹಾಗೂ ಕೊರೊನಾ ವೈರಸ್ ಕುರಿತು ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಮತ್ತೊಂದೆಡೆ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಲಾಕ್‌ಡೌನ್ ಎನ್ನುವ ಸುದ್ದಿ ಹರಿದಾಡುತ್ತಿದೆ.

ಇದರ ಮಧ್ಯೆ ಪ್ರಧಾನಿ ಮೋದಿ ಸಭೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯಗಳ ಮುಖ್ಯಮಂತ್ರಿ ಏನೆಲ್ಲಾ ಸೂಚನೆ ಕೊಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.