ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅಂತಿಮ ದರ್ಶನಕ್ಕ ಪ್ರಧಾನಿ ಮೋದಿ ಪಂಜಾಬ್‌ಗೆ ತೆರಳಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಚಂಡೀಘಡ ತಲುಪಲಿರುವ ಮೋದಿ, ಬಾದಲ್‌ಗೆ ಗೌರವ ನಮನ ಸಲ್ಲಿಸಲಿದ್ದಾರೆ.

ನವದೆಹಲಿ(ಏ.26): ಅನಾರೋಗ್ಯದಿಂದ ನಿಧನರಾದ ಹಿರಿಯ ರಾಜಕಾಕರಣಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿ ಚಂಡೀಘಡಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಚಂಡೀಘಡ ತಲುಪಲಿರುವ ಪ್ರಧಾನಿ ಮೋದಿ, ಬಾದಲ್‌ಗೆ ಗೌರವ ನಮನ ಸಲ್ಲಿಸಲಿದ್ದಾರೆ. 5 ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಬಾದಲ್, ಎನ್‌ಡಿಎ ಕೂಟದ ಪ್ರಮುಖ ಹಾಗೂ ನಂಬಿಕಸ್ಥ ಸದಸ್ಯರಾಗಿದ್ದರು. ಸಜ್ಜನ ರಾಜಕಾರಣಿ, ಪಂಜಾಬ್‌ನಲ್ಲಿ ಹೊಸ ಇತಿಹಾಸರ ರಚಿಸಿರುವ ಶಿರೋಮಣಿ ಅಕಾಲಿದಳ ಪಕ್ಷದ ನಾಯಕ ಪ್ರಕಾಶ್ ಸಿಂಗ್ ಬಾದಲ್‌ಗೆ ಮೋದಿ ಗೌರವ ನಮನ ಸಲ್ಲಿಸಲಿದ್ದಾರೆ.

ಇಂದು ಚಂಡೀಘಡದಲ್ಲಿರುವ ಶಿರೋಮಣಿ ಅಕಾಲಿದಳ ಕಚೇರಿಯಲಲ್ಲಿ ಬಾದಲ್ ಪಾರ್ಥೀವ ಶರೀರಕ್ಕೆ ಗೌರವ ನಮನ ಸೂಚಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ವರೆಗೆ ಅಕಾಲಿದಳ ಕಚೇರಿಯಲ್ಲಿ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಚಂಡೀಘಡಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ಪಾರ್ಥಿವ ಶರೀರವನ್ನು ಬಾದಲ್ ಹುಟ್ಟೂರು ಮುಕ್ತಸರ್ ಜಿಲ್ಲೆಗೆ ಕೊಂಡೊಯ್ಯಲಾಗುತ್ತಿದೆ. ಬಳಿಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಪ್ರಿಲ್ 27 ರಂದು ಬಾದಲ್ ಅಂತ್ಯಸ್ಕಾರನ ನಡೆಯಲಿದೆ.

Breaking: ಅಕಾಲಿದಳದ ಹಿರಿಯ ನಾಯಕ, ಪಂಜಾಬ್‌ ಮಾಜಿ ಸಿಎಂ ಪ್ರಕಾಶ್‌ ಸಿಂಗ್‌ ಬಾದಲ್‌ ನಿಧನ!

ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾದಲ್‌ ಅವರನ್ನು ಫೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಪ್ರಕಾಶ್ ಸಿಂಗ್ ಬಾದಲ್ ಆರೋಗ್ಯ ಕ್ಷೀಣಿಸಿತ್ತು. ಆಸ್ಪತ್ರೆ ದಾಖಲಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮೂಲಕ ಆರೋಗ್ಯ ವಿಚಾರಿಸಿದ್ದರು. ಇದೇ ವೇಳೆ ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದಿದ್ದರು.

2022ರಲ್ಲಿ ನಡೆದ ರಾಜ್ಯ ಚುನಾವಣೆಯ ಕಣದಲ್ಲಿದ್ದ ಬಾದಲ್‌ ಅತ್ಯಂತ ಹಿರಿಯ ಅಭ್ಯರ್ಥಿ ಎನಿಸಿಕೊಂಡಿದ್ದರು. ಆದರೆ ಈ ಚುನಾವಣೆಯಲ್ಲಿ ಅವರು ಆಪ್‌ ಅಭ್ಯರ್ಥಿ ವಿರುದ್ಧ ಸೋತಿದ್ದರು. ಈ ಫಲಿತಾಂಶದ ಬಳಿಕ ಬಾದಲ್‌ ಅವರು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ಚಂಡೀಗಢದ ಸಮೀಪ ಇರುವ ತಮ್ಮ ಗ್ರಾಮದಲ್ಲಿ ವಿಶ್ರಾಂತಿಗೆ ಮರಳಿದ್ದರು. ಬಾದಲ್‌ ಅವರ ಸಾವಿಗೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. 

ನಾಳೆ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ.

ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಪಂಜಾಬ್‌ನಲ್ಲಿ ಹಲವು ದಾಖಲೆಗಳನ್ನು ಹೊಂದಿರುವ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. 1952ರಲ್ಲಿ ಅತ್ಯಂತ ಕಿರಿಯ ಸರಪಂಚ್‌ ಆಗಿ ಬಾದಲ್‌ ಆಯ್ಕೆಗೊಂಡರು. 1970ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗಲೂ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಕೀರ್ತಿಗೆ ಪಾತ್ರರಾದರು. ಬಳಿಕ 2012ರಲ್ಲಿ ಅತ್ಯಂತ ಹಿರಿಯ ಮುಖ್ಯಮಂತ್ರಿ ಎನಿಸಿಕೊಂಡರು. ಅಲ್ಲದೇ 5 ಬಾರಿ ಮುಖ್ಯಮಂತ್ರಿಯಾದ ಆಯ್ಕೆಯಾದ ದಾಖಲೆಯನ್ನು ಇವರು ಹೊಂದಿದ್ದಾರೆ. ಅಲ್ಲದೇ ಒಂದು ಬಾರಿ ಲೋಕಸಭೆಗೆ ಆಯ್ಕೆಯಾಗಿ ಕೇಂದ್ರ ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.