Asianet Suvarna News Asianet Suvarna News

ಶ್ರೀ ಕೃಷ್ಣಜನ್ಮಭೂಮಿಗೆ ಬೇಟಿ ನೀಡುತ್ತಿರುವ ಮೊದಲ ಪ್ರಧಾನಿ ಮೋದಿ, ನ.23ಕ್ಕೆ ಸ್ವಾಗತಕ್ಕೆ ಸಜ್ಜಾದ ಮಥುರಾ!

ಪ್ರಧಾನಿ ನರೇಂದ್ರ ಮೋದಿ ನಾಳೆ ಶ್ರೀ ಕೃಷ್ಣಜನ್ಮಭೂಮಿ ಮಥುರಾಗೆ ಭೇಟಿ ನೀಡುತ್ತಿದ್ದರೆ. ಸಂತ ಮೀರಾಬಾಯಿ ಜನ್ಮೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಮೋದಿ, ಜನ್ಮಭೂಮಿ, ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

PM Modi to visit Mathura to participate in Sant Mirabai Janmotsav on 23rd November ckm
Author
First Published Nov 22, 2023, 10:05 PM IST

ನವದೆಹಲಿ(ನ.22) ಶ್ರೀರಾಮ ಜನ್ಮಭೂಮಿ ವಿವಾದ ಅಂತ್ಯಗೊಂಡು ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇದರ ಜೊತೆ ಜೊತೆಗೆ ಕೃಷ್ಣ ಜನ್ಮಭೂಮಿ ವಿವಾದವೂ ಶತ ಶತಮಾನಗಳಿಂದ ನಡೆಯುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿಗೆ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಕೃಷ್ಣಜನ್ಮಭೂಮಿ ವಿವಾದವೂ ಸುಖಾಂತ್ಯ ಕಾಣಲಿದೆ ಅನ್ನೋ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ನವೆಂಬರ್ 23ರಂದು ಪ್ರಧಾನಿ ನರೇಂದ್ರ ಮೋದಿ ಮಥುರಾದ ಶ್ರೀ ಕೃಷ್ಣಜನ್ಮಭೂಮಿಗೆ ಭೇಟಿ ನೀಡುತ್ತಿದ್ದಾರೆ. ಈ ಬೇಟಿಯಿಂದ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆರಂಭಗೊಂಡಿದೆ.

ಶ್ರೀ ಕೃಷ್ಣನ ಪರಮ ಭಕ್ತೆ ಸಂತ ಮೀರಾಬಾಯಿ ಅವರ 525 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.  ಸಂಜೆ 4.30ಕ್ಕೆ ಉತ್ತರ ಪ್ರದೇಶದ ಮಥುರಾದಲ್ಲಿ ಸಂತ ಮೀರಾಬಾಯಿ ಅವರ 525ನೇ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿರುವ 'ಸಂತ ಮೀರಾಬಾಯಿ ಜನ್ಮೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೋದಿ,  ಸಂತ ಮೀರಾ ಬಾಯಿ ಅವರ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನೂ ಬಿಡುಗಡೆ ಮಾಡಲಿದ್ದಾರೆ.

ಮಥುರಾ ಕೃಷ್ಣ ಜನ್ಮಭೂಮಿ ಸುತ್ತಲಿನ ಅಕ್ರಮ ಕಟ್ಟಡ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ತಡೆ!

ಈ ಸಂದರ್ಭದಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದೊಂದಿಗೆ ಸಂತ ಮೀರಾಬಾಯಿ ಅವರ ಸ್ಮರಣಾರ್ಥ ವರ್ಷವಿಡೀ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಸಂತ ಮೀರಾಬಾಯಿ ಅವರು ಶ್ರೀಕೃಷ್ಣನ ಮೇಲಿನ ಭಕ್ತಿಗೆ ಹೆಸರುವಾಸಿಯಾಗಿದ್ದಾರೆ. ಅವರು ರಚಿಸಿದ ಅನೇಕ ಸ್ತೋತ್ರಗಳು ಮತ್ತು ಶ್ಲೋಕಗಳು ಇಂದಿಗೂ ಜನಪ್ರಿಯವಾಗಿವೆ.

ಇದೇ ವೇಳೆ ಪ್ರಧಾನಿ ಮೋದಿ ಶ್ರೀಕೃಷ್ಣಜನ್ಮಭೂಮಿಗೂ ಭೇಟಿ ನೀಡಲಿದ್ದಾರೆ. ಬಂಕೇ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಶ್ರೀ ಕೃಷ್ಣ ಜನ್ಮಭೂಮಿಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಅನ್ನೋ ಹೆಗ್ಗಳಿಕೆಗೂ ಮೋದಿ ಪಾತ್ರರಾಗಿದ್ದಾರೆ.  2001ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಥುರಾ ಜಿಲ್ಲೆಯ ನಾಗ್ಲಾ ಚಂದಾಬನ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಸಮಗ್ರ ರೋಜ್‌ಗಾರ್ ಯೋಜನೆಗೆ ಚಾಲನೆ ನೀಡಲು ಭೇಟಿ ನೀಡಿದ್ದರು. ಬಳಿಕ ದೆಹಲಿಗೆ ಮರಳಿದ್ದರು. ಆದರೆ ಶ್ರೀ ಕೃಷ್ಣಜನ್ಮಭೂಮಿಗೆ ಭೇಟಿ ನೀಡಿರಲಿಲ್ಲ. 

 

ಮಥುರಾದಲ್ಲೂ ಮಸೀದಿ ವೈಜ್ಞಾನಿಕ ಸಮೀಕ್ಷೆ ಕೋರಿ ಸುಪ್ರೀಂಗೆ ಅರ್ಜಿ

ಮೋದಿ ಮಥುರಾ ಭೇಟಿ ಹಿನ್ನಲೆ ಭರ್ಜರಿ ತಯಾರಿ ನಡೆಯುತ್ತಿದೆ. ಮಥುರಾದಲ್ಲಿ ನೀರು ಸಿಂಪಡಿಸಿ ವಾಯು ಮಾಲಿನ್ಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲಾಗುತ್ತಿದೆ. ಇತ್ತ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನ ಸೇರಿದಂತೆ ಹಲವು ಭಾಗದಲ್ಲಿ ಹೂವು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ಮೋದಿಯನ್ನು ಬರಮಾಡಿಕೊಳ್ಳಲಿದ್ದಾರೆ. 

Latest Videos
Follow Us:
Download App:
  • android
  • ios