ಅಜಾತಶತ್ರು ಅಟಲ್ ಪುಣ್ಯಸ್ಮರಣೆ, ಪ್ರಧಾನಿ ಮೋದಿ ಶ್ರದ್ಧಾಂಜಲಿ!
ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯಸ್ಮರಣೆ| ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ “ಸದೈವ ಅಟಲ್” ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ| ನಿಮ್ಮ ಅತ್ಯುತ್ತಮ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿ ಕಡೆಗಿನ ಶ್ರಮವನ್ನು ಭಾರತ ಎಂದಿಗೂ ಮರೆಯುವುದಿಲ್ಲ
ನವದೆಹಲಿ(ಆ.16): ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ “ಸದೈವ ಅಟಲ್” ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ.
ಊಟವನ್ನೂ ಮಾಡದೇ ಒಂದೇ ದಿನ 18 ಕಡೆ ಭಾಷಣ ಮಾಡಿದ ಅಟಲ್!
ಇದಕ್ಕೂ ಮುನ್ನ ಟ್ವಿಟರ್ನಲ್ಲಿ ವಾಜಪೇಯಿ ಅವರ ವಿಡಿಯೋವೊಂದನ್ನು ಶೇರ್ ಮಾಡಿರುವ ಪ್ರಧಾನಿ ಮೋದಿ, ಅಟಲ್ ಜೀ ಅವರ ಪುಣ್ಯಸ್ಮರಣೆಯಂದು ನನ್ನ ಶ್ರದ್ಧಾಂಜಲಿ. ನಿಮ್ಮ ಅತ್ಯುತ್ತಮ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿ ಕಡೆಗಿನ ಶ್ರಮವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಬರೆದಿದ್ದಾರೆ.
ಅಲ್ಲದೇ ಪುಣ್ಯಸ್ಮರಣೆ ದಿನವಾದ ಇಂದು ವಾಜಪೇಯಿಯ ಅವರ ಸಮಾಧಿ ಸ್ಥಳ ‘ಸೈದವ ಅಟಲ್’ಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಪುಷ್ಪನಮನ ಸಲ್ಲಿಸಿದ್ದಾರೆ. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಉಪಸ್ಥಿತರಿದ್ದರು.
ಮದುವೆ ತಪ್ಪಿಸಿಕೊಳ್ಳಲು ಅಟಲ್ ಮಾಡುತ್ತಿದ್ದ ಪ್ಲ್ಯಾನ್ ಇದು!
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ 2018 ಆಗಸ್ಟ್ 16ರಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಮ್ಮ 93ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.