Asianet Suvarna News Asianet Suvarna News

63 ಅಡಿ ಎತ್ತರದ ದೀನ್ ದಯಾಳ್ ಉಪಾಧ್ಯಾಯ ಪ್ರತಿಮೆ ಅನಾವರಣಗೊಳಿಸಿದ ಮೋದಿ

63 ಅಡಿ ಎತ್ತರದ ದೀನ್ ದಯಾಳ್ ಉಪಾಧ್ಯಾಯ ಪ್ರತಿಮೆ ಅನಾವರಣ| ದೀನ್ ದಯಾಳ್ ಉಪಾಧ್ಯಾಯ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ| ಪಂಚ ಲೋಹದಿಂದ ನಿರ್ಮಿಸಿರುವ ಜನಸಂಘದ ನಾಯಕನ ಪುತ್ಥಳಿ| ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ಕೇಂದ್ರ ಲೋಕಾರ್ಪಣೆ|

PM Modi Unveil 63 Feet Tall Pandit Deendayal Upadhyaya Statue
Author
Bengaluru, First Published Feb 16, 2020, 4:00 PM IST

ವಾರಾಣಸಿ(ಫೆ.16): ಪ್ರಧಾನಿ ಮೋದಿ ಇಂದು ವಾರಾಣಸಿಯಲ್ಲಿಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 63 ಅಡಿ ಎತ್ತರದ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಪಂಚ ಲೋಹದಿಂದ ನಿರ್ಮಿಸಿರುವ ಜನಸಂಘದ ನಾಯಕನ  ಈ ಪುತ್ಥಳಿಯನ್ನು ದೇಶಕ್ಕೆ ಸಮರ್ಪಿಸಲು ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.

ಇಡೀ ದೇಶದಲ್ಲಿಯೇ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದ್ದು, 200ಕ್ಕೂ ಹೆಚ್ಚು ಶಿಲ್ಪಿಗಳು ಒಂದು ವರ್ಷಗಳ ಕಾಲ ಶ್ರಮವಹಿಸಿ ಈ ಪ್ರತಿಮೆಯನ್ನು ಪೂರ್ಣಗೊಳಿಸಿದ್ದಾರೆ.

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ಇದೇ ವೇಳೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ಕೇಂದ್ರವನ್ನೂ ಉದ್ಘಾಟಿಸಿದ ಪ್ರಧಾನಿ ಮೋದಿ, ಈ ಸ್ಮಾರಕ ದೀನ್ ದಯಾಳ್ ಉಪಾಧ್ಯಾಯ ಅವರ ಬದುಕು ಮತ್ತು ಜೀವನದ ಬಗ್ಗೆ ಬೆಳಕು ಚೆಲ್ಲಲಿ ಎಂದು ಹಾರೈಸಿದರು. 

ಇದಕ್ಕೂ ಮೊದಲು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ  430 ಹಾಸಿಗೆ ಸಾಮರ್ಥ್ಯದ ಸೂಪರ್  ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಹಾಗೂ 74 ಹಾಸಿಗೆ ಸಾಮರ್ಥ್ಯದ ಮಾನಸಿಕ ಆರೋಗ್ಯ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಉದ್ಘಾಟಿಸಿದರು. 

Follow Us:
Download App:
  • android
  • ios