Asianet Suvarna News Asianet Suvarna News

ರೈಲು ದುರಂತ ನಡೆದ ಬಹನಾಗಗೆ ಪ್ರಧಾನಿ ಭೇಟಿ, ಭೀಕರ ಅಪಘಾತ ಸ್ಥಳ ನೋಡಿ ಮರುಗಿದ ಮೋದಿ!

ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪದಲ್ಲಿ ನಡೆದ ದುರಂತ ಭಾರತೀಯ ರೈಲ್ವೇ ಇತಿಹಾಸದಲ್ಲೇ ಅತ್ಯಂತ ಭೀಕರ ಅಪಘಾತವಾಗಿದೆ. ಬರೋಬ್ಬರಿ 292 ಮಂದಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳ ನೋಡಿದ ಮೋದಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

PM Modi Visit Oisha Train Accident site bahanaga balasore accompanied by railway minister ckm
Author
First Published Jun 3, 2023, 4:24 PM IST

ಬಾಲಾರೋಸ್(ಜೂ.03): ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಅಪಘಾತದ ದೇಶವನ್ನೇ ಬೆಚ್ಚಿ ಬೀಳಿಸಿದೆ. ಭಾರತದ ಇತಿಹಾಸದಲ್ಲೇ ನಡೆದ ಅತ್ಯಂತ ಘನಘೋರ ಅಪಘಾತ ಇದಾಗಿದೆ. ಭೀಕರ ಅಪಘಾತದಲ್ಲಿ 292 ಮಂದಿ ಮೃತಪಟ್ಟಿದ್ದಾರೆ. ಬರೋಬ್ಬರಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೀಕರ ದುರಂತ ನಡೆದ ಬೆನ್ನಲ್ಲೇ ರೈಲ್ವೇ ಸಚಿವರ ಜೊತೆ ಮಾತುಕತೆ ನಡೆಸಿದ್ದ ಮೋದಿ, ಅಗತ್ಯ ನೆರವಿಗೆ ಸೂಚನೆ ನೀಡಿದ್ದರು. ಇಂದು ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿರುವ ಮೋದಿ ದುರಂತ ಘಟನಾ ಸ್ಥಳಕ್ಕೆ ಮೋದಿ ಭೇಟಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೇ ಅಧಿಕಾರಿಗಳು ಅಪಘಾತದ ಮಾಹಿತಿಯನ್ನು ಮೋದಿಗೆ ನೀಡಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಘಟನಾ ಸ್ಥಳದಲ್ಲಿದ್ದ ಮೋದಿ, ಭೀಕರ ಅಪಘಾತದ ಇಂಚಿಂಚು ಮಾಹಿತಿ ಪಡೆದಿದ್ದಾರೆ.

ದುರಂತ ಸ್ಥಳಕ್ಕೆ(Odisha Train Accident) ಆಗಮಿಸಿದ ಮೋದಿ ಭೀಕರ ಅಪಘಾತ ಸ್ಥಳ ನೋಡಿ ಮರುಗಿದ್ದಾರೆ. ಎಲ್ಲೆಡೆ ಹರಡಿರುವ ರಕ್ತದ ಕಲೆಗಳು, ಪರಿಸ್ಥಿತಿಯ ಗಂಭೀರತೆ ಹೇಳುತ್ತಿರುವ ರೈಲು ಬೋಗಿಗಳನ್ನು ನೋಡಿದ ಮೋದಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಭೀಕರ ಅಪಘಾತದ ಸಂಭವಿಸಿದ್ದು ಹೇಗೆ? ಕಾರಣಗಳೇನು ಅನ್ನೋ ಕುರಿತು ಮೋದಿ(PM Modi) ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಪಘಾತವಾಗದೇ ಇರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮೋದಿ ಚರ್ಚಿಸಿದ್ದಾರೆ. 

 

 

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್‌ ಲಾಡ್‌ ಭೇಟಿ

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜೊತೆ ಮಾತನಾಡಿದ ಮೋದಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡುವ ಮೊದಲು ಪ್ರಧಾನಿ ಮೋದಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು. ಇತ್ತ ಅಶ್ವಿನಿ ವೈಷ್ಣವ್ ದುರಂತ ನಡೆದ ನಿನ್ನೆ ರಾತ್ರಿಯಿಂದ ಘಟನಾ ಸ್ಥಳಕ್ಕೆ ಬೀಡುಬಿಟ್ಟಿದ್ದಾರೆ.

ಘಟನಾ ಸ್ಥಳ ಭೇಟಿ ಬಳಿಕ ಪ್ರಧಾನಿ ಮೋದಿ, ಕಟಕ್‌ನಲ್ಲಿ ಆಸ್ಪತ್ರೆಗೆ ತೆರಳಲಿದ್ದಾರೆ. ರೈಲು ದುರಂತದಲ್ಲಿ ಗಾಯಗೊಂಡ 900ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೋದಿ ಕಟಕ್‌ನಲ್ಲಿ ಗಾಯಳುಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. 

ಒಡಿಶಾದ ಬಾಲಸೋರ್‌ ಬಳಿ 3 ರೈಲುಗಳು ಅಪಘಾತಕ್ಕೆ ಈಡಾದ ಬೆನ್ನಲ್ಲೇ ತಮ್ಮೆಲ್ಲ ಅಧಿಕೃತ ಪ್ರವಾಸ ರದ್ದುಗೊಳಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಘಟನಾ ಸ್ಥಳಕ್ಕೆ ಶುಕ್ರವಾರ ತಡರಾತ್ರಿಯೇ ದೌಡಾಯಿಸಿದರು. ಅಲ್ಲದೆ, ಶನಿವಾರದ ಗೋವಾ-ಮುಂಬೈ ವಂದೇಭಾರತ್‌ ರೈಲು ಉದ್ಘಾಟನಾ ಕಾರ್ಯಕ್ರಮವನ್ನೂ ರದ್ದುಗೊಳಿಸಿದರು.

ಕೈಕಾಲುಗಳಿಲ್ಲದ ದೇಹಗಳು, ರಕ್ತದ ಹೊಳೆ: ಪ್ರತ್ಯಕ್ಷದರ್ಶಿಗಳು ಹಂಚಿಕೊಂಡ ರೈಲು ಅಪಘಾತ ಸ್ಥಳದ ಭಯಾನಕ ಕಥೆ ಹೀಗಿದೆ..

ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು. ಕೋಲ್ಕತಾದ ಶಾಲಿಮಾರ್‌ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್‌ ಲೈನ್‌ನಲ್ಲಿ ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 12841), ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್‌್ಸ ರೈಲಿಗೆ ಮೊದಲು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕೋರಮಂಡಲ್‌ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ. ಕೆಲವು ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 12864) ಸಹ ಹಳಿತಪ್ಪಿದ್ದ ಕೋರಮಂಡಲ್‌ನ ಬೋಗಿಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್‌ ಶರ್ಮಾ ಹೇಳಿದ್ದಾರೆ.
 

Follow Us:
Download App:
  • android
  • ios