ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ಶಿವಮೊಗ್ಗದ ಉದ್ಯಮಿ ಮಂಜುನಾಥ್ ಸೇರಿ ಐವರು ಮೃತಪಟ್ಟಿದ್ದಾರೆ. ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಘಟನೆ ಖಂಡಿಸಿ, ದೋಷಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಅಮಿತ್ ಶಾ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರು (ಏ.22): ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಇಲ್ಲಿಯವರೆಗೂ ಯೋಧರು ಹಾಗೂ ಸರ್ಕಾರಿ ಉದ್ಯೋಗಿಗಳ ಮೇಲೆ ಭಯೋತ್ಪಾದಕರು ದಾಳಿ ಮಾಡುತ್ತಿದ್ದರು. ಈ ಬಾರಿ ಪ್ರವಾಸಿಗರ ಮೇಲೆ ಟೆರರಿಸ್ಟ್ ದಾಳಿ ನಡೆದಿದ್ದು, ಇದರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಸಾವು ಕಂಡಿದ್ದಾರೆ.
ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಬಹುದು ಎನ್ನುವ ಸೂಚನೆಗಳೂ ಸಿಕ್ಕಿವೆ. ಈ ನಡುವೆ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದಲೇ, ಗೃಹ ಸಚಿವ ಅಮಿತ್ ಶಾಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಸಂಜೆ 7 ಗಂಟೆಯ ವೇಳೆ ಅಮಿತ್ ಶಾ ಪಹಲ್ಗಾಮ್‌ನ ಘಟನಾ ಸ್ಥಳಕ್ಕೆ ತೆರಳುವ ಸಾಧ್ಯತೆ ಇದೆ.
ಇದರ ನಡುವೆ ಪ್ರಧಾನಿ ಮೋದಿ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು, ಇದಕ್ಕೆ ಕಾರಣರಾದ ಯಾರನ್ನೂ ಕೂಡ ಸುಮ್ಮನೆ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೀನ ಕೃತ್ಯಕ್ಕೆ ಕಾರಣರಾದ ಎಲ್ಲರನ್ನೂ ಕಟಕಟೆಗೆ ತಂದು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು... ಅವರನ್ನು ಬಿಡುವುದು ಸಾಧ್ಯವೇ ಇಲ್ಲ! ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ' ಎಂದು ಬರೆದಿದ್ದಾರೆ.
Breaking: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾವು!
ರಾಹುಲ್ ಗಾಂಧಿ ಆಕ್ರೋಶ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹೇಡಿತನದ ದಾಳಿ ನಡೆದಿದೆ. ಭಯೋತ್ಪಾದಕರ ದಾಳಿಯಲ್ಲಿ ಪ್ರವಾಸಿಗರ ಸಾವು ಮತ್ತು ಹಲವರಿಗೆ ಗಾಯಗಳಾಗಿರುವುದು ಅತ್ಯಂತ ಖಂಡನೀಯ. ಈ ಘಟನೆ ಹೃದಯವಿದ್ರಾವಕವಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಭವಿಷ್ಯದಲ್ಲಿ ಇಂತಹ ಅಮಾನುಷ ಘಟನೆಗಳು ನಡೆಯುವುದು ಬೇಡ. ಮುಗ್ಧ ಭಾರತೀಯರು ಪ್ರಾಣ ಕಳೆದುಕೊಳ್ಳದಂತೆ ಕ್ರಮಕೈಗೊಳ್ಳಬೇಕು ಎಂದು ಬರೆದಿದ್ದಾರೆ.
ನನ್ನ ಮತ್ತು ಮಗನನ್ನೂ ಕೊಲ್ಲಿ ಎಂದು ಉಗ್ರರೆದುರು ಕಣ್ಣೀರಿಟ್ಟ ಪಲ್ಲವಿ, 'ಇದನ್ನ ಮೋದಿಗೆ ತಿಳಿಸು' ಎಂದ ಉಗ್ರ!
ಬೈಸರನ್ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿಯ ಸಂದರ್ಭದಲ್ಲಿ ಗಾಯಗೊಂಡವರ ಪಟ್ಟಿ.
1. ವಿನೋ ಭಟ್ R/O ಗುಜರಾತ್
2. ಮಾಣಿಕ್ ಪಾಟೀಲ್
3. ರಿನೋ ಪಾಂಡೆ
3. S. ಬಾಲಚಂದ್ರು R/O ಮಹಾರಾಷ್ಟ್ರ
4. ಡಾ ಪರಮೇಶ್ವರ್
5. ಅಭಿಜವನ್ ರಾವ್ R/O ಕರ್ನಾಟಕ
6. ಅಭಿಜವಂ ರಾವ್ R/O ಕರ್ನಾಟಕ
7. ಸಂತು R/O ತಮಿಳುನಾಡು
8. ಸಾಹಸಿ ಕುಮಾರಿ R/O ಒರಿಸ್ಸಾ
