ನೂತನ ಸಿಎಂ ಉದ್ಧವ್ ಠಾಕ್ರೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವಿಟ್!
ಕೊನೆಗೂ ಅಂತ್ಯಗೊಂಡ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ| ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಅಸ್ತಿತ್ವಕ್ಕೆ| ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಪ್ರಮಾಣವಚನ| ನೂತನ ಸಿಎಂ ಉದ್ಧವ್ ಠಾಕ್ರೆ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ| ಟ್ವಿಟ್ ಮೂಲಕ ಮಹಾರಾಷ್ಟ್ರದ ನೂತನ ಸಿಎಂ ಅವರನ್ನು ಅಭಿನಂದಿಸಿದ ಪ್ರಧಾನಿ| ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಭರವಸೆ ನೀಡಿದ ಮೋದಿ|
ನವದೆಹಲಿ(ನ.28): ತಿಂಗಳಿಗೂ ಹೆಚ್ಚಿನ ಕಾಲದ ಹಗ್ಗ ಜಗ್ಗಾಟದ ಬಳಿಕ, ಕೊನೆಗೂ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಸರ್ಕಾರವೊಂದು ಅಸ್ತಿತ್ವಕ್ಕೆ ಬಂದಿದೆ.
ಮುಂಬೈನ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್’ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
‘ಮಹಾ’ದಲ್ಲಿ ಉದ್ಧವ್ ದರ್ಬಾರ್: ಅಸ್ತಿತ್ವಕ್ಕೆ ಬಂತು ಅಘಾಡಿ ಸರ್ಕಾರ್!
ಶಿವಾಜಿ ಪಾರ್ಕ್’ನಲ್ಲಿ ನಿರ್ಮಿಸಲಾಗಿದ್ದ ಭವ್ಯ ವಿಶಾಲ ವೇದಿಕೆಯಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನೂತನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಇನ್ನು ಮಹಾರಾಷ್ಟ್ರದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಶಿವಸೇನೆಯ ಉದ್ಧವ್ ಠಾಕ್ರೆ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ನೂತನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಅಭಿವೃದ್ಧಿಗೆ ಜೊತೆಯಾಗಿ ಸುಡಿಯುವ ಭರವಸೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದು, ರಾಜ್ಯದ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಉದ್ಧವ್ ಠಾಕ್ರೆ ಕಾರ್ಯೋನ್ಮುಖರಾಗಲಿ ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ ಹಾರೈಸಿದ್ದಾರೆ.