Asianet Suvarna News Asianet Suvarna News

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

pm modis mother heeraben admitted to hospital in ahmedabad say reports ash
Author
First Published Dec 28, 2022, 1:38 PM IST

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಬುಧವಾರ (ಡಿಸೆಂಬರ್ 28) ಗುಜರಾತ್‌ನ  ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ವರದಿಗಳು ತಿಳಿಸಿವೆ. ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ. ಶತಾಯುಷಿಯಾಗಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಪ್ರಧಾನಿ ಮೋದಿ ತಾಯಿ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಗುಜರಾತ್‌ನ ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ನ ಹೇಳಿಕೆ ತಿಳಿಸಿದೆ. ಆದರೆ, ಈವರೆಗೆ ಆಸ್ಪತ್ರೆಯು ಬೇರೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಇನ್ನು, ಗುಜರಾತ್‌ನ ಬಿಜೆಪಿ ಶಾಸಕರಾದ ದರ್ಶನಾಬೆನ್ ವಘೇಲಾ ಮತ್ತು ಕೌಶಿಕ್ ಜೈನ್ ಆಸ್ಪತ್ರೆಗೆ ತೆರಳಿದ್ದಾರೆ ಎಂದೂ ತಿಳಿದುಬಂದಿದೆ.

ಇದನ್ನು ಓದಿ: ಮೈಸೂರು ಸಮೀಪ ಪ್ರಧಾನಿ ನರೇಂದ್ರ ಮೋದಿ ಸಹೋದರನ ಕಾರು ಅಪಘಾತ!

ಗುಜರಾತ್‌ನ ಅಹಮದಾಬಾದ್‌ನ ಯುಎನ್‌ ಆಸ್ಪತ್ರೆ ಬಿಡುಗಡೆ ಮಾಡಿರುವ ಅಧಿಕೃತ ಪತ್ರಿಕಾ ಹೇಳಿಕೆ ಇಲ್ಲಿದೆ..

ತನ್ನ ತಾಯಿಯೊಂದಿಗಿನ ಬಾಂಧವ್ಯದ ಬಗ್ಗೆ ಆಗಾಗ್ಗೆ ಮಾತನಾಡುವ ಪ್ರಧಾನಿ ಮೋದಿ ಇತ್ತೀಚೆಗೆ ಗುಜರಾತ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಪ್ರಚಾರದ ಬಳಿಕ ಅವರನ್ನು ಭೇಟಿಯಾದರು. ಹೀರಾಬೆನ್ ಮೋದಿ ಅವರೊಂದಿಗೆ ಪ್ರಧಾನಿ ಹರಟೆ ಹೊಡೆದಿದ್ದು ಮತ್ತು ಚಹಾ ಸೇವಿಸಿದ್ದ ದೃಶ್ಯಗಳು ಆಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು.

ಈ ಮಧ್ಯೆ, ಮಂಗಳವಾರ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ಕರ್ನಾಟಕದ ಮೈಸೂರು ಬಳಿ ಅವರ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು.
ಪ್ರಹ್ಲಾದ್ ಮೋದಿಯನ್ನು ಅವರ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ.

Follow Us:
Download App:
  • android
  • ios