ನವದೆಹಲಿ(ಜೂ.22): ಲಡಾಖ್ ಗಡಿಯಲ್ಲಿ ಭಾರತ ಹಾಗೂ ಚೀನಾ ಸೈನಿಕರ ನಡುವಿನ ಹಿಂಸಾತ್ಮಕ ಸಂಘರ್ಷದಲ್ಲಿ ಭಾರತದ ಇಪ್ಪತ್ತು ಮಂದಿ ಸೈನಿಕ ಹುತಾತ್ಮರಾಗಿದ್ದಾರೆ. ಚೀನಾದ ಈ ನಡೆಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಈ  ಸಂಬಂಧ ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ಡಾ. ಮನಮೋಹನ್ ಸಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಹಾಗೂ ಹುತಾತ್ಮ ಯೋಧರ ಬಲಿದಾನಕ್ಕೆ ನ್ಯಾಯ ಒದಗಿಸುವಂತೆ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.

ಭಾರತ್‌ ಮಾತಾ ಕೀ ಜೈ ಕೂಡ ಅಪರಾಧ ಆಗಿದೆ: ಸಿಂಗ್‌ಗೆ ಮೋದಿ ಟಾಂಗ್‌

ಈ ಸಂಬಂಧ ಪಿಎಂ ಮೋದಿಗೆ ಪತ್ರ ಬರೆದಿರುವ ಡಾ. ಮನಮೋಹನ್ ಸಿಂಗ್ ಗಡಿ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಸೇರಿ ನಮ್ಮ ಯೋಧರಬಲಿದಾನಕ್ಕೆ
ನ್ಯಾಯ ಒದಗಿಸುವಂತೆ ಪ್ರಧಾನಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ ನ್ಯಾಯ ಒದಗಿಸದಿದ್ದರೇ ಅದು ಇತಿಹಾಸದ ಮಹಾ ಮೋಸವಾಗಿ ಬಿಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಲಡಾಖ್ ಹಿಂಸಾತ್ಮಕ ಘರ್ಷಣೆಯನ್ನು ಅತ್ಯಂತ ಖೇದಕರ ಎಂದು ಬಣ್ಣಿಸಿರುವ ಸಿಂಗ್ ಗಡಿಯಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ. ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ ವೀರ ಯೋಧರ ಬಲಿದಾನಕ್ಕೆ ನ್ಯಾಯ ಒದಗಿಸಿಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿರುವ ಮಾಜಿ ಪ್ರಧಾನಿ, ಗಡಿ ಸುರಕ್ಷತೆ ಹಾಗೂ ದೇಶದ ಸಾರ್ವಭೌಮತ್ವ ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದೊಂದಿಗೆ ಗಟ್ಟಿಯಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಮಾಜಿ ಪ್ರಧಾನಿ ಡಾ. ಸಿಂಗ್ ದಾಖಲೆ ಸರಿಗಟ್ಟಿದ ಪಿಎಂ ಮೋದಿ!

ಇನ್ನು ಈ ಪತ್ರದಲ್ಲಿ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಆಡಿದ ಮಾತು ವಿವಾದ ಸೃಷ್ಟಿಸಿದ ಪ್ರಸಂಗವನ್ನು ಉಲ್ಲೇಖಿಸಿರುವ ಮನಮೋಹನ್ ಸಿಂಗ್ ಹೇಳಿಕೆಗಳ ಪರಿಣಾಮಗಳ ಕುರಿತು ಯಾವಾಗಲೂ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದ್ದಾರೆ.