ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನ ರೆಹಮಾನ್ ದಾಖಲಿಸಿದ್ದ ಖಾಸಗಿ ದೂರು ವಜಾಗೊಳಿಸಿದ ಕೋರ್ಟ್!

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ನೀಡುತ್ತಾರೆ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ರೆಹಮಾನ್ ದಾಖಲಿಸಿದ್ದ ಖಾಸಗಿ ದೂರನ್ನು ನ್ಯಾಯಾಲಯ ವಜಾಗೊಳಿಸಿದೆ.

PM Narendra Modi against private complaint dismissed from Bengaluru Special Court sat

ಬೆಂಗಳೂರು (ಜು.16): ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ, ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುಯತ್ತಾರೆಂದು ಹೇಳಿದ್ದರು. ಈ ಹೇಳಿಕೆಯ ಆಧಾರದಲ್ಲಿ ಬೆಂಗಳೂರಿನ ರೆಹಮಾನ್ ಎನ್ನುವವರು ಮೋದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಆದರೆ, ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಖಾಸಗಿ ದೂರನ್ನು ವಜಾಗೊಳಿಸಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ‌ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ಭಾಷಣ ವೇಳೆ ದೇಶದಲ್ಲಿ ಕಾಂಗ್ರೆಸ್ ಅಧಿಕಾರಿಕ್ಕೆ ಬಂದ್ರೆ ದೇಶದ ಸಂಪತ್ತನ್ನ ಮುಸಲ್ಮಾನರಿಗೆ ಹಂಚುತ್ತಾರೆ ಎಂಬ ಹೇಳಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಬೆಂಗಳೂರಿನ ಜಿಯಾ ಉರ್ ರೆಹಮಾನ್ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಖಾಸಗಿ ದೂರು ಸಲ್ಲಿಕೆ ಮಾಡಿದ್ದರು.

ಡಿಕೆಶಿ 2 ಬಾರಿ ನನ್ನ ಜೊತೆಗಿದ್ದೇ ಸೋಲಿಸಿದ್ರು, ಈಗ ಒಂದು ಸೋಲಿಗೆ ಹತಾಶರಾದರೆ ಹೇಗೆ: ನಿಖಿಲ್ ಕುಮಾರಸ್ವಾಮಿ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನ್ಯಾಯಾಧೀಶರಾದ ಶಿವಕುಮಾರ್ ಅವರು ಖಾಸಗಿ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡರು. ಈ ವೇಳೆ ಖಾಸಗಿ ದೂರಿನಲ್ಲಿರುವ ಹೇಳಿಕೆ ಚುನಾವಣಾ ಪ್ರಚಾರದ ವೇಳೆ ನೀಡಿದ ಹೇಳಿಕೆ ಆಗಿದೆ. ಇದರಿಂದ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂಬ ಉದ್ದೇಶದಿಂದ ರೆಹಮಾನ್ ಅವರ ಖಾಸಗಿ ದೂರನ್ನು ವಜಾಗೊಳಿಸಿ ಆದೇಶ ಹೊರಡಿಸಿದರು.

Latest Videos
Follow Us:
Download App:
  • android
  • ios