Breaking: ಪ್ರಧಾನಿ ಮೋದಿ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಗೆ ಮರಳುವುದು ವಿಳಂಬ

ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ದಿಯೋಗರ್‌ನಿಂದ ದೆಹಲಿಗೆ ಮರಳುವಾಗ ವಿಳಂಬವಾಗಿದೆ. ಸುರಕ್ಷತಾ ಕ್ರಮವಾಗಿ, ತಾಂತ್ರಿಕ ತಂಡಗಳು ಸಮಸ್ಯೆಯನ್ನು ಪರಿಶೀಲಿಸುತ್ತಿವೆ.

PM Narendra Modi aircraft experienced technical snag in Deoghar airport san

ನವದೆಹಲಿ (ನ.15): ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಮಾಡುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಶುಕ್ರವಾರ ಜಾರ್ಖಂಡ್‌ನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಮೋದಿ ದಿಯೋಗರ್‌ಗೆ ಬಂದಿದ್ದರು. ಚುನಾವಣಾ ಭಾಷಣವನ್ನು ಮುಗಿಸಿ ದಿಯೋಗರ್‌ ಏರ್‌ಪೋರ್ಟ್‌ಗೆ ಹೋಗಿ ವಿಮಾನವೇರಿದ್ದರು. ಈ ವೇಳೆ ಅವರ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಇದ್ದ ವಿಮಾನ ದಿಯೋಗರ್‌ ಏರ್‌ಪೋರ್ಟ್‌ನಲ್ಲಿಯೇ ಇದ್ದು, ಪ್ರಧಾನಿ ಮೋದಿ ನವದೆಹಲಿಗೆ ತೆರಳುವುದು ಕೆಲಕಾಲ ತಡವಾಗಲಿದೆ ಎಂದು ವರದಿಯಾಗಿದೆ. ದಿಯೋಗರ್‌ನಿಂದ ನವದೆಹಲಿಗೆ ವಾಪಾಸ್‌ ತೆರಳುವ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ದಿಯೋಗರ್‌ ಏರ್‌ಪೋರ್ಟ್‌ನಲ್ಲಿಯೇ ಸಮಸ್ಯೆಯ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಕಾರಣದಿಂದಾಗಿ ಅವರು ದೆಹಲಿಗೆ ತೆರಳುವುದು ವಿಳಂಬವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ಚುನಾವಣಾ ಕಣದಲ್ಲಿರುವ ರಾಜ್ಯದಲ್ಲಿ ತಮ್ಮ ಪ್ರಚಾರ ಸಭೆ ಮುಗಿಸಿ ದೆಹಲಿಗೆ ಮರಳಲು ವಿಮಾನ ನಿಲ್ದಾಣಕ್ಕೆ ಬಂದ ನಂತರ ಈ ಘಟನೆ ನಡೆದಿದೆ. ಸುರಕ್ಷತಾ ಕ್ರಮವಾಗಿ, ತಾಂತ್ರಿಕ ತಂಡಗಳು ಸಮಸ್ಯೆಯನ್ನು ಗುರುತಿಸಲು ಮತ್ತು ಪರಿಹರಿಸಲು ಕೆಲಸ ಮಾಡುವಾಗ ವಿಮಾನವನ್ನು ನೆಲಕ್ಕೆ ಇಳಿಸಲಾಗಿದೆ.

ಇದು ಬೆಂಗಳೂರಿನ 'ಬಿಲಿಯನೇರ್‌ ಸ್ಟ್ರೀಟ್‌', 67.5 ಕೋಟಿಗೆ ಸೇಲ್‌ ಆಗಿದೆ ಇಲ್ಲಿನ ಒಂದು ಸೈಟ್‌!

ಬುಡಕಟ್ಟು ವೀರ ಬಿರ್ಸಾ ಮುಂಡಾ ಅವರನ್ನು ಗೌರವಿಸುವ ಸಂದರ್ಭವಾದ ಜಂಜಾಟಿಯಾ ಗೌರವ್ ದಿವಸ್ ಆಚರಣೆಯ ಅಂಗವಾಗಿ ಪ್ರಧಾನಮಂತ್ರಿಯವರು ಶುಕ್ರವಾರ ಜಾರ್ಖಂಡ್‌ನಲ್ಲಿ ಎರಡು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ನವೆಂಬರ್ 20 ರಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳ ಮೊದಲು ಈ ಘಟನೆಗಳು ನಡೆದಿದೆ.

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ, ಏಪ್ರಿಲ್‌-ಅಕ್ಟೋಬರ್‌ ಬಂಪರ್‌!

ಇನ್ನೊಂದೆಡೆ, ಚುನಾವಣಾ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಾರ್ಖಂಡ್‌ಗೆ ಬಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಹಾರಾಟಕ್ಕೆ ಅನುಮತಿ ನೀಡದ ಕಾರಣ ಸುಮಾರು ಎರಡು ಗಂಟೆಗಳ ಕಾಲ ಟೇಕಾಫ್‌ ಆಗದೇ ನಿಂತಿತ್ತು.

 

 

Latest Videos
Follow Us:
Download App:
  • android
  • ios