Asianet Suvarna News Asianet Suvarna News

ಸೂರ್ಯ ವಂಶದ ಶ್ರೀರಾಮನ ನೆನಪಿಗೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಘೋಷಣೆ ಮಾಡಿದ ಮೋದಿ!

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಇತಿಹಾಸದ ಪುಟಗಳಲ್ಲಿ ದಾಖಲಾಗಬೇಕು ಎನ್ನುವ ಇರಾದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ ಮಾಡಿದ್ದಾರೆ.

PM Narendra Modi announced Pradhanmantri Suryodaya Yojana after Ram Mandir Pran pratishtha san
Author
First Published Jan 22, 2024, 6:42 PM IST | Last Updated Jan 22, 2024, 6:42 PM IST

ನವದೆಹಲಿ (ಜ.22): ಅಯೋಧ್ಯೆಯಲ್ಲಿ ಸೂರ್ಯವಂಶದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ದೂರಿಯಾಗಿ ಮುಕ್ತಾಯವಾಗಿದೆ. ಇದರ ನೆನಪಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಸೂರ್ಯನಿಂದ ಲಾಭ ಪಡೆಯುವ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯನ್ನು ಆರಂಭ ಮಾಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಅಯೋಧ್ಯೆಯಿಂದ ದೆಹಲಿಗೆ ವಾಪಾಸ್‌ ಆದ ಬೆನ್ನಲ್ಲಿಯೇ ತಮ್ಮ ಮೊದಲ ನಿರ್ಧಾರವೇ ಇದಾಗಿದೆ ಎಂದು ಅವರು ಹೇಳಿದ್ದಾರೆ. 'ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವು ಮತ್ತಷ್ಟು ಬಲಗೊಂಡಿದೆ. ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಮೋದಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

 

Latest Videos
Follow Us:
Download App:
  • android
  • ios