Asianet Suvarna News Asianet Suvarna News

ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆಗೆ ಶುಭಕೋರಿದ ಪ್ರಧಾನಿ ಮೋದಿ!

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆಯ್ಕೆಯಾಗಿದ್ದಾರೆ. ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ.

PM narendra Modi congratulates mallikarjun Kharge to fruitful tenure for being elected new Congress president ckm
Author
First Published Oct 19, 2022, 6:47 PM IST

ನವದೆಹಲಿ(ಅ.19):  ಕಾಂಗ್ರೆಸ್ ನೂತನ ಅಧ್ಯಕ್ಷ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಸ್ಪರ್ಧಿಸಿದ್ದರು . ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬರೋಬ್ಬರಿ 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಶುಭಕಕೋರಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.

ಕಾಂಗ್ರೆಸ್(Congress) ಪಕ್ಷದ ಅಧ್ಯಕ್ಷ ಜವಾಬ್ದಾರಿ ಹೊತ್ತ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಶುಭಾಶಯಗಳು. ಖರ್ಗೆ ಅಧಿಕಾರವದಿ ಫಲಪ್ರದವಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.  

 

 

ಸೀಲ್‌ ಮಾಡಲಾಗಿರುವ ಮತಪೆಟ್ಟಿಗೆಗಳನ್ನು ಎಐಸಿಸಿ ಕಚೇರಿಯಲ್ಲಿ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಯಿತು. ಬಳಿಕ ಮತಪತ್ರಗಳನ್ನು ಬೆರೆಸಿ, ಎಣಿಕೆ ಮಾಡಲಾಯಿತು. ಚುನಾವಣೆಯು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆದಿದೆ ಎಂದು ಪಕ್ಷದ ಚುನಾವಣಾ ವಿಭಾಗದ ಮುಖ್ಯಸ್ಥ ಮಧುಸೂದನ ಮಿಸ್ತ್ರಿ ಹೇಳಿದ್ದಾರೆ.

ಮಲ್ಲಿಕಾರ್ಜುನ್‌ ಖರ್ಗೆ ಕಾಂಗ್ರೆಸ್‌ನ ನೂತನ ಅಧ್ಯಕ್ಷ; ಈ ಸ್ಥಾನ ಪಡೆದ ಎರಡನೇ ಕನ್ನಡಿಗ

ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ದೇಶಾದ್ಯಂತ  68 ಮತಗಟ್ಟೆಗಳಲ್ಲಿ ಕಾಂಗ್ರೆಸ್ ನಾಯಕರು ಮತ ಚಲಾಯಿಸಿದ್ದರು.  ಮತದಾನಕ್ಕೆ ಅರ್ಹತೆ ಹೊಂದಿದ್ದ 9915 ಕಾಂಗ್ರೆಸ್‌ ಸದಸ್ಯರ ಪೈಕಿ 9500ಕ್ಕೂ ಹೆಚ್ಚು ಮಂದಿ ಮತ ಚಲಾವಣೆ ಮಾಡಿದ್ದಾರೆ. ಪಕ್ಷದ ಇತಿಹಾಸದಲ್ಲಿ ಒಟ್ಟು 6 ಬಾರಿ ಮಾತ್ರ ಅಧ್ಯಕ್ಷರ ಆಯ್ಕೆಗೆ ಮತದಾನ ನಡೆದಿದೆ. ಈ ಬಾರಿ ಆಯ್ಕೆಯಾದವರು ಪಕ್ಷದ ಅತ್ಯಂತ ಸುದೀರ್ಘ ಅವಧಿಯ ಅಧ್ಯಕ್ಷೆ (1998ರಿಂದ ಈವರೆಗೆ) ಸೋನಿಯಾ ಗಾಂಧಿಯವರ ಉತ್ತರಾಧಿಕಾರಿಯಾಗಲಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಹಿರಿಯ ಹಾಗೂ ತಳಮಟ್ಟದಿಂದ ಬಂದ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿದ್ದರೆ, ಇನ್ನೊಬ್ಬ ಅಭ್ಯರ್ಥಿ ಶಶಿ ತರೂರ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಯುವಕರ ವಲಯದಲ್ಲಿ ಜನಪ್ರಿಯತೆ ಹೊಂದಿರುವ, ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವವಿರುವ ಹಾಗೂ 2009ರಲ್ಲಷ್ಟೇ ಪಕ್ಷಕ್ಕೆ ಸೇರ್ಪಡೆಯಾದ ನಾಯಕರಾಗಿದ್ದಾರೆ.

ಸತತ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ದೇವರಾಜ ಅರಸು ಅವರ ನೇತೃತ್ವದ ಸರ್ಕಾರದಿಂದ ಧರ್ಮಸಿಂಗ್‌ ಅವರ ಸರ್ಕಾರದವರೆಗೆ ವಿವಿಧ ಸರ್ಕಾರಗಳಲ್ಲಿ ಸಂಪುಟ ದರ್ಜೆ ಸಚಿವರಾಗಿ ಹತ್ತು ಹಲವು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಶಿಕ್ಷಣ, ಕಂದಾಯ, ಕೈಗಾರಿಕೆ, ಸಹಕಾರ, ಗೃಹ ಹೀಗೆ ಹಲವು ಖಾತೆಗಳ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಸಾಕಷ್ಟುಸುಧಾರಣೆ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದ ಕೀರ್ತಿ ಅವರದ್ದು. ಗುರುಮಿಟ್ಕಲ್‌ ಕ್ಷೇತ್ರದಿಂದ 1972ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗೆದ್ದಾಗಲೇ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದ್ದು ವಿಶೇಷ.
 

Follow Us:
Download App:
  • android
  • ios