ಅಂದಿನ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು 'ಸಂವಿಧಾನ ಹತ್ಯಾ ದಿನ'  ಎಂದು  ಘೋಷಿಸಿದೆ.

ನವದೆಹಲಿ (ಜು.12): ಅಂದಿನ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು 'ಸಂವಿಧಾನ ಹತ್ಯಾ ದಿನ' ಎಂದು ಘೋಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಮಾತನಾಡಿ 1975 ರಲ್ಲಿ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯಿಂದ ದೇಶದ ಜನತೆ ಅತ್ಯಂತ ಅಮಾನವೀಯ ನೋವುಗಳನ್ನು ಸಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಸಂವಿಧಾನ ಹತ್ಯಾ ದಿವಸ್‌ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಅಂಬಾನಿ ಮಗನ ಮದುವೆಯಲ್ಲಿ ಭಾಗಿಯಾದ ಯಶ್ ರಾಧಿಕಾ ಪಂಡಿತ್, ನಟ ಕೂದಲಿಗೆ ಕತ್ತರಿ ಹಾಕಿದ್ದು ರಿವೀಲ್!

ಈ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೇಳಲಾಗದ ನೋವು, ಕಿರುಕುಳ ಅನುಭವಿಸಿ ಪ್ರಜಾಪ್ರಭುತ್ವವನ್ನು ಮತ್ತೆ ಪುನರ್‌ ನಿರ್ಮಿಸಲು ಹೋರಾಡಿದ ಲಕ್ಷಾಂತರ ಆತ್ಮಗಳಿಗೆ ಮತ್ತು ಅವರನ್ನು ಗೌರವಿಸುವ ಉದ್ದೇಶದಿಂದ ಸಂವಿಧಾನ ಹತ್ಯಾ ದಿನ ಆಚರಿಸಲಾಗುವುದು.

ಈ ಮೂಲಕ ಭಾರತದ ಪ್ರತಿಯೊಬ್ಬ ಪ್ರಜೆಯ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯನ್ನು ಜೀವಂತವಾಗಿಡಲು ಅನುಕೂಲವಾಗಲಿದೆ. ಇದು ಕಾಂಗ್ರೆಸ್ ನ ಸರ್ವಾಧಿಕಾರ ಮತ್ತು ಭಯಾನಕ ಆಡಳಿತ ಮರುಕಳಿಸದಂತೆ ತಡೆಯುತ್ತದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕರ್ನಾಟಕಕ್ಕೆ ಶಿಫಾರಸು!

ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಜೂನ್ 25, 1975 ರಿಂದ ಮಾರ್ಚ್ 21, 1977 ರ ಅವಧಿಗಳ ಕಾಲ ಹೇರಲಾಗಿತ್ತು. ಆಂತರಿಕ ಮತ್ತು ಬಾಹ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಪ್ರಧಾನಿಯ ಸಲಹೆಯ ಮೇರೆಗೆ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ತುರ್ತು ಪರಿಸ್ಥಿತಿ ಅಂಗೀಕರಿಸಿದರು. ಈ ಸಮಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇಂದಿರಾ ಗಾಂಧಿ ತಮ್ಮ ಬಹುಪಾಲು ರಾಜಕೀಯ ವಿರೋಧಿಗಳನ್ನು ಜೈಲಿಗಟ್ಟಿದ್ದರು. ಈ ಸಮಯದಲ್ಲಿ ಮಾಧ್ಯಮಕ್ಕೆ ನಿರ್ಬಂಧ ಹೇರಲಾಗಿತ್ತು.


Scroll to load tweet…