Asianet Suvarna News Asianet Suvarna News

ಜಮ್ಮು ಕಾಶ್ಮೀರ ಸರ್ವಪಕ್ಷ ಜೊತೆ ಪ್ರಧಾನಿ ಮೋದಿ ಸಭೆ ; ಕಣಿವೆ ರಾಜ್ಯದಲ್ಲಿ ಬಿಗಿ ಬಂದೋಬಸ್ತ್!

  • ಪ್ರಧಾನಿ ಮೋದಿ ನಿವಾಸದಲ್ಲಿ ಮಹತ್ವದ ಸಭೆ ಆರಂಭ
  • ಜಮ್ಮು ಮತ್ತು ಕಾಶ್ಮೀರ ಸರ್ವ ಪಕ್ಷಗಳ ಮುಖಂಡರ ಜೊತೆ ಸಭೆ
  • ಕಣಿವೆ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ 
PM Narendra Modi Jammu and Kashmir all political parites meet underway official residence in New Delhi ckm
Author
Bengaluru, First Published Jun 24, 2021, 4:45 PM IST

ನವದೆಹಲಿ(ಜೂ.24):  ಜಮ್ಮು ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ಸ್ಥಾನಮಾನ ರದ್ದು ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ ಇದೀಗ ಮತ್ತೊಂದು ಮಹತ್ವದ ಬೆಳಣಿಗೆ ಆರಂಭಗೊಂಡಿದೆ. ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಮೊದಲ ಭಾರಿಗೆ ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ರಾಜಕೀಯ ಪಕ್ಷಗಳ ಸಭೆ ನಡೆಸಿದ್ದಾರೆ. ಈ ಮಹತ್ವದ ಸಭೆ ಆರಂಭಗೊಂಡಿದೆ.

"

PM Narendra Modi Jammu and Kashmir all political parites meet underway official residence in New Delhi ckm

ಗುರುವಾರದ ಸಭೆಯಲ್ಲಿ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಲನಕ್ಷೆ ಚರ್ಚೆ!.

ಪ್ರಧಾನಿ ಮೋದಿ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ,  ಜಮ್ಮ ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗರ್ವರನ್ ಮನೋಜ್ ಸಿನ್ಹ, ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಝಾಜ್, ಫಾರುಖ್ ಅಬ್ದುಲ್ಲಾ ಒಮರ್ ಅಬ್ದುಲ್ಲಾ, ಮುಫ್ತಿ ಮೊಹಮ್ಮದ್, ಜಮ್ಮು ಕಾಶ್ಮೀರದ ಬಿಜೆಪಿ ನಾಯಕರು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ 14 ರಾಜಕೀಯ ಪಕ್ಷಗಳ ಪ್ರಮುಖರು ಭಾಗವಹಿಸಿದ್ದಾರೆ. 

PM Narendra Modi Jammu and Kashmir all political parites meet underway official residence in New Delhi ckm

ಸಭೆ ಆರಂಭಗೊಂಡಿದ್ದು ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ, ವಿಧಾನ ಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಸೇರಿದಂತೆ ಹಲವು ವಿಚಾರಗಳ ಚರ್ಚೆಯಾಗಲಿದೆ. ಇದರ ನಡುವೆ ಫಾರುಖ್ ಅಬ್ದುಲ್ಲಾ ಸೇರಿದಂತೆ ಗುಪ್ಕರ್ ಮೈತ್ರಿ ಪಕ್ಷಗಳು, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮರಳಿ ನೀಡುವಂತೆ ಆಗ್ರಹಿಸುವುದಾಗಿ ಹೇಳಿದ್ದಾರೆ.

PM Narendra Modi Jammu and Kashmir all political parites meet underway official residence in New Delhi ckm

ಶ್ರೀನಗರ ಸೇರಿ ಕಾಶ್ಮೀರ ಕಣಿವೆಯ ಎಲ್ಲಾ 15 ರೈಲು ನಿಲ್ದಾಣದಲ್ಲಿ Wi-Fi ಸೇವೆ!

ಜಮ್ಮು ಮತ್ತು ಕಾಶ್ಮೀರ ನಾಯಕರು ಹಾಗೂ ಕಣಿವೆ ರಾಜ್ಯದ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳ ಕುರಿತು ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

Follow Us:
Download App:
  • android
  • ios