ವಿಮಾನ ದುರಂತ ಸಾವಿನ ಸಂಖ್ಯೆ 12ಕ್ಕೆ, ಪಿಣರಾಯಿ ಜತೆ ಮಾತನಾಡಿದ ಮೋದಿ
ಕೇರಳ ವಿಮಾನ ದುರಂತ/ ಪರಿಹಾರ ಕಾರ್ಯದ ಮಾಹಿತಿ ಪಡೆದ ಪ್ರಧಾನಿ ಮೋದಿ/ ಕೇರಳ ಸಿಎಂ ವಿಜಯನ್ ಅವರಿಂದ ವಿವರಣೆ/ 12ಕಕ್ಕೆ ಏರಿದ ಸಾವಿನ ಸಂಖ್ಯೆ
ನವದೆಹಲಿ/ ಕೇರಳ(ಆ.07) ಮಳೆ ಕಾರಣದಿಂದ ಕೇರಳದಲ್ಲಿ ವಿಮಾನ ದುರಂತ ಸಂಭವಿಸಿದ್ದು ಪರಿಹಾರ ಕಾರ್ಯ ನಡೆಯುತ್ತಿದೆ. ದುಬೈನಿಂದ ಕೋಯಿಕ್ಕೋಡ್‌ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಅಪಘಾತದ ವಿವರಣೆ ಪಡೆದಿದ್ದಾರೆ. ರಕ್ಷಣಾ ಕಾರ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಎರಡು ಹೋಳಾಗಿ ಬಿದ್ದ ಏರ್ ಇಂಡಿಯಾ ವಿಮಾನ
ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವುದಾಗಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ಸಹಾಯವಾಣಿ ನಂಬರ್ ಗಳನ್ನು ನೀಡಲಾಗಿದೆ(056 546 3903, 0543090572, 0543090572, 0543090575)
ದುರಂತದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಸಾವಿನ ಸಂಖ್ಯೆ 12ಕ್ಕೆ ಏರಿದೆ. ವಿಮಾನ ದುರಂತಕ್ಕೆಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆದಿಯಾಗಿ ಅನೇಕರು ಖೇದ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.