ನವದೆಹಲಿ, (ನ.09): ಜೆಎನ್‍ಯು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ನವೆಂಬರ್ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

 ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಗಾತ್ರದ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಅದನ್ನು ನ.12ರಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಟಿಸಲಿದ್ದಾರೆ ಎಂದು ವಿವಿ ಉಪಕುಲಪತಿ ಎಂ.ಜಗದೀಶ್‍ಕುಮಾರ್ ತಿಳಿಸಿದ್ದಾರೆ.

ಜೆಎನ್‌ಯು ಕನ್ನಡ ಪೀಠ ರದ್ದಿಲ್ಲ: ಸಚಿವ ರವಿ ಸ್ಪಷ್ಟನೆ

ನವೆಂಬರ್ 12 ರಂದು ಸಂಜೆ 6: 30 ಕ್ಕೆ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾದ ಸ್ವಾಮಿ ವಿವೇಕಾನಂದರ ಜೀವನ ಗಾತ್ರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ (ವಿಡಿಯೋ-ಕಾನ್ಫರೆನ್ಸ್ ಮೂಲಕ) ಅನಾವರಣಗೊಳಿಸಲಿದ್ದಾರೆ. ಪ್ರತಿಮೆಯ ಅನಾವರಣಕ್ಕೆ ಮುಂಚಿತವಾಗಿ ಸ್ವಾಮಿ ವಿವೇಕಾನಂದರ ಕಾರ್ಯಕ್ರಮ ನಡೆಯಲಿದೆ ಎಂದು ಉಪಕುಲಪತಿ ಟ್ವಿಟ್ಟರ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.