ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಿಒಕೆ ಮರುವಶ: ಅಮಿತ್ ಶಾ
ಈ ಬಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಾಕಿಸ್ತಾನದ ವಶದಲ್ಲಿರುವ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಹೈದರಾಬಾದ್ (ಮೇ.12): ಈ ಬಾರಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಪಾಕಿಸ್ತಾನದ ವಶದಲ್ಲಿರುವ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಲ್ಲದೆ, ‘ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂದು ಪಿಒಕೆ ಮೇಲಿನ ನಮ್ಮ ಹಕ್ಕು ಬಿಡಬೇಕೇ?’ ಎಂದು ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ರ್‍ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅಮಿತ್ ಶಾ, ‘ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎನ್ನುವ ಕಾರಣಕ್ಕೆ ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ತನ್ನ ಹಕ್ಕನ್ನು ಭಾರತ ಬಿಡಬೇಕು ಎಂದು ಕಾಂಗ್ರೆಸ್ ಬಯಸುತ್ತದೆ. ಆದರೆ ಈ ಬಗ್ಗೆ ಯಾರೂ ಭಯ ಪಡಬೇಕಿಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ಪ್ರತಿ ಇಂಚೂ ಭಾರತದ್ದು: ಅಮಿತ್ ಶಾ ಗುಡುಗು
ಬಳಿಕ ಪಾಕಿಸ್ತಾನದ ಗುಂಡಿನ ದಾಳಿಗೆ ನಾವು ಫಿರಂಗಿ ಮೂಲಕ ಪ್ರತ್ಯುತ್ತರ ನೀಡುತ್ತೇವೆ. ಪಿಒಕೆಯನ್ನು ಮರು ವಶಮಾಡಿಕೊಳ್ಳುತ್ತೇವೆ. ಈ ಹಿಂದೆ ವಾಜಪೇಯಿ ಅವರು ಪ್ರಧಾನಿಯಾಗಿದ್ದ ವೇಳೆ ಪೋಖ್ರಣ್‌ನಲ್ಲಿ ಪರಮಾಣು ಪರೀಕ್ಷೆ ನಡೆಸಿ ಭಾರತವನ್ನು ಪರಮಾಣು ಶಕ್ತಿಯುಳ್ಳ ದೇಶವನ್ನಾಗಿ ಮಾಡಿದ್ದರು’ ಎಂದು ನೆನಪಿಸಿದರು.
ಮೋದಿಯೇ ಪಿಎಂ: ಪ್ರಧಾನಿ ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ತುಂಬಲಿದ್ದು, ಪ್ರಧಾನಿ ಹುದ್ದೆಯನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಟ್ಟುಕೊಡಲಿದ್ದಾರೆ ಎಂಬ ಆಪ್ ನೇತಾರ ಅರವಿಂದ ಕೇಜ್ರಿವಾಲ್ ಹೇಳಿಕೆಯನ್ನು ಖುದ್ದು ಶಾ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ತಳ್ಳಿಹಾಕಿದ್ದಾರೆ. ‘ಮತ್ತೆ ಪೂರ್ಣಾವಧಿಗೆ ಮೋದಿಯೇ ಪ್ರಧಾನಿ’ ಎಂದು ಅವರಿಬ್ಬರೂ ಸ್ಪಷ್ಟಪಡಿಸಿದ್ದಾರೆ.
Lok Sabha Elections 2024: ಕಾಂಗ್ರೆಸ್ ಗೆದ್ದರೆ ಅಯೋಧ್ಯೆಗೆ ಬಾಬ್ರಿ ಬೀಗ: ಅಮಿತ್ ಶಾ ಗುಡುಗು
ಹೈದರಾಬಾದ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶಾ, ‘ಕೇಜ್ರಿವಾಲ್ ಅವರು ಬಿಜೆಪಿ ಗೆದ್ದರೆ ಅಮಿತ್ ಶಾ ಪ್ರಧಾನಿಯಾಗುತ್ತಾರೆ ಎಂದಿದ್ದಾರೆ. ಆದರೆ ಕೇಜ್ರಿವಾಲ್ ಆ್ಯಂಡ್ ಕಂಪನಿ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ನಾನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ (75 ವರ್ಷಕ್ಕೆ ನಿವೃತ್ತಿ) ಉಲ್ಲೇಖ ಇಲ್ಲ. ಮೋದಿಯವರು ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಪ್ರಧಾನಿ ಮೋದಿಯವರೇ ದೇಶವನ್ನು ಮುನ್ನಡೆಸುತ್ತಾರೆ, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ಸ್ಪಷ್ಟಪಡಿಸಿದರು.