ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ದಾಳಿ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನ ಹಂಚಿಕೊಂಡ ಸಚಿವ ಜಮೀರ್ ಅಹಮ್ಮದ್ ಖಾನ್ 

ಹೈದರಾಬಾದ್(ನ.23): ಹೈದರಾಬಾದ್‌ ನಗರದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತಂಗಿದ್ದ ಹೋಟೆಲ್‌ನಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆಲಂಗಾಣಕ್ಕೆ ತೆರಳಿದ್ದಾರೆ.

ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ತಂಗಿದ್ದರು. ಕಳೆದ ರಾತ್ರಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸಚಿವ ಜಮೀರ್‌ರಿಂದ ಸ್ಪೀಕರ್‌ ಸ್ಥಾನಕ್ಕೆ ಜಾತಿ ಬಣ್ಣ: ವಿಜಯೇಂದ್ರ ಆಕ್ರೋಶ

ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ದಾಳಿ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. 

ನಾನು ಉಳಿದುಕೊಂಡಿರುವ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ, ಏನು ಸಿಕ್ಕಿಲ್ಲ, ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಬರೆದುಕೊಂಡಿದ್ದಾರೆ.