ಮತ ಎಣಿಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸ್ಪಷ್ಟತೆ ಮತ್ತು ಪಾರದರ್ಶಕತೆ ತರುವ ಉದ್ದೇಶದಿಂದ ಚುನಾವಣಾ ಆಯೋಗವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ತಂದಿದೆ.
ನವದೆಹಲಿ: ಮತ ಎಣಿಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಸ್ಪಷ್ಟತೆ ಮತ್ತು ಪಾರದರ್ಶಕತೆ ತರುವ ಉದ್ದೇಶದಿಂದ ಚುನಾವಣಾ ಆಯೋಗವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ತಂದಿದೆ.
ಇದುವರೆಗೆ ಎಣಿಕೆಯ ದಿನದಂದು, ಅಂಚೆ ಮತಪತ್ರಗಳ ಎಣಿಕೆ ಬೆಳಿಗ್ಗೆ 8ಕ್ಕೆ ಮತ್ತು ಇವಿಎಂ ಮತಗಳ ಎಣಿಕೆ ಬೆಳಿಗ್ಗೆ 8:30ಕ್ಕೆ ಪ್ರಾರಂಭವಾಗುತ್ತಿತ್ತು. ಅಂಚೆ ಮತಗಳ ಎಣಿಕೆಯನ್ನು ಲೆಕ್ಕಿಸದೆ ಇವಿಎಂ ಎಣಿಕೆ ಮುಂದುವರಿಯುತ್ತಿತ್ತು. ಅಂಚೆ ಎಣಿಕೆ ಪೂರ್ಣಗೊಳ್ಳುವ ಮೊದಲೇ ಇವಿಎಂ ಎಣಿಕೆ ಪೂರ್ಣಗೊಳಿಸಬಹುದಾಗಿತ್ತು. ಆದರೆ ಈಗ ಆಯೋಗವು ಇವಿಎಂ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಪೂರ್ಣಗೊಳಿಸಲು ನಿರ್ಧರಿಸಿದೆ. ಅಂತಿಮ ಸುತ್ತಿನ ಇವಿಎಂ ಎಣಿಕೆ ಕೈಗೊಳ್ಳುವ ಮುನ್ನವೇ ಅಂಚೆ ಮತಪತ್ರಗಳ ಎಣಿಕೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ನಿಯಮ ಮೊದಲು ಜಾರಿಗೆ ಬರಲಿದೆ.
ಇವಿಎಂನಿಂದ ಗೆದ್ದ 136 ಸ್ಥಾನ ತ್ಯಜಿಸಿ ಎಲೆಕ್ಷನ್‌ಗೆ ಬನ್ನಿ : ಬಿಜೆಪಿ
ಬೆಂಗಳೂರು : ಇವಿಎಂ(ಮತಯಂತ್ರ) ಮುಖಾಂತರವೇ ಚುನಾಯಿತವಾದ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆಇದೀಗ ಅದೇ ಇವಿಎಂ ಬಗ್ಗೆ ಸಂಶಯ ಇದ್ದಲ್ಲಿ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಪ್ರತಿಪಕ್ಷ ಬಿಜೆಪಿ ಸವಾಲು ಎಸೆದಿದೆ. ಕೃತಕ ಬುದ್ಧಿಮತ್ತೆಯ ಈ ಕಾಲದಲ್ಲೂ ಕೃತಕ ಅಜ್ಞಾನದಿಂದ ಕೂಡಿದ ನಿರ್ಧಾರಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ ಕೈಗೊಂಡಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ತಿನ ಪ್ರತಿ ಪಕ್ಷದ ಮುಖ್ಯ ಸಚೇತಕ ಎನ್. ರವಿ ಕುಮಾರ್ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಯಂತ್ರ ಬದಿಗಿಟ್ಟು ಮತ ಪತ್ರ ಬಳಸುವ ಸಂಬಂಧ ಸಚಿವ ಸಂಪುಟ ಸಭೆ ಕೈಗೊಂಡ ನಿರ್ಣಯವನ್ನು ಬಲವಾಗಿ ಖಂಡಿಸಿದ್ದಾರೆ.
ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಇವಿಎಂ ಯಂತ್ರ ಬದಿಗಿಟ್ಟು ಮತ ಪತ್ರ ಬಳಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನವು ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣೀಕರಿಸಿದಂತಿದೆ ಎಂದು ವ್ಯಂಗ್ಯವಾಡಿದರು.
