ಕೋಮಾ ಸ್ಥಿತಿಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ| ಹೆಲ್ತ್ ಬುಲೆಟಿನ್‌ನಲ್ಲಿ ಮಾಇತಿ ನೀಡಿದ ಆಸ್ಪತ್ರೆ| ಮೆದುಳಿನ ಸರ್ಜರಿ ಬಳಿಕ ಮತ್ತಷ್ಟು ಬಿಗಡಾಯಿಸಿದ ಮಾಜಿ ರಾಷ್ಟ್ರಪತಿ ಆರೋಗ್ಯ

ನವದೆಹಲಲಿ(ಆ.23): ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೀರ್ಘ ಕೋಮಾಗೆ ಜಾರಿದ್ದಾರೆಂದು ದೆಹಲಿಯ ಸೇನಾ ರೆಫೆರಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಣಬ್, ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ..!

ಆಸ್ಪತ್ರೆ ಆಡಳಿತ ಮಂಡಳಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸುಧಾರಿಸಿಲ್ಲ. ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಹಳ್ಳಿಯ ಹಲಸು ಕೇಳಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ..!

 ಎರಡು ವಾರಗಳ ಹಿಂದಷ್ಟೇ ಮುಖರ್ಜಿಗೆ ಮೆದುಳು ಶಸ್ತ್ರ ಚಿಕಿತ್ಸೆ ನಡೆದಿತ್ತು. ಈ ಸರ್ಜರಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಆದರೆ ಇದಾದ ಬಿಕ ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡಲಾರಂಭಿಸಿದೆ. ಇನ್ನು ಸರ್ಜರಿಗೂ ಮುನ್ನ ನಡೆದಿದ್ದ ಕೊರೋನಾ ಪರೀಕ್ಷೆಯಲ್ಲಿ ಅರಿಗೆ ಸೊಂಕು ತಗುಲಿರುವುದು ದೃಢಪಟ್ಟಿತ್ತು