ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಗುರುವಾರ ಮಧ್ಯಾಹ್ನ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡು ಡೇರೆಗಳು ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸೆಕ್ಟರ್ 22 ರ ನಾಗೇಶ್ವರ ಪಂಂಡಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.

ಪ್ರಯಾಗರಾಜ್: ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಗುರುವಾರ(ಜ.30)ರಂದು ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಗೆಗೆ ಡೇರೆಗಳು ಸುಟ್ಟು ಬೂದಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

 ರಾಷ್ಟ್ರೀಯ ಮಾಧ್ಯಮ ವರದಿಯೊಂದರ ಪ್ರಕಾರ,ಮಹಾಕುಂಭ ಸೆಕ್ಟರ್ 22 ರ ಜುಸಿ ಪ್ರದೇಶದ ಛತ್ನಾಂಗ್ ಘಾಟ್ ಬಳಿಯಿರುವ ನಾಗೇಶ್ವರ ಪಂಂಡಲ್‌ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆ ದೂರದವರೆಗೆ ಕಾಣಿಸಿದೆ. ಅದೃಷ್ಟವಶಾತ್ ದುರ್ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಪೆಂಡಾಲ್‌ನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದಾರೆ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಇದನ್ನೂ ಓದಿ: Mahakumbh 2025: ಭಾರೀ ಅಗ್ನಿ ಅವಗಢ ತಪ್ಪಿಸಿದ ಯೋಗಿ ಆದಿತ್ಯನಾಥ್‌ ಸರ್ಕಾರದ ಮುಂಜಾಗ್ರತೆ!

ಕಳೆದ ವಾರವಷ್ಟೆ ಬೆಂಕಿ ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಸೆಕ್ಟರ್ 22ರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಭಕ್ತರು ಗಾಬರಿಪಡುವಂತಾಯಿತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.

ಮೌನಿ ಅಮಾವಾಸ್ಯೆ ನಿಮಿತ್ತ ಬುಧವಾರ ಅಂದರೆ ನಿನ್ನೆ ಕಾಲ್ತುಳಿತ ಉಂಟಾಗಿತ್ತು. ಘಟನೆಯಲ್ಲಿ 30 ಜನರು ಸಾವನ್ನಪ್ಪಿದರೆ, 60 ಜನರು ಗಾಯಗೊಂಡಿದ್ದಾರೆ. ಈ ದುರಂತ ನಡೆದ ಮರುದಿನವೇ ಎರಡನೇ ಬಾರಿ ಅಗ್ನಿ ಅವಗಢ ಸಂಭವಿಸಿದೆ. ಬೆಂಕಿ ಅವಘಡ ಸಂಭವಿಸಿದ ಸ್ಥಳದಲ್ಲಿ ಸಾರ್ವಜನಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆ ಸಂಭವಿಸುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಆಗಮನಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕಾರಣವೇನೆಂಬುದು ತಿಳಿದು ಬಂದಿಲ್ಲ.