Asianet Suvarna News Asianet Suvarna News

ಕೌರ್‌ ರಾಜೀನಾಮೆ ಅಂಗೀಕಾರ, ತೋಮರ್‌ಗೆ ಹೆಚ್ಚುವರಿ ಜವಾಬ್ದಾರಿ!

ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ವಿರೋಧ| ಎನ್‌ಡಿಎ ಅಂಗಪಕ್ಷ ಶಿರೋಮಣಿ ಅಕಾಲಿದಳದ ಸಚಿವೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ|  ಕೌರ್‌ ರಾಜೀನಾಮೆ ಅಂಗೀಕಾರ, ತೋಮರ್‌ಗೆ ಹೆಚ್ಚುವರಿ ಜವಾಬ್ದಾರಿ:

President accepts Harsimrat Kaur Badal resignation Narendra Singh Tomar assigned her portfolio pod
Author
Bangalore, First Published Sep 19, 2020, 12:55 PM IST
  • Facebook
  • Twitter
  • Whatsapp

ನವದೆಹಲಿ(ಸೆ.19): ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ಎನ್‌ಡಿಎ ಅಂಗಪಕ್ಷ ಶಿರೋಮಣಿ ಅಕಾಲಿದಳದ ಸಚಿವೆ ಹರ್‌ಸಿಮ್ರತ್‌ ಕೌರ್‌ ಅವರು ಕೇಂದ್ರ ಮಂತ್ರಿ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಶುಕ್ರವಾರ ಅಂಗೀಕರಿಸಿದ್ದಾರೆ. ಗುರುವಾರ ಕೌರ್‌ ಸಚಿವೆ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

‘ಪ್ರಧಾನಮಂತ್ರಿಗಳ ಸಲಹೆಯಂತೆ ರಾಷ್ಟ್ರಪತಿಗಳು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಹರ್‌ಸಿಮ್ರತ್‌ ಕೌರ್‌ ಬಾದಲ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹಾಗೆಯೇ ಸಂಪುಟ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಉಸ್ತುವಾರಿಯನ್ನು ವಹಿಸಬೇಕೆಂದು ನಿರ್ದೇಶಿಸಿದ್ದಾರೆ’ ಎಂದು ರಾಷ್ಟ್ರಪತಿ ಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ, ಯಾರಿಗೆ ಬೇಕಾದರೂ ಮಾರಲು ಅವಕಾಶ ಕಲ್ಪಿಸಲು ಅವಕಾಶ ನೀಡುವ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿನಲ್ಲಿ ಮಂಡಿಸಿತ್ತು. ಆದರೆ ಇದಕ್ಕೆ ಬಹುತೇಕ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

Follow Us:
Download App:
  • android
  • ios