* ಒಬಿಸಿ ಪಟ್ಟಿರಚಿಸುವ ಹಕ್ಕನ್ನು ಮರಳಿ ರಾಜ್ಯಗಳಿಗೆ ನೀಡುವ ಮಹತ್ವದ ಒಬಿಸಿ ಮಸೂದೆ* ಒಬಿಸಿ ಮಸೂದೆಗೆ ರಾಷ್ಟ್ರಪತಿ ಸಹಿ * 105ನೇ ಸಂವಿಧಾನ ತಿದ್ದುಪಡಿ ಕಾಯಿದೆ ಜಾರಿಗೆ

ನವದೆಹಲಿ(ಆ.21): ಒಬಿಸಿ ಪಟ್ಟಿರಚಿಸುವ ಹಕ್ಕನ್ನು ಮರಳಿ ರಾಜ್ಯಗಳಿಗೆ ನೀಡುವ ಮಹತ್ವದ ಒಬಿಸಿ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಈ ಮೂಲಕ 105ನೇ ಸಂವಿಧಾನ ತಿದ್ದುಪಡಿ ಕಾಯಿದೆ ಜಾರಿಗೆ ಬಂದಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳ ಬೆಂಬಲದೊಂದಿಗೆ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲೂ ಮಸೂದೆಗೆ ಒಪ್ಪಿಗೆ ಪಡೆದುಕೊಂಡಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದುಳಿದ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ಲೋಕಸಭೆಯಲ್ಲಿ ಈ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು.

ಆಗಸ್ಟ್‌ 11ರಂದು ಉಭಯ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದವು. ಈಗ ರಾಷ್ಟ್ರಪತಿ ಅಂಕಿತ ಹಾಕುವುದರೊಂದಿಗೆ ಇತರ ಹಿಂದುಳಿದ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ದೊರೆತಿದೆ.