ನವದೆಹಲಿ(ಏ.13): ಇಲ್ಲಿನ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

ಈ ಬಗ್ಗೆ ಟ್ವೀಟ್‌ ಮೂಲಕ ಮಾಹಿತಿ ತಿಳಿಸಿರುವ ಕೋವಿಂದ್‌ ಅವರು, ‘ಶಸ್ತ್ರಚಿಕಿತ್ಸೆಯ ಬಳಿಕ ಸೋಮವಾರ ರಾಷ್ಟ್ರಪತಿ ಭವನಕ್ಕೆ ಹಿಂದಿರುಗಿದ್ದೇನೆ. ನಿಮ್ಮೆಲ್ಲಾ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಹಾಗೆಯೇ ಅತಿಯಾದ ಕಾಳಜಿ ವಹಿಸಿದ ಏಮ್ಸ್‌ ಮತ್ತು ಸೇನಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳಿಗೂ ಧನ್ಯವಾದ’ ಎಂದು ತಿಳಿಸಿದ್ದಾರೆ.

75 ವರ್ಷದ ಕೋವಿಂದ್‌ ಅವರು ಮಾ.30ರಂದು ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.