ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ| ಎದೆ ನೋವಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಂದ್| ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಂದ್| ನಿನ್ನೆ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಂದ್

ನವದೆಹಲಿ(ಮಾ.26): ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಹೌದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ರಾಷ್ಟ್ರಪತಿ ಕೋವಿಂದ್‌ರವರು ಗುರುವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಎಂದಿನಂತೆ ಆರೊಗ್ಯ ಪರಿಶೀಲಿಸಿದ ವೈದ್ಯರು, ತೀವ್ರ ನಿಗಾ ವಹಿಸಿ ಚಿಕಿತ್ಸೆ ಆರಂಭಿಸಿದ್ದರು.

Scroll to load tweet…

ಇಂದು ಕೋವಿಂದ್ ಆರೋಗ್ಯ ಚೇತರಿಕೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ.