Asianet Suvarna News Asianet Suvarna News

President Election ಪ್ರಧಾನಿ ಮೋದಿ, ಮನ್‌ಮೋಹನ್ ಸಿಂಗ್, ಬೊಮ್ಮಾಯಿ ಸೇರಿ ಗಣ್ಯರಿಂದ ಮತಚಲಾವಣೆ!

  • 10 ಗಂಟೆಯಿಂದ ಆರಂಭಗೊಂಡಿರುವ ರಾಷ್ಟ್ರಪತಿ ಚುನಾವಣಾ ಮತದಾನ
  • ಸಂಜೆ 5 ಗಂಟೆವರೆಗೆ ಮತದಾನಕ್ಕೆ ಅವಕಾಶ, ಗಣ್ಯರಿಂದ ಮತದಾನ
  • ಕಣದಲ್ಲಿ ದ್ರೌಪದಿ ಮುರ್ಮು ಹಾಗೂ ಯಶವಂತ್ ಸಿನ್ಹ 
     
Presidential election 2022 PM Modi Manmohan singh Basavaraj bommai and other electors cast thier vote ckm
Author
Bengaluru, First Published Jul 18, 2022, 1:13 PM IST

ನವದೆಹಲಿ(ಜು.18): ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆ ಇಂದು ಬೆಳಗ್ಗೆ 10 ಗಂಟೆಯಿಂದ ಆರಂಭಗೊಂಡಿದೆ. ಆರಂಬಿಕ 2 ಗಂಟೆಯಲ್ಲಿ ಘಟಾನುಘಟಿ ನಾಯಕರು ಮತದಾನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಮನ್‌ಮೋಹನ್ ಸಿಂಗ್ ಸೇರಿದಂತೆ ಹಲವರು ಮತದಾನ ಮಾಡಿದ್ದಾರೆ. ಎನ್‌ಡಿ ಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಖಚಿತ ಎಂದು ಹೇಳಲಾಗುತ್ತಿದೆ. ಇತ್ತ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಭರವಸೆ ಕಳೆದುಕೊಂಡಿಲ್ಲ. ಸಂಜೆ 5 ಗಂಟೆ ವರೆಗೆ ಮತದಾನಕ್ಕೆ ಅವಕಾಶವಿದೆ. ಆರಂಭಿಕ 2 ಗಂಟೆಯಲ್ಲಿ 350ಕ್ಕೂ ಹೆಚ್ಚು ಜನಪ್ರತಿನಿಧಿಗಳು ಮತದಾನ ಮಾಡಿದ್ದಾರೆ.  ಜುಲೈ 21ಕ್ಕೆ ಮತ ಎಣಿಕೆ ನಡೆಯಲಿದೆ. ಇನ್ನು ನೂತನ ರಾಷ್ಟ್ರಪತಿ ಜುಲೈ 25ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವಧಿ ಜುಲೈ 24ಕ್ಕೆ ಅಂತ್ಯವಾಗಲಿದೆ. 

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತದಾನ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌದದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ  ದ್ರೌಪದಿ ಮುರ್ಮು ಭರ್ಜರಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.  ಎಲ್ಲಾ ಪಕ್ಷಗಳಿಂದ ದ್ರೌಪದಿ ಮುರ್ಮುಗೆ ಬೆಂಬಲ ವ್ಯಕ್ತವಾಗಿದೆ. ರಾಜ್ಯಪಾಲರಾಗಿ ಅತ್ಯತ್ತಮ ಸೇವೆ ಸಲ್ಲಿಸಿದ್ದಾರೆ. ಆದಿವಾಸಿ ಸಮುದಾಯದ ಮಹಿಳೆ ದೇಶದ ಅತ್ಯುನ್ನತ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವದ ಹಿರಿಮೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಜೆಪಿ ಸಂಸದೆ ಹೇಮಾ ಮಾಲಿನಿ ಸಂಸತಿನಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ್ದಾರೆ. ಹಿಮಾಚಲ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವರು ಮತದಾನ ಮಾಡಿದ್ದಾರೆ. ಗೋವಾ ಅಸೆಂಬ್ಲಿಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತದಾನ ಮಾಡಿದ್ದಾರೆ. ಇದೇ ವೇಳೆ ಗೋವಾದಿಂದ ಶೇಕಡಾ 100 ರಷ್ಟು ಮತದಾನವಾಗಲಿದೆ. ಎಲ್ಲರೂ ದ್ರೌಪದಿ ಮುರ್ಮು ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ.

 

 

presidential election 2022; ಮತಗಳು ಅಸಿಂಧು ಆಗದಂತೆ ರಾಜ್ಯ ಬಿಜೆಪಿ ಎಚ್ಚರಿಕೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಕೂಡ ರಾಷ್ಟ್ರಪತಿ ಚುನಾವಣೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಕ್ಕು ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವ ದೇಶ ಭಾರತ ಮತ್ತಷ್ಟು ಶಕ್ತಿಶಾಲಿಯಾಗಿ ಬೆಳೆಯಲಿದೆ.  ಭಗವಾನ್ ಶ್ರೀರಾಮನ ಆಶೀರ್ವಾದ ಇರಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕೋವಿಡ್‌ನಿಂದ ಆಸ್ಪತ್ರೆ ದಾಖಲಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಆಸ್ಪತ್ರೆಯಿಂದ ಬಿಡುಗಡೆಯಾದ ಸ್ಟಾಲಿನ್ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮಾಸ್ಕ್ ಧರಿಸಿ ಬಂದ ಸ್ಟಾಲಿನ್ ಮತದಾನ ಮಾಡಿದ್ದಾರೆ. ಇದೇ ವೇಳೆ ಕೋವಿಡ್ ಕುರಿತು ಜಾಕರೂಕರಾಗಿರುವಂತೆ ಮನವಿ ಮಾಡಿದ್ದಾರೆ.

President Election 2022: ಹೇಗೆ ನಡೆಯುತ್ತೆ ರಾಷ್ಟ್ರಪತಿ ಚುನಾವಣೆ, ಮತಗಳ ಮೌಲ್ಯ ಹೇಗೆ ನಿರ್ಧಾರವಾಗುತ್ತೆ?

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಕ್ಕು ಚಲಾಯಿಸಿದ್ದಾರೆ. ಪಟ್ನಾಯಕ್ ಈಗಾಗಲೇ ದ್ರೌಪದಿ ಮುರ್ಮುಗೆ ಬೆಂಬಲ ನೀಡಿದ್ದಾರೆ. ಇನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್,  ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಪ್ರಮುಖರು ಹಕ್ಕು ಚಲಾಯಿಸಿದ್ದಾರೆ.

Follow Us:
Download App:
  • android
  • ios